ರಾಯಚೂರು | ಸಂಗೀತ, ಚಿತ್ರಕಲಾ, ರಂಗಕಲಾ ಶಿಕ್ಷಕರ ನೇಮಕಾತಿಗೆ ಆಗ್ರಹ

Date:

ಸಂಗೀತ, ಚಿತ್ರಕಲಾ, ರಂಗಕಲಾ ಶಿಕ್ಷಕರ ನೇಮಕಾತಿಗಾಗಿ ಆಗ್ರಹಿಸಿ ಎಐಡಿವೈಒ ಸಂಘಟನೆಯ ಸದಸ್ಯರು ರಾಯಚೂರು ಜಿಲ್ಲೆ ಲಿಂಗಸೂಗೂರಿನಲ್ಲಿ ಪ್ರತಿಭಟನೆ ನಡೆಸಿ ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

- Advertisement -

ರಾಯಚೂರು ಜಿಲ್ಲಾಧ್ಯಕ್ಷ ಚನ್ನಬಸವ ಜಾನೇಕಲ್ ಅವರು ಮಾತನಾಡಿ, “ರಾಜ್ಯದಲ್ಲಿ ಒಟ್ಟು 5240 ಸರ್ಕಾರಿ ಪ್ರೌಢ ಶಾಲೆಗಳಿವೆ. ಅವುಗಳಲ್ಲಿ ಕೆಲಸ ಮಾಡುತ್ತಿರುವ ಈ ಎಲ್ಲ ಸಹಪಠ್ಯ ವಿಷಯಗಳ ಒಟ್ಟು ಬೋಧಕರ ಸಂಖ್ಯೆ 1500ನ್ನೂ ದಾಟುವುದಿಲ್ಲ. ಅದರಲ್ಲಿ ಅನೇಕರು ನಿವೃತ್ತಿಯ ಅಂಚಿನಲ್ಲಿದ್ದಾರೆ. ಇನ್ನೂ ಕೆಲವರನ್ನು ಕಡಿಮೆ ದಾಖಲಾತಿಯ ಕಾರಣಕ್ಕೆ ಬೇರೆ ಶಾಲೆಗಳಿಗೆ ವರ್ಗಾಯಿಸಲಾಗುತ್ತಿದೆ. ಪ್ರತಿ ಮಗುವಿಗೂ ಈ ವಿಷಯಗಳಲ್ಲಿ ಅರಿವು ತರಬೇತಿ ಬೇಕೆಂದ ಮೇಲೆ ಕಡಿಮೆ ದಾಖಲಾತಿಯ ಕಾರಣಕ್ಕೆ ಅಲ್ಲಿಂದ ಶಿಕ್ಷಕರನ್ನು ವರ್ಗಾಯಿಸುವ ಕ್ರಮವೇ ಅವೈಜ್ಞಾನಿಕವಾಗಿದೆ. ಇದರಿಂದಾಗಿ ರಾಜ್ಯದ ಬಹುತೇಕ ಶಾಲೆಗಳಲ್ಲಿಂದು ಈ ಸಹಪಠ್ಯ ವಿಷಯಗಳ ಬೋಧನೆಗೆ ಶಿಕ್ಷಕರೇ ಇಲ್ಲದಂತಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

“2008-09ನೇ ಸಾಲಿನಲ್ಲಿ ಸುಮಾರು 600ಕ್ಕೂ ಅಧಿಕ ಶಿಕ್ಷಕರನ್ನು ನೇಮಕಾತಿ ಮಾಡಿದ್ದು, ಬಿಟ್ಟರೆ ಈವರೆಗೆ ಈ ಶಿಕ್ಷಕರ ನೇಮಕಾತಿಗಳೇ ಆಗಿಲ್ಲ. ವಸತಿ ಶಾಲೆಗಳಿಗೆ 2022-23ರಲ್ಲಿ ಸುಮಾರು 1200 ಶಿಕ್ಷಕರ ನೇಮಕವಾಗಿದೆ. ರಾಜ್ಯದಲ್ಲಿ 2.58 ಲಕ್ಷ ಹುದ್ದೆಗಳು ಖಾಲಿ ಇವೆ. ಇನ್ನೂ ಬಹುತೇಕ ಶಾಲೆಗಳಿಗೆ ಈ ಶಿಕ್ಷಕರ ನೇಮಕಾತಿ ಆಗಬೇಕಿದೆ. ಶಿಕ್ಷಣವೆಂದರೆ ಕೇವಲ ಮೆದುಳಿಗೆ ಮಾಹಿತಿ ತುಂಬುವುದಲ್ಲ. ಬದಲಿಗೆ ಚಾರಿತ್ರ‍್ಯ ನಿರ್ಮಿಸುವುದು ಎಂದು ಸಾಕ್ರೆಟಿಸ್ ಹೇಳುತ್ತಾರೆ. ಅಂದರೆ ಮಕ್ಕಳಿಗೆ ಭಾಷೆ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನಗಳು ಮಾತ್ರವಲ್ಲದೇ ಸಂಗೀತ, ಚಿತ್ರಕಲೆ, ರಂಗಕಲೆ ಇವೇ ಮೊದಲಾದ ಲಲಿತ ಕಲೆಗಳೂ ಅವಶ್ಯಕವಾಗಿವೆ” ಎಂದು ಹೇಳಿದರು.

“ಆ ಮೂಲಕ ಮಾತ್ರವೇ ಪರಿಪೂರ್ಣ ವ್ಯಕ್ತಿತ್ವ ವಿಕಸನ ಸಾಧ್ಯ ಎಂದರು. ಮಕ್ಕಳ ಬೌದ್ಧಿಕ, ಮಾನಸಿಕ, ಭಾವನಾತ್ಮಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗೆ ಇವುಗಳು ತುಂಬಾ ಅವಶ್ಯಕ. ಇದನ್ನು ಗಂಭೀರವಾಗಿ ಪರಿಗಣಿಸಿಯೇ ನಮ್ಮ ಶಿಕ್ಷಣ ತಜ್ಞರು ಪ್ರೌಢಶಾಲಾ ಹಂತದಲ್ಲಿಯೇ ಮಕ್ಕಳಿಗೆ ಈ ಲಲಿತಕಲೆಗಳ ಅರಿವು ಮತ್ತು ತರಬೇತಿ ಸಿಗಲೆಂದು ಈ ಕಲೆಗಳಲ್ಲಿ ಪರಿಣಿತಿ ಹೊಂದಿದ ಶಿಕ್ಷಕರ ನೇಮಕಾತಿಗೆ ಶಿಫಾರಸು ಮಾಡಿದ್ದಾರೆ. ಈ ಹಿಂದಿನ ಅನೇಕ ಶಿಕ್ಷಣ ಆಯೋಗಗಳೂ ಕೂಡ ಈ ಅಂಶವನ್ನು ಎತ್ತಿಹಿಡಿದಿವೆ. ಆದ್ದರಿಂದ ಈ ಅಂಶವನ್ನು ಸರ್ಕಾರ ತುಂಬಾ ಗಂಭೀರವಾಗಿ ಪರಿಗಣಿಸಬೇಕು” ಎಂದು ಹೇಳಿದರು.

“ಕರ್ನಾಟಕದಲ್ಲಿ ನಿರುದ್ಯೋಗದ ಬೇಗೆಯಲ್ಲಿ ಬೇಯುತ್ತಿರುವ ಸಂಗೀತ, ಚಿತ್ರಕಲೆ ಮತ್ತು ರಂಗ ಕಲೆಗಳಲ್ಲಿ ಪದವಿ ಪಡೆದವರ ನೇಮಕಾತಿಗಾಗಿ ಕೂಡಲೇ ಅಧಿಸೂಚನೆಯನ್ನು ಹೊರಡಿಸಬೇಕು. ಕೂಡಲೇ ಖಾಲಿ ಇರುವ ಸಂಗೀತ, ಚಿತ್ರಕಲೆ, ರಂಗಕಲಾ ಶಿಕ್ಷಕರನ್ನು ಕೂಡಲೇ ಭರ್ತಿ ಮಾಡಬೇಕು. ಅಲ್ಪಸಂಖ್ಯಾತ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಮಾತ್ರವಲ್ಲದೇ ಉಳಿದ ಎಲ್ಲ ಸರ್ಕಾರಿ ಶಾಲೆಗಳಿಗೆ ಖಾಯಂ ಆಗಿ ಈ ಎಲ್ಲ ಸಹಪಠ್ಯ ವಿಷಯಗಳಿಗೆ ಶಿಕ್ಷಕರನ್ನು ಕೂಡಲೇ ನೇಮಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಬಾಲಕನಿಗೆ ಪೂರ್ಣ ಟಿಕೆಟ್‌; ಬಡ್ಡಿ ಸಮೇತ್‌ ಹಣ ಹಿಂದಿರುಗಿಸಲು ಕಂಡಕ್ಟರ್‌ಗೆ ಆದೇಶ

“ಕಡಿಮೆ ದಾಖಲಾತಿಯ ಕಾರಣಕ್ಕೆ ಈ ಹುದ್ದೆಗಳನ್ನು ರದ್ದುಪಡಿಸುವುದನ್ನು ನಿಲ್ಲಿಸಿ, ಎಲ್ಲ ಪ್ರೌಢ ಶಾಲೆಗಳಿಗೂ ಈ ವಿಷಯಗಳಿಗೆ ಖಾಯಂ ಶಿಕ್ಷಕರನ್ನು ನೇಮಕ ಮಾಡಬೇಕು” ಎಂದು ಒತ್ತಾಯಿಸಿದರು.

ಈ ವೇಳೆ ಜಿಲ್ಲಾ ಉಪಾಧ್ಯಕ್ಷ ತಿರುಪತಿ ಗೋನವಾರ, ಯಲ್ಲಪ್ಪ ದೊರೆ, ಬಾಲಾಜಿ ಸಿಂಗ್, ಶಂಕರ ಜಾದವ್, ಎಸ್ ಬಿ ಚರ್ಕಿ, ಮೀನಾಕ್ಷಿ, ದಿವ್ಯಾನಾಗಪ್ಪ, ಬದ್ರಿನಾಥ, ಚಂದ್ರು ಸೇರಿದಂತೆ ಇತರರು ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...