ರಾಯಚೂರು | ಯರಮರಸ್ ವಿದ್ಯುತ್ ಘಟಕ ಭೂ ಸಂತ್ರಸ್ಥರಿಗೆ ಉದ್ಯೋಗ ನೀಡಲು ಆಗ್ರಹ

Date:

ಯರಮರಸ್ ವಿದ್ಯುತ್ ಘಟಕಕ್ಕೆ ಭೂಮಿ ಕಳೆದುಕೊಂಡ ಭೂ ಸಂತ್ರಸ್ಥರಿಗೆ ಉದ್ಯೋಗ ನೀಡದೇ ಅನ್ಯಾಯವಾಗುತ್ತಿದ್ದು ಷರತ್ತುಗಳನ್ನು ಸಡಿಲಿಸಿ ಉದ್ಯೋಗ ನೀಡಬೇಕು. ಇಲ್ಲದೇ ಹೋದಲ್ಲಿ ಭೂ ಸಂತ್ರಸ್ಥರು ಬೀದಿಗಳಿದು ಧರಣಿ ನಡೆಸಬೇಕಾಗುತ್ತದೆ ಎಂದು ರಾಯಚೂರು ಕೈಗಾರಿಕಾ ಪ್ರದೇಶ ಭೂ ಸಂತ್ರಸ್ಥರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಕೆೆ.ಸತ್ಯನಾರಾಯಣ ಹೇಳಿದರು.

- Advertisement -

ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ಭೂಮಿ ಕಳೆದುಕೊಂಡ 33 ಕುಟುಂಬಗಳಿಗೆ ಉದ್ಯೋಗ ನೀಡುವದಾಗಿ ಕಳೆದ 10 ವರ್ಷಗಳಿಂದ ಸರ್ಕಾರ ಭರವಸೆ ನೀಡುತ್ತಲೇ ಬಂದಿದೆ. 2012 ರಲ್ಲಿ ಭೂ ಸ್ವಾಧೀನಪಡಿಸಿಕೊಂಡಿದ್ದು, ಇಂದಿಗೂ ಉದ್ಯೋಗ ನೀಡುವ ಭರವಸೆ ಸಾಕಾರಗೊಂಡಿಲ್ಲ. ಅನೇಕ ಬಾರಿ ರಾಜ್ಯದ ಮುಖ್ಯಮಂತ್ರಿಗಳು, ಕೆಪಿಸಿ ವ್ಯವಸ್ಥಾಪಕ ನಿರ್ದೇಶಕರು, ಇಂಧನ ಸಚಿವರುಗಳು ಒಳಗೊಂಡಂತೆ ಅನೇಕ ಬಾರಿ ಮನವಿ ನೀಡಿದ್ದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಭೂ ಸಂತ್ರಸ್ಥರ ಕುಟುಂಬಗಳಲ್ಲಿ ಕಲಹ ಉಂಟಾಗಿ ನ್ಯಾಯಾಲಯಕ್ಕೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಮೂರು ವರ್ಷದ ಭೂ ಒಡೆತನ ಇಲ್ಲ ಎಂದು ಹೇಳಿ ಉದ್ಯೋಗ ನೀಡಲು ವಿಳಂಭ ಮಾಡಲಾಗುತ್ತಿದೆ. ಅನೇಕ ಅರ್ಹ ಸಂತ್ರಸ್ಥರು ಉದ್ಯೋಗ ದೊರೆಯುವ ವಿಶ್ವಾಸದಲ್ಲಿದ್ದು ಸರ್ಕಾರ ಕೂಡಲೇ ಸ್ಪಂದಿಸಬೇಕು.ಇಲ್ಲದೇ ಹೋದಲ್ಲಿ ಹೋರಾಟ ಅನಿವಾರ್ಯವಾಗುತ್ತದೆ. ಭೂ ಸ್ವಾಧೀನ ಮಾಡಿಕೊಳ್ಳುವಾಗ ಯಾವುದೇ ಷರತ್ತುಗಳನ್ನು ನೀಡದೇ ಭೂಮಿ ಪಡೆದ ಕೆಪಿಸಿ ಈಗ ಷರತ್ತು ವಿಧಿಸುತ್ತಿದೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ನಾರಾಯಣಪುರ ಬಲದಂಡೆ ಕಾಲುವೆಗೆ ನೀರು ಹರಿಸದ ಅಧಿಕಾರಿಗಳ ವಿರುದ್ಧ ಅ.2ರಂದು ರೈತರಿಂದ ಮುತ್ತಿಗೆ

ಈ ಸಂದರ್ಬದಲ್ಲಿ ಸಂಘದ ಕಾರ್ಯದರ್ಶಿ ಪ್ರಭು ಮಡಿವಾಳ, ಭೀಮಣ್ಣಗೌಡ, ಶರಣಪ್ಪಗೌಡ, ರಾಘವೇಂದ್ರ ಸಾಗರ, ತಿಮ್ಮಪ್ಪ ವಡ್ಡೆಪಲ್ಲಿ, ತಿಮ್ಮಪ್ಪ, ವಿಠೋಬ, ಬಸವಪ್ರಕಾಶ ರೆಡ್ಡಿ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತ–ಜಪಾನ್ ತಂತ್ರಜ್ಞಾನ ಸಹಕಾರದಿಂದ ಹೊಸ ಉದ್ಯಮ ಅವಕಾಶ: ನವತಾ ಹಿರೋಷಿ

ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್...

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ...

ಉಡುಪಿ | ಹಿರಿಯ ನಾಗರಿಕರನ್ನು ಗೌರವಯುತವಾಗಿ ನೋಡಿಕೊಳ್ಳಿ: ಎಂ.ಎ. ಗಫೂರ್

ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನಮಾನ ಹೊಂದಿದ್ದು, ಅವರನ್ನು ಗೌರವಯುತವಾಗಿ...

ಎಂಆರ್‌ಪಿಎಲ್ ದುರಂತ: ಮೃತ ಮನೀಶ್ ಕುಟುಂಬಕ್ಕೆ ₹1.20 ಕೋಟಿ ಪರಿಹಾರ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟ...