ರಾಯಚೂರು | ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶಿಷ್ಯವೇತನ ಬಿಡುಗಡೆಗೆ ಆಗ್ರಹ

Date:

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಬಿಡುಗಡೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಾರತಮ್ಯ ನೀತಿ ಅನುಸರಿಸಿ ಸಂವಿಧಾನ ಬದ್ಧ ಆಶಯಗಳಿಗೆ ವಿರುದ್ದವಾಗಿ ನಡೆದುಕೊಳ್ಳುತ್ತಿವೆ ಎಂದು ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಜೇಷನ್ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಮಹ್ಮದ ಪೀರಸಾಬ ಆರೋಪಿಸಿದರು.

- Advertisement -

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, “ಅಲ್ಪಸಂಖ್ಯಾತರ ಸಮುದಾಯಗಳಿಗೆ ಶೈಕ್ಷಣಿಕ ಅಭಿವೃದ್ದಿಗೆ ಜಾರಿಗೊಳಿಸಿದ್ದ ಶಿಷ್ಯವೇತನ ಬಿಡುಗಡೆ ಮಾಡುತ್ತಿಲ್ಲ. ಶೈಕ್ಷಣಿಕ ವರ್ಷ ಇನ್ನು ಮೂರು ತಿಂಗಳಲ್ಲಿ ಪೂರ್ಣಗೊಳ್ಳುತ್ತಿದ್ದರೂ ಶಿಷ್ಯವೇತನ ನೀಡಿಲ್ಲ. 2023-24ರ ಸಾಲಿನ ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ₹2,100 ಕೋಟಿ ಅನುದಾನ ಘೋಷಣೆ ಮಾಡಲಾಗಿತ್ತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಅಲ್ಪಸಂಖ್ಯಾತರ ನಿರ್ದೇಶನಾಲಯಕ್ಕೆ ₹1,700 ಕೋಟಿ ಹಂಚಿಕೆಯೂ ಮಾಡಿತ್ತು. ಈ ಅನುದಾನದಲ್ಲಿ ಪ್ರಿ ಮೆಟ್ರಿಕ್, ಮೆಟ್ರಿಕ್, ನ್ಯಾಷನಲ್ ಓವರ್ಸಿಸ್ ಸ್ಕಾಲರ್ ಶಿಪ್‌ಗಳಿಗೆ 160 ಕೋಟಿ ರೂ. ನೀಡಲಾಗಿದೆ. ಆದರೆ ಆರು ತಿಂಗಳಲ್ಲಿ 73.32 ಕೋಟಿ ರೂ. ಮಾತ್ರ ಬಿಡುಗಡೆ ಮಾಡಲಾಗಿದೆ. 7.21 ಕೋಟಿ ರೂ. ಮಾತ್ರ ಖರ್ಚು ಮಾಡಲಾಗಿದೆ. 3 ಲಕ್ಷ ಕೋಟಿ ರೂ. ಅಧಿಕ ಅನುದಾನ ಬಜೆಟ್‌ನಲ್ಲಿ 80 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿರುವ ಅಲ್ಪಸಂಖ್ಯಾತರಿಗೆ ಶೇ.1 ರಷ್ಟು ಅನುದಾನ ನೀಡಿಲ್ಲ” ಎಂದು ಆರೋಪಿಸಿದರು.

“ಸರ್ಕಾರ ಅಲ್ಪಸಂಖ್ಯಾತರಿಗೆ ಅನುದಾನ ಘೋಷಣೆ ಮಾಡಿ ನೀಡುತ್ತಿಲ್ಲ. ಆದರೂ ಪ್ರತಿಪಕ್ಷಗಳು ಅಲ್ಪಸಂಖ್ಯಾತರ ತುಷ್ಟೀಕರಣ ಎಂದು ಟೀಕಿಸುತ್ತಿರುವುದು ವಿಪರ್ಯಾಸ. ಸರ್ಕಾರಗಳ ನಡೆಯಿಂದ ರಾಜ್ಯದಲ್ಲಿ ಅಲ್ಪಸಂಖ್ಯಾತರು ತಬ್ಬಲಿಗಳಾಗುವಂತಾಗಿದೆ. ಸಂವಿಧಾನ ಬದ್ಧ ಆಶಯಗಳಿಗೆ ವಿರುದ್ದವಾಗಿ ಸರ್ಕಾರಗಳು ನಡೆದುಕೊಳ್ಳುತ್ತಿವೆ. ಸಾಮಾಜಿಕ ನ್ಯಾಯ, ಎಲ್ಲರಿಗೂ ಸಮಬಾಳು ಸಮಪಾಲು ಎಂದು ಹೇಳುವ ಕಾಂಗ್ರೆಸ್ ಪಕ್ಷವೂ ಸಹ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿಯ ಕೋಮುವಾದ ವಿರುದ್ದ ರಾಜ್ಯದ ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷ ಬೆಂಬಲಿಸಿದ್ದಾರೆ. ದಲಿತರಿಗಿಂತ ಕನಿಷ್ಠ ಬದುಕು ಸವೆಸುತ್ತಿರುವ ಅಲ್ಪಸಂಖ್ಯಾತರ ಕುರಿತಂತೆ ರಾಜೇಂದ್ರ ಸಾಚಾರ, ರಂಗನಾಥ ಮಿಶ್ರಾ ಸಮಿತಿಗಳು ವರದಿ ನೀಡಿದ್ದರೂ ಸರ್ಕಾರಗಳು ಅನ್ಯಾಯ ಮಾಡುತ್ತಲೇ ಸಾಗಿವೆ. ₹25,000 ನೀಡುತ್ತಿದ್ದ ಫೆಲೋಶಿಪ್ ₹10,000ಕ್ಕೆ ಇಳಿಕೆಯಾಗಿದೆ. ಈಗ ಅದನ್ನೂ ನೀಡುತ್ತಿಲ್ಲ. ಅಲ್ಪಸಂಖ್ಯಾತರ ಸಮುದಾಯಗಳಿಗೆ ಅನುಕಂಪದ ಅಗತ್ಯವಿಲ್ಲ. ಸಂವಿಧಾನ ಬದ್ಧ ಪಾಲು ಒದಗಿಸಬೇಕಿದೆ” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮೂಲಭೂತ ಸೌಕರ್ಯ ಕಲ್ಪಿಸಿ, ದೇವತಗಲ್‌ ಗ್ರಾಮಸ್ಥರ ಆಗ್ರಹ

“ಕೇಂದ್ರ ಸರ್ಕಾರ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಶಿಷ್ಯವೇತನವನ್ನು ರದ್ದುಪಡಿಸಿದೆ. ರಾಜ್ಯ ಸರ್ಕಾರದಿಂದಲೇ ಶಿಷ್ಯವೇತನ ಪಾವತಿಸುವುದಾಗಿ ಕಾಂಗ್ರೆಸ್ ಹೇಳಿತ್ತು. ಆದರೆ, ಇದೀಗ ನಿರ್ಲಕ್ಷಿಸುತ್ತಿದೆ. ಈ ಕುರಿತು ರಾಜ್ಯ ಮುಖ್ಯಮಂತ್ರಿ ಸಿದ್ದಾರಾಮಯ್ಯ ಸೇರಿದಂತೆ ಅಲ್ಪಸಂಖ್ಯಾತರ ಸಚಿವ ಜಮೀರ ಅಹ್ಮದ್ ಅವರಿಗೆ ಹಲವು ಬಾರಿ ಮನವಿ ಮಾಡಲಾಗಿದೆಯಾದರೂ ಕೇವಲ ಭರವಸೆ ದೊರೆಯುತ್ತಿದೆಯೇ ಹೊರತು ಶಿಷ್ಯವೇತನ ಬಿಡುಗಡೆ ಮಾಡುತ್ತಿಲ್ಲ. ಸರ್ಕಾರ ಕೇವಲ ಭರವಸೆ ನೀಡದೆ ಶಿಷ್ಯವೇತನ ಬಿಡುಗಡೆಗೊಳಿಸಿ ಶೈಕ್ಷಣಿಕವಾಗಿ ಮಕ್ಕಳಿಗೆ ನೆರವಾಗಬೇಕು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಘಟನೆಯ ಮುಖಂಡರುಗಳಾದ ಮುಸ್ತಫಾ, ಅನಾನ್, ಯಸೂಫ್ ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...