ರಾಯಚೂರು | ಬರ ಪರಿಹಾರ, ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ: ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ

Date:

ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಗೆ ಸೂಕ್ತ ಪರಿಹಾರ ಒದಗಿಸಬೇಕು, ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಜೆಡಿಎಸ್ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನಾ ಧರಣಿ ನಡೆಸಲಾಯಿತು.

- Advertisement -

ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡಿದ್ದರೂ ರೈತರಿಗೆ ಸಮರ್ಪಕ ಪರಿಹಾರ ನೀಡುತ್ತಿಲ್ಲ ಎಂದು ಆರೋಪಿಸಿ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತರ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವಷ್ಟು ವಿದ್ಯುತ್ ಪೂರೈಕೆ ಮಾಡದ ಜೆಸ್ಕಾಂ ಇಲಾಖೆಯ ವಿರುದ್ಧವೂ ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದೇವದುರ್ಗ ಶಾಸಕಿ ಕರೆಮ್ಮ ಜಿ.ನಾಯಕ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ವಿಫಲವಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ನಷ್ಟದಿಂದ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ 2,500 ಪರಿಹಾರ ನೀಡುವುದಾಗಿ ಘೋಷಿಸಿರುವುದು ಖಂಡನೀಯ, ರೈತರು ಅನುಭವಿಸಿರುವ ನಷ್ಟಕ್ಕೆ ಈ ಮೊತ್ತ ಯಾವುದೇ ರೀತಿಯಲ್ಲೂ ಸಾಕಾಗುವುದಿಲ್ಲ. ಆದ್ದರಿಂದ ಮುಂಗಾರು ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಎಕರೆಗೆ 25 ಸಾವಿರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಜನರಿಗೆ 150 ದಿನಗಳ ಕೆಲಸ ಒದಗಿಸಬೇಕು. ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಸಮರ್ಪಕವಾಗಿ 12 ಗಂಟೆಗಳ ವಿದ್ಯುತ್ ಪೂರೈಕೆ ಮಾಡಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಈ ಹಿಂದೆ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರೈತರ ಬೆಳೆ ಸಾಲ ಮನ್ನಾ ಮಾಡಿರುವ ಉದಾಹರಣೆ ಇದೆ. ಆದೇ ಮಾದರಿಯಲ್ಲಿ ಕಾಂಗ್ರೆಸ್ ಸರ್ಕಾರವೂ ರೈತರ ಸಂಕಷ್ಟವನ್ನು ಪರಿಗಣಿಸಿ ಸಂಪೂರ್ಣ ಸಾಲ ಮನ್ನಾ ಮಾಡುವ ಮೂಲಕ ರೈತರಿಗೆ ನೆರವಾಗಬೇಕು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಪ್ರತಿಭಟನೆಯಲ್ಲಿ ಮಾಜಿ ಶಾಸಕರು ರಾಜಾವೆಂಕಟನಾಡಗೌಡ, ಜೆಡಿಎಸ್ ಮುಖಂಡ ವಿರೂಪಾಕ್ಷಪ್ಪ, ಗೌರಿ ಕರೆಮ್ಮ ಹಾಗೂ ಕಾರ್ಯಕರ್ತರು ಇನ್ನಿತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ನೂತನ ಜಿಲ್ಲಾಸ್ಪತ್ರೆ ಸಿದ್ಧ, ಉದ್ಘಾಟನೆಗೆ ಮೀನಮೇಷ, ಹೋರಾಟದ ಎಚ್ಚರಿಕೆ

ಹಲವು ವರ್ಷಗಳ ನಿರೀಕ್ಷೆಯ ಬಳಿಕ ನಿರ್ಮಾಣಗೊಂಡಿರುವ ಉಡುಪಿ ನೂತನ ಜಿಲ್ಲಾ ಆಸ್ಪತ್ರೆ...

ವಿಜಯಪುರ | ಜನಗಣತಿಯಲ್ಲಿ 21 ವಿಧದ ಅಂಗವೈಕಲ್ಯ ದಾಖಲಿಸಲು ಆಗ್ರಹ

2027ರ ಜನಗಣತಿಯಲ್ಲಿ ಅಂಗವಿಕಲರ ನಿಖರ ಸಂಖ್ಯೆ ಮಾತ್ರವಲ್ಲದೆ, ಅಂಗವಿಕಲರ ಹಕ್ಕುಗಳ ಕಾಯ್ದೆ-2016ರಡಿ...

ಎಂಆರ್‌ಪಿಎಲ್ ಸ್ಫೋಟದ ಹಾನಿಯು ಕಂಪೆನಿ ಹೇಳುತ್ತಿರುವುದಕ್ಕಿಂತ ಹಲವು ಪಟ್ಟು ಗಂಭೀರವಾಗಿದೆ: ಸಿಪಿಐಎಂ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ...