ರಾಯಚೂರು | ಎಸ್‌ಬಿಐನಲ್ಲಿ ಪ್ರತ್ಯೇಕ ನಗದು ಕೌಂಟರ್‌ ತೆರೆಯುವಂತೆ ಆಗ್ರಹ

Date:

Advertisements

ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಚೇರಿಯಲ್ಲಿ ಮಸ್ಕಿ ಗ್ರಾಹಕರಿಗೆ ಪ್ರತ್ಯೇಕ ನಗದು ಕೌಂಟರ್  ತೆರೆಯಬೇಕೆಂದು ಒತ್ತಾಯಿಸಿ ಬ್ಯಾಂಕ್ ವ್ಯವಸ್ಥಾಪಕ ಸುಶೀಲ್ ಉತ್ತಮ್ ಅವರಿಗೆ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಸಂಸ್ಥೆ ಮನವಿ ಸಲ್ಲಿಸಿದೆ.

“ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದ ಬೀದರ್-ಶ್ರೀರಂಗಪಟ್ಟಣ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಎನ್ ಎಚ್ 150ಎಗೆ ಹೊಂದಿಕೊಂಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಬ್ಯಾಂಕ್) ಮಸ್ಕಿ ಶಾಖೆ ತಾಲೂಕಿಗೆ ಮುಖ್ಯ ಶಾಖೆಯಾಗಿದೆ. ತಾಲೂಕಿನ ಹಲವು ಗ್ರಾಮಗಳಿಂದ ಕಚೇರಿ ವ್ಯವಹಾರಕ್ಕಾಗಿ ಬರುವ ಬ್ಯಾಂಕ್ ಗ್ರಾಹಕರಿಗೆ ಒಂದೇ ನಗದು ಕೌಂಟರ್ ಇದೆ” ಎಂದು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಮುಖಂಡರು ಹೇಳಿದರು.

“ಹಳ್ಳಿ, ಗ್ರಾಮಗಳಿಂದ ಬರುವ ಗ್ರಾಹಕರಿಗೆ ಒಂದೇ ನಗದು ಕೌಂಟರ್‌ ಇದ್ದು, ಗ್ರಾಹಕರು ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಬ್ಯಾಂಕಿನಲ್ಲಿ ಇನ್ನೊಂದು ನಗದು ಕೌಂಟರ್ ತೆರೆಯಬೇಕು. ಬ್ಯಾಂಕಿನಲ್ಲಿ ಸಿಬ್ಬಂದಿ ಕೊರತೆ ಹಾಗೂ ಸಾರ್ವಜನಿಕ ಶೌಚಾಲಯದ ಕೊರತೆಯಿಂದ ಬ್ಯಾಂಕಿನಲ್ಲಿ ವ್ಯವಹಾರ ಮಾಡಲು ಬರುವ ಗ್ರಾಹಕರಿಗೆ ತುಂಬಾ ತೊಂದರೆಯಾಗುತ್ತಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತೊಂದು ನಗದು ಕೌಂಟರ್ ವ್ಯವಸ್ಥೆ ಹಾಗೂ ಶೌಚಾಲಯದ ವ್ಯವಸ್ಥೆ ಮಾಡಬೇಕು” ಎಂದು ಅಂತರಾಷ್ಟ್ರೀಯ ಎಂದು ಒತ್ತಾಯಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಧಾರವಾಡ | ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾ ಅಧ್ಯಕ್ಷ ಎಸ್ ನಜೀರ್, ಅತಿಥಿ  ಉಪನ್ಯಾಸಕ ಸುರೇಶ್ ಬಳಗಾನೂರ, ಗ್ಯಾನಪ್ಪ ದೊಡ್ಮನಿ, ಸಿದ್ದಾರ್ಥ್ ಹಾಲಪುರ್, ಬಸಪ್ಪ ನಾಯಕ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗ್ರಾಮವನ್ನು ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಏರಿಸಬಾರದು : ಗ್ರಾಮಸ್ಥರ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ಗ್ರಾಮವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆರಿಸಬಾರದು ಎಂದು ರಾಜ್ಯ...

ರಾಯಚೂರು | ಶೀಲಹಳ್ಳಿ ಸೇತುವೆ ಮುಳುಗಡೆ : ನಾಲ್ಕು ಗ್ರಾಮಕ್ಕೆ ಸಂಪರ್ಕ ಕಡಿತ

ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಮುಳುಗಿದ್ದು,...

ರಾಯಚೂರು | ನಿರಂತರ ಮಳೆ : ಸೂರ್ಯಕಾಂತಿ ಬೆಳೆಗೆ ಕೀಟ ಬಾಧೆ

ಜಿಲ್ಲೆಯಲ್ಲಿ ನಿರಂತರ ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಸೂರ್ಯಕಾಂತಿ ಬೆಳೆಗಾರರ...

ರಾಯಚೂರು | ಪಾಳುಬಿದ್ದ ದಾದಿಯರ ವಸತಿ ಗೃಹಗಳು; ಸ್ಥಳೀಯ ಆಡಳಿತದ ನಿರ್ಲಕ್ಷ್ಯ ಆರೋಪ

ರಾಯಚೂರಿನ ಸಿರವಾರ ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗಿರುವ ದಾದಿಯರ ವಸತಿ...

Download Eedina App Android / iOS

X