ರಾಯಚೂರು | ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಒತ್ತಾಯ

Date:

ಹಟ್ಟಿ ಚಿನ್ನದ ಗಣಿ ಕಾರ್ಮಿಕರ ದೀರ್ಘಾವಧಿಯ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಒತ್ತಾಯಿಸಿ ಸಿಐಟಿಯು ಜಿಲ್ಲಾ ಸಮಿತಿ ವತಿಯಿಂದ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

- Advertisement -

ವೈದ್ಯಕೀಯ ಕಾರಣಗಳಿಂದ ನಿವೃತ್ತಿ ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸಬೇಕು. ಯೋಜನೆಗೆ ಆಡಳಿತ ಮಂಡಳಿ ಅನುಮೋದನೆ ನೀಡಿ ಹಣಕಾಸು ಇಲಾಖೆಗೆ ಶಿಫಾರಸು ಮಾಡಿದ್ದರೂ, ಆಕ್ಷೇಪಣೆಗಳ ಹಿನ್ನೆಲೆಯಲ್ಲಿ ಅನುಷ್ಠಾನ ವಿಳಂಬವಾಗಿದೆ. ಸರ್ಕಾರ ಕೂಡಲೇ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಕಾರ್ಮಿಕರ ವೇತನ ಪರಿಷ್ಕರಣೆ, ಬಾಕಿ ವೇತನ, ಬೋನಸ್, ಎಕ್ಸ್‌ಗ್ರೇಷಿಯಾ ಹಾಗೂ ಪಿಎಲ್‌ಐಜಿ ಮೊತ್ತವನ್ನು ಪಾವತಿಸಬೇಕು. ಹಟ್ಟಿ ಚಿನ್ನದ ಗಣಿಯಲ್ಲಿ ಖಾಲಿ ಇರುವ 473 ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.

ಕಾರ್ಮಿಕರು ಈಗಾಗಲೇ ಪ್ರತಿಭಟನೆ ಹಾಗೂ ಧರಣಿ ನಡೆಸಿದ್ದು, ಸರ್ಕಾರ ಮತ್ತು ಆಡಳಿತ ಮಂಡಳಿ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಸೆ.28ರಂದು ಗಣಿ ಕೆಲಸ ಸ್ಥಗಿತಗೊಳಿಸಿ ಮುಷ್ಕರ ನಡೆಸಲು ಕಾರ್ಮಿಕರು ತೀರ್ಮಾನಿಸಿದ್ದಾರೆ. ಬೇಡಿಕೆಗಳು ಈಡೇರದಿದ್ದರೆ ಸೆ.29ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಸಿಡಿಲು ಬಡಿದು ರೈತ ಸಾವು, ಮತ್ತೋರ್ವ ಗಂಭೀರ ಗಾಯ

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷೆ ಎಚ್. ಪದ್ಮಾ, ಪ್ರಧಾನ ಕಾರ್ಯದರ್ಶಿ ಡಿ.ಎಸ್. ಶರಣಬಸವ ಹಾಗೂ ಪದಾಧಿಕಾರಿಗಳಾದ ವರಲಕ್ಷ್ಮಿ, ಅಕ್ಕಮಹಾದೇವಿ, ನಿರ್ಮಲ, ಕಲ್ಯಾಣಮ್ಮ, ಮಹಾದೇವಿ, ಶಕುಂತಲಾ, ರಾಧಮ್ಮ ಮತ್ತು ಪರ್ವಿನ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಸೆ. 26ರಂದು ‘ವಂದೇ ಮಾತರಂ’ ಪಾದಯಾತ್ರೆ

ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಸೆಪ್ಟೆಂಬರ್ 26ರಂದು...

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಧಕರಿಗೆ ಪ್ರಶಸ್ತಿ ಆಹ್ವಾನ 

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ (ರಿ) ವತಿಯಿಂದ ವಿವಿಧ...

ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ 173: ಮರಗಳ ತೆರವು ವಿರೋಧ; ನಿಮಯಗಳ ಉಲ್ಲಂಘನೆ; ಕ್ರಮಕ್ಕೆ ವೀರೇಶ್ ಒತ್ತಾಯ

ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ 173 ಮೂಡಿಗೆರೆಯಿಂದ ಮೂಗುತಿಹಳ್ಳಿವರೆಗೂ 26.326 ಕಿಮೀ ರಸ್ತೆ...

ರಾಯಚೂರು | ರಾಜ್ಯ ಸರ್ಕಾರದ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ: ಸರ್ಕಾರದ ಶವಯಾತ್ರೆ, ಪ್ರತಿಕೃತಿ ದಹನ

ಆರ್ಥಿಕ ದಿವಾಳಿತನದತ್ತ ಸಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ನೀತಿಗಳನ್ನು ಖಂಡಿಸಿ...