ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೇ ತಿಂಗಳಿನಲ್ಲಿ ಪರೀಕ್ಷೆ ನಡೆದಿದ್ದು, ಇನ್ನೂ ಫಲಿತಾಂಶ ಪ್ರಕಟವಾಗಿಲ್ಲ. ಕೂಡಲೇ ಫಲಿತಾಂಶ ಪ್ರಕಟಿಸಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ಜನಪರ ವೇದಿಕೆ ಆಗ್ರಹಿಸಿದೆ. ರಾಯಚೂರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ.
ರಾಯಚೂರು ಜಿಲ್ಲೆಯಲ್ಲಿ ಬಿಕಾಂ, ಬಿಎಸ್‌ಸಿ ಮತ್ತು ಬಿಎ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮೇ ತಿಂಗಳಿನಲ್ಲಿ ಪರೀಕ್ಷೆ ಬರೆದಿದ್ದಾರೆ. ಆದರೆ, ಇನ್ನೂ ಮೌಲ್ಯಮಾಪನದ ಫಲಿತಾಂಶ ಬಂದಿಲ್ಲ. ಪರೀಕ್ಷೆ ಕಾನೂನಿನ ಪ್ರಕಾರ, 60 ದಿನಗಳಲ್ಲಿ ಫಲಿತಾಂಶ ಪ್ರಕಟಿಸಬೇಕು. ಆದರೆ, ಐದು ತಿಂಗಳಾದರೂ ಫಲಿತಾಂಶ ಪ್ರಕಟವಾಗಿಲ್ಲ ಎಂದು ಕಿಡಿಕಾರಿದ್ದಾರೆ.
ಫಲಿತಾಂಶ ಪ್ರಕಟವಾಗದೇ ಇರುವುದರಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಕೂಡಲೇ ಫಲಿತಾಂಶ ಪ್ರಕಟಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಈರಣ್ಣ, ಗೋವಿಂದ ನಾಯಕ, ಜಿಲ್ಲಾದ್ಯಕ್ಷ ಜಂಬಣ್ಣ ಜಲ್ದಾರ್, ಪ್ರಭಾಕರ ವಕೀಲ, ಸೇರಿದಂತೆ ಅನೇಕರು ಇದ್ದರು.
ವರದಿ : ಹಫೀಜುಲ್ಲ