ರಾಯಚೂರು | ಬರಗಾಲ ಪರಿಹಾರಕ್ಕೆ ಆಗ್ರಹ: ಸೆ.28ರಂದು ಡಿಸಿ ಕಚೇರಿ ಮುಂದೆ ರೈತರ ಪ್ರತಿಭಟನೆ

Date:

ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಗಾಲವನ್ನು ಎದುರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಜಕೀಯ ಬದಿಗಿಟ್ಟು ಮಾನವೀಯ ನೆಲೆಯಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆ.28ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್ ತಿಳಿಸಿದರು.

- Advertisement -

ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡಿದೆ. ಹೊರತು ಬೇರೆ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ರೈತರಿಗೆ 2500 ರೂ ಹಣ ನೇರ ಪಾವತಿ ಮಾಡಲು ಹೊರಟಿದೆ. ಆದರೆ ಈ ಹಣ ಯಾವುದಕ್ಕೂ ಸಾಲುವುದಿಲ್ಲ. ಕೂಲಿ ಕೆಲಸ ಮಾಡದಿವರಿಗೂ ಒಂದು ದಿನ ಹಣವೂ ಸಾಲುವುದಿಲ್ಲ. ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಗಾಲ ಎದುರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಾಜಕೀಯ ಬಿಟ್ಟು ಮಾನವೀಯ ನೆಲೆಯಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್‌; ಸ್ವಾಗತಕ್ಕೆ ಖುದ್ದು...

ಬರೋಬ್ಬರಿ 11 ವರ್ಷಗಳ ಬಳಿಕ ಅಮೆರಿಕಕ್ಕೆ ಕಾಲಿಟ್ಟಿರುವ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರನ್ನು ಖುದ್ದು ತೆರಳಿ ಸ್ವಾಗತಿಸಿದ ಟ್ರಂಪ್‌, ಶ್ವೇತಭವನದಲ್ಲಿ ಅದ್ದೂರಿ ಸರ್ಕಾರಿ ಔತಣ ಆಯೋಜಿಸಿದ್ದಾರೆ. AI, ಅತ್ಯಾಧುನಿಕ ಚಿಪ್‌ಗಳು, ರೇರ್‌...

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರ ಎದುರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮಾನ ಹೊಣೆಗಾರರಾಗಿದ್ದು, ಹೊಣೆಗಾರಿಕೆ ತಪ್ಪಿಸಲು ಪ್ರಯತ್ನಿಸಬಾರದು. ರಾಜ್ಯದ ಸಂಸದರು ಕೇಂದ್ರದ ಮೇಲೆ ಒತ್ತಡ ಹಾಕುವ ಕೆಲಸ ಮಾಡಬೇಕು. ರಾಜ್ಯದ ಯಾರೊಬ್ಬ ಸಂಸದರೂ ಬರದ ಕುರಿತು ಮಾತನಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಬರ ನಿರ್ವಹಣೆಗೆ ಆರ್ಥಿಕ ಸಮಸ್ಯೆ ಕಾರಣವಾಗಿದ್ದರೆ ಶ್ರೀಮಂತರ ನೆರವು ಪಡೆಯಬೇಕು. 2009 ರಲ್ಲಿ ನೆರ ಹಾವಳಿ ಬಂದಾಗ ಖಾಸಗಿಯವರ ನೆರವು ಪಡೆದು ಬಿ.ಎಸ್.ಯಡಿಯೂರಪ್ಪ ಮನೆಗಳನ್ನುನಿರ್ಮಿಸಿಕೊಟ್ಟಿದ್ದರು. ಅದೇ ರೀತಿ ಪ್ರಧಾನಿ ಹಾಗೂ ಮುಖ್ಯಮಂತ್ರಿಗಳು ಖಾಸಗಿಯವರ ಆರ್ಥಿಕ ನೆರವು ಪಡೆದಾದರು ರೈತರ ಬೆಳೆ ಸಾಲ ಸಂಪೂರ್ಣ ಮನ್ನಾ ಮಾಡುವದು, ಬೆಳೆ ನಷ್ಟ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕಿದೆ.

ರಾಜ್ಯದಲ್ಲಿ ಜನರಿಗೆ ಕುಡಿಯುವ ನೀರು ಕೊರತೆಯಿರುವಾಗ ರೈತರ ಜಮೀನಿಗೆ ನೀರು ಬಾದೇ ಇರುವಾಗ ನಾರಾಯಣಪುರ ಜಲಾಶಯದಿಂದ ತೆಲಂಗಾಣಕ್ಕೆ ನೀರು ಹರಿಸಲಾಗಿದೆ. ತುಂಗಭದ್ರ ನದಿಯಿಂದಲೂ ಆಂದ್ರಕ್ಕೆ ನೀರು ಹರಿಸಲಾಗುತ್ತಿದೆ. ಸರ್ಕಾರಗಳು, ಜಿಲ್ಲೆಯ ಜನಪ್ರತಿನಿಧಿಗಳು ಮೌನ ರೈತರಿಗೆ ಮಾಡಿದ ದ್ರೋಹ ಎಂದರು.

ಬರ ನಿರ್ವಹಣೆಗೆ ಹಣವಿಲ್ಲ ಎಂದು ಹೇಳುವ ರಾಜ್ಯ ಸರ್ಕಾರ ದಸರ ಹಬ್ಬ ಆಚರಣೆಗೆ ನೂರಾರು ಕೋಟಿ ಖರ್ಚು ಮಾಡಲು ಹೊರಟಿದೆ. ಕಂಬಳ ಕ್ರೀಡೆ ನಡೆಸಲು ಹಣ ನೀಡುವದಾಗಿ ಹೇಳುವ ಮುಖ್ಯಮಂತ್ರಿಗಳು ರೈತರ ಬೆಳೆ ಪರಿಹಾರಕ್ಕೆ ಹಣವಿಲ್ಲ ಎಂದು ಹೇಳುತ್ತಿರುವದು ವಿಪರ್ಯಾಸ. ಜೋಳ ಖರೀದಿಸಿದ ರೈತರಿಗೆ 109 ಕೋಟಿ ರೂ ಹಣ ಇಂದಿಗೂ ಬಾಕಿಯಿದೆ. ಕೇಂದ್ರ ಹಣ ಬಿಡುಗಡೆ ಮಾಡಿಲ್ಲ ಎಂದು ಹೇಳುವ ಜನಪ್ರತಿನಿಧಿಗಳು ಕೇಂದ್ರದ ಮೇಲೆ ಒತ್ತಡ ಹಾಕುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತುಂಗಭದ್ರ ಎಡದಂಡೆ ಕಾಲುವೆ ಕೊನೆಭಾಗಕ್ಕೆ ನೀರು ಹರಿಸಿದರೆ ಅಕ್ರಮ ನೀರಾವರಿ ಮಾತನಾಡದ ಸಿಂಧನೂರು ಹಾಲಿ, ಮಾಜಿ ಶಾಸಕರುಗಳು ಪ್ರತಿಭಟನೆ ಮಾಡುತ್ತಿದೆ. ಅಕ್ರಮ ನೀರಾವರಿ ಕುರಿತು ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು. ತುಂಗಭದ್ರ ಅಚ್ಚುಕಟ್ಟಿನ ಅಕ್ರಮ ನೀರಾವರಿ ತಡೆಯಲು ಜಲಸಂಪನ್ಮೂಲ ಸಚಿವ ಬಳಿ ನಿಯೋಗ ತೆರಳುವದಾಗಿ ಹೇಳಿದರು. ಮುಖ್ಯಮಂತ್ರಿಗಳಿಗೆ ಕಲ್ಬುರ್ಗಿಯಲ್ಲಿ ಮನವಿ ಸಲ್ಲಿಸಲಾಗಿದೆ ಅಕ್ರಮ ನೀರಾವರಿ ತಡೆಯಲು ಕಾಯ್ದೆ ಜಾರಿಗೊಳಿಸಲು ಒತ್ತಾಯಿಸುವುದಾಗಿ ಹೇಳಿದರು.

ರಾಜ್ಯದಲ್ಲಿ ವಿದ್ಯುತ್ ಕೊರತೆ ಗಂಬೀರವಾಗಿದೆ. ರಾಜ್ಯ ಸರ್ಕಾರ ನೆರೆ ರಾಜ್ಯಗಳಿಂದ ವಿದ್ಯುತ್ ಖರೀಧಿಸಿಯಾದರೂ 12 ತಾಸು ವಿದ್ಯುತ್ ಪೂರೈಸಬೇಕು. ಮಳೆಯಿಲ್ಲ. ಬೆಳೆಗೆ ನೀರಿಲ್ಲದೇ ಮತ್ತೊಂದು ಸಮಸ್ಯೆಯಾಗುತ್ತಿರುವದನ್ನು ಗಂಬೀರವಾಗಿ ಪರಿಗಣಿಸಬೇಕು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸೆ.28 ರಂದು ಡಿಸಿ ಕಚೇರಿ ಮುಂದೆ ರೈತರ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಒತ್ತಾಯ

ಈ ಸಂದರ್ಬದಲ್ಲಿ ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್ ಇಂಗಳದಾಳ, ಬೂದೆಯ್ಯಸ್ವಾಮಿ, ದೇವರಾಜ ನಾಯಕ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಜ್ಯೂನಿಯರ್ಸ್‌ ಮೇಲೆ ಕ್ರೂರ ರ‍್ಯಾಂಗಿಂಗ್; 9 ಮಂದಿ ವಿರುದ್ಧ ಎಫ್‌ಐಆರ್

ಮಂಗಳೂರು ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾನಿಲಯದ ಪ್ರಥಮ ವರ್ಷದ ಬಿಬಿಎ ...

ಬೀಳಗಿ| ಅನಗವಾಡಿಗೆ 110 ಕೆ.ವಿ. ವಿದ್ಯುತ್ ಸ್ಟೇಷನ್ ಮಂಜೂರು ಮಾಡಲು ರೈತರ ಒತ್ತಾಯ

ಅನಗವಾಡಿ ಗ್ರಾಮದ ಕೆರೆಗೆ ಒಂದು ವಾರದೊಳಗೆ ನೀರು ತುಂಬಿಸುವುದು, ಕೃಷಿ ಪಂಪ್‌ಸೆಟ್‌ಗಳಿಗೆ...

ವಿಜಯಪುರ | ಸಮಾನತೆ ಮಾತು, ಘೋಷಣೆಗೆ ಸೀಮಿತವಾಗದಿರಲಿ: ಪ್ರೊ. ವಿಜಯಾ ಬಿ. ಕೋರಿಶೆಟ್ಟಿ

ಮಹಿಳೆಯರ ಧ್ವನಿಯನ್ನು ನಿರ್ಲಕ್ಷಿಸಿದಾಗ ಅದನ್ನು ಸಮಾಜದ ಗಮನಕ್ಕೆ ತರುವುದು ನಮ್ಮೆಲ್ಲರ ಕರ್ತವ್ಯ....

ಧಾರವಾಡ | ಸೆ.27ಕ್ಕೆ ಭಾರತಿ ನಗರದಲ್ಲಿ ಉದ್ಯಾನವನ ಉದ್ಘಾಟನೆ

ಭಾರತಿ ನಗರ ನಿವಾಸಿಗಳ ಅಭಿವೃದ್ಧಿ ಸಂಘವು ರೋಟರಿ ಕ್ಲಬ್​ ಆಫ್​ ಧಾರವಾಡ...