ರಾಯಚೂರು | ಸರ್ಕಾರಿ ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹ

Date:

ರಾಯಚೂರು ಜಿಲ್ಲೆಯಲ್ಲಿ ಸರ್ಕಾರಿ ಇಎಸ್‌ಐ ಆಸ್ಪತ್ರೆಯನ್ನು ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿದೆ.

- Advertisement -

ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾರ್ಮಿಕರಿದ್ದು, ಕಾರ್ಮಿಕರಿಗೆ ಸೂಕ್ತ ಚಿಕಿತ್ಸೆಗಾಗಿ ಜಿಲ್ಲೆಯಲ್ಲಿ ಇಎಸ್‌ಐ ಆಸ್ಪತ್ರೆ ಇಲ್ಲ. ಜಿಲ್ಲೆಯಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಮತ್ತು ವಿವಿಧ ಖಾಸಗಿ ಸಂಸ್ಥೆಗಳಲ್ಲಿ ಹಾಗೂ ಕಟ್ಟಡ ಕಾರ್ಮಿಕ ಕ್ಷೇತ್ರ ಸೇರಿದಂತೆ ಇನ್ನಿತೆ ವಲಯಗಳಲ್ಲಿ ಕಾರ್ಮಿಕರಿಂದ ಕೋಟ್ಯಾಂತರ ರೂ. ಹಣ ರಾಜ್ಯ ಕಾರ್ಮಿಕ ವಿಮಾ ನಿಗಮಕ್ಕೆ ಸಂದಾಯವಾಗುತ್ತಿದೆ. ಆದರೆ ಕಾರ್ಮಿಕರುವ ಪಾವತಿಸುವ ಹಣಕ್ಕೆ ಸರಿಯಾದ ಚಿಕಿತ್ಸೆ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಕಾರ್ಮಿಕರ ಚಿಕಿತ್ಸೆಗಾಗಿ ಪರದಾಡುತ್ತಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಹಣ ನೀಡಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ, ಕಟ್ಟದ ವಿಮಾ ಕಂತುಗಳನ್ನು ಯಾವ ಪ್ರಯೋಜನೆ ಇಲ್ಲದಂತಾ ಗಿದೆ, ಜಿಲ್ಲೆಯಲ್ಲಿ ಇಎಸ್‌ಐ ಆಸ್ಪತ್ರೆ ಇದ್ದು, ಅಲ್ಲಿ ಚಿಕಿತ್ಸೆ ಇಲ್ಲದಂತಾಗಿದೆ, ಕಾರ್ಮಿಕರು ರಿಮ್ಸ್ ಹಾಗೂ ಇನ್ನಿತರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯು ತ್ತಿದ್ದಾರೆ. ಕಾರ್ಮಿಕರ ವೇತನದಲ್ಲಿ ಪ್ರತಿ ತಿಂಗಳು ಹಣ ಸಂಗ್ರಹಿಸುತ್ತಿದ್ದು, ಕಾರ್ಮಿಕರಿಗೆ ಸಮರ್ಪಕವಾಗಿ ಗುಣಮಟ್ಟದ ಚಿಕಿತ್ಸೆ ಸಿಗುತ್ತಿಲ್ಲ. ಕಾರ್ಮಿಕರ ಆರೋಗ್ಯದ ಹಿತದೃಷ್ಠಿಯಿಂದ ಜಿಲ್ಲೆಯಲ್ಲಿ ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಬೇಕು” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಲಕ್ಷ್ಮಣ ಕುರ್ಡಿ, ಚನ್ನಬಸವ ಯಕ್ಲಾಸಪೂರ, ಜಿಲ್ಲಾ ಸಂಘಟನಾ ಸಂಚಾಲಕ ಶರಣಪ್ಪ ದಿನ್ನಿ, ಪ್ರಕಾಶ ಸಿರವಾರ, ಅನಿತ್ ಸಿಂಗ್ ಸೇರಿದಂತೆ ಇತರರು ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...