ರಾಯಚೂರು | ಘನತ್ಯಾಜ್ಯ ವಿಲೇವಾರಿ ವಾಹನ ಚಾಲಕರ ಕಾಯಮಾತಿಗೆ ಆಗ್ರಹ

Date:

Advertisements

ರಾಯಚೂರು ನಗರಸಭೆಯ ಘನ ತ್ಯಾಜ್ಯ ಸಾಗಿಸುವ ವಾಹನ ಚಾಲಕರ ಕೆಲಸವನ್ನು ಖಾಯಂಗೊಳಿಸುವುದು, ಚಾಲಕರಿಗೆ ಸೇವಾ ಭದ್ರತೆ ಒದಗಿಸುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಗತಿಪರ ತ್ಯಾಜ್ಯ ಸಾಗಿಸುವ ವಾಹನ ಚಾಲಕರ ಹಾಗೂ ಸಹಾಯಕರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು.

“ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ, ಕಸ ಸಂಗ್ರಹಿಸುವ ಮತ್ತು ವಿಲೇವಾರಿ ಮಾಡುವ ವಾಹನಗಳ ಚಾಲಕರು, ಲೋಡರ್‌ಗಳು ಮತ್ತು ಕ್ಲೀನರ್‌ಗಳು ನೇರ ವೇತನ ಪಾವತಿಯಡಿ ತಂದು ಏಕಕಾಲಕ್ಕೆ ಪೌರಕಾರ್ಮಿಕರೆಂದು ಪರಿಗಣಿಸಿ ಖಾಯಂಗೊಳಿಸಬೇಕು” ಎಂದು ಪ್ರತಿಭಟಿಸಿದರು.

“ಏಳನೇ ವೇತನ ಆಯೋಗದ ಪ್ರಕಾರ ಮತ್ತು ಸಮಾನ ಕೆಲಸಕ್ಕೆ ಸಮಾನ ವೇತನ ಆಧಾರದ ಮೇಲೆ ವಾಹನ ಚಾಲಕರು, ಲೋಡ್‌ಗಳು ಮತ್ತು ಕ್ಲೀನರ್‌ಗಳಿಗೆ ಸಮಾನ ವೇತನ ನೀಡಬೇಕು. ಚಾಲಕರಿಗೆ ಕಳೆದ 4 ವರ್ಷಗಳಿಂದ ವೇತನ ಹೆಚ್ಚಳವಾಗಿಲ್ಲ. ಕೂಡಲೇ ಮಾಸಿಕ ವೇತನ ₹17,500 ರಿಂದ ₹35,000ದವರೆಗೂ ವೇತನ ಹೆಚ್ಚಿಸಬೇಕು” ಎಂದು ಒತ್ತಾಯಿಸಿದರು.

Advertisements

“ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಪೌರಕಾರ್ಮಿಕರನ್ನು ಒಳಗೊಂಡಂತೆ ಇತರೆ ಎಲ್ಲ ಕಾರ್ಮಿಕರು ಮರಣ ಹೊಂದಿದಲ್ಲಿ, ಅವರ ಅವಲಂಬಿತರಿಗೆ ಕೂಡಲೇ 10 ಲಕ್ಷ ರೂ.ಗಳನ್ನು ವಿತರಿಸಬೇಕು. ಅನುಕಂಪದ ನೇಮಕಾತಿಯಡಿ ಅವಲಂಬಿತರನ್ನು ಸೇವೆಗೆ ತೆಗೆದುಕೊಳ್ಳಬೇಕು. ಐಪಿಡಿ ಸಾಲಪ್ಪ ವರದಿಯನ್ನು ತಕ್ಷಣವೇ ಜಾರಿಗೊಳಿಸಬೇಕು. ರಾಜ್ಯ ಸರ್ಕಾರ 2003ರಲ್ಲಿ ನೇಮಿಸಿದ್ದ ತ್ರಿಸದಸ್ಯ ಸಮಿತಿಯ ಶಿಫಾರಸುಗಳನ್ನು ಅನುಷ್ಠಾನಗೊಳಿಸಬೇಕು. ತ್ಯಾಜ್ಯ ನಿರ್ವಹಣೆಯಲ್ಲಿನ ಎಲ್ಲ ರೀತಿಯ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಬೇಕು. ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ನಿರ್ಮೂಲನೆ ಮಾಡಬೇಕು. ದಲಿತರ ಎಲ್ಲ ರೀತಿಯ ಜಾತಿ ಆಧಾರಿತ ತಾರತಮ್ಯದಿಂದ ವಿಮೋಚನೆಗೊಳ್ಳಬೇಕು” ಎಂದು ಮನವಿ ಮಾಡಿದರು.

“ಎಲ್ಲರಿಗೂ ಉಚಿತ ವಸತಿ ಸೌಲಭ್ಯ ಒದಗಿಸಬೇಕು. ಮಕ್ಕಳಿಗೆ ಪ್ರಾಥಮಿಕ, ಉನ್ನತ ಶಿಕ್ಷಣ ನೀಡಬೇಕು. ಎಲ್ಲ ರೀತಿಯ ರಜೆ ಸೌಲಭ್ಯಗಳನ್ನು ನೀಡಬೇಕು. ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಆಗುತ್ತಿರುವ ಲೈಂಗಿಕ ಕಿರುಕುಳ ಸಮಸ್ಯೆ ಪರಿಹರಿಸಬೇಕು. ಲಿಂಗ ಮತ್ತು ಜಾತಿ ತಾರತಮ್ಯವನ್ನು ತೊಲಗಿಸಬೇಕು. ಅಧಿಕಾರಿಗಳು ಮತ್ತು ಸಾರ್ವಜನಿಕರು ಪೌರಕಾರ್ಮಿಕರೊಂದಿಗೆ ಗೌರವ ಮತ್ತು ಘನತೆಯಿಂದ ವರ್ತಿಸುವ ಮೂಲಕ ಅವರ ಜಾತಿವಾದಿ ಮತ್ತು ವರ್ಗವಾಗಿ ಪೂರ್ವಾಗ್ರಹಗಳನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಬಿಡುಗಡೆಗೆ ಆಗ್ರಹ

“ಎಲ್ಲ ಕಾರ್ಮಿಕರಿಗೆ ಕೆಲಸ ಮಾಡುವ ಸ್ಥಳದಲ್ಲಿ ಕುಡಿಯುವ ನೀರು, ವಿಶ್ರಾಂತಿ ಕೊಠಡಿ, ಶೌಚಾಲಯ, ಲಾಕರ್‌ಗಳು, ಸುರಕ್ಷತಾ ಉಡುಗೆ, ಬಟ್ಟೆ ಬದಲಾಯಿಸುವ ಕೊಠಡಿ ಮತ್ತು ಇತರ ಸೌಲಭ್ಯಗಳನ್ನು ಒದಗಿಸಿಕೊಡಬೇಕು” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘಟನೆ ಪದಾಧಿಕಾರಿ ಹುಸೇನಪ್ಪ, ವಿರೇಶ, ಅಮರೇಶ ಜವಳಗೇರಾ, ದುರುಗಪ್ಪ, ಹನುಮಂತ, ದುರುಗೇಶ ಡಿ, ನಾಗರಾಜ, ಕೆಂಚಪ್ಪ, ಮಾರೆಪ್ಪ ಹರವಿ ಸೇರಿದಂತೆ ಬಹುತೇಕರು ಇದ್ದರು.

ರಾಯಚೂರು ಜಿಲ್ಲಾ ಸಿಟಿಜನ್ ಜರ್ನಲಿಸ್ಟ್, ಹಫೀಜುಲ್ಲ
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನವಜಾತ ಶಿಶುವನ್ನು ರಸ್ತೆ ಬದಿ ಬಿಟ್ಟು ಹೋದ ಪೋಷಕರು!

ರಾಯಚೂರು ತಾಲೂಕಿನ ಕಲ್ಮಲಾ ಗ್ರಾಮದ ಕಲ್ಲೂರು ರಸ್ತೆಯ ಬಳಿಯಲ್ಲಿ ಇಂದು ಹೃದಯವಿದ್ರಾವಕ...

ರಾಯಚೂರು | ಗ್ರಾಮವನ್ನು ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಏರಿಸಬಾರದು : ಗ್ರಾಮಸ್ಥರ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ಗ್ರಾಮವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆರಿಸಬಾರದು ಎಂದು ರಾಜ್ಯ...

ರಾಯಚೂರು | ಶೀಲಹಳ್ಳಿ ಸೇತುವೆ ಮುಳುಗಡೆ : ನಾಲ್ಕು ಗ್ರಾಮಕ್ಕೆ ಸಂಪರ್ಕ ಕಡಿತ

ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಮುಳುಗಿದ್ದು,...

ರಾಯಚೂರು | ನಿರಂತರ ಮಳೆ : ಸೂರ್ಯಕಾಂತಿ ಬೆಳೆಗೆ ಕೀಟ ಬಾಧೆ

ಜಿಲ್ಲೆಯಲ್ಲಿ ನಿರಂತರ ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಸೂರ್ಯಕಾಂತಿ ಬೆಳೆಗಾರರ...

Download Eedina App Android / iOS

X