ರಾಯಚೂರು | ಮಾದಿಗ ಸಮುದಾಯಕ್ಕೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ಎ. ವಸಂತಕುಮಾರ್‌ಗೆ ಅವಕಾಶ ಕಲ್ಪಿಸಲು ಒತ್ತಾಯ

Date:

ಕಲ್ಯಾಣ ಕರ್ನಾಟಕ ಭಾಗದಲ್ಲಿ ಐದು ಮೀಸಲು ಕ್ಷೇತ್ರಗಳಿದ್ದರೂ ಮಾದಿಗ ಸಮುದಾಯಕ್ಕೆ ಒಂದೇ ಒಂದು ಕ್ಷೇತ್ರದಲ್ಲಿಯೂ ಟಿಕೆಟ್ ನೀಡದೆ ರಾಜಕೀಯವಾಗಿ ವಂಚಿಸಲಾಗಿದೆ. ಹೀಗಾಗಿ ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ದಲಿತ ಮುಖಂಡ ಹನುಮಂತಪ್ಪ ಕುಣೆಕೆಲ್ಲೂರು ಆಗ್ರಹಿಸಿದರು.

- Advertisement -

ಲಿಂಗಸುಗೂರು ಪಟ್ಟಣದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎ. ವಸಂತಕುಮಾರ್ ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಹಾಗೂ ಸಮರ್ಥ ಸಂಘಟಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ರಾಜ್ಯ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷದ ಪರವಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸಿ ತಮ್ಮ ಸಂಘಟನಾ ಸಾಮರ್ಥ್ಯವನ್ನು ಪ್ರದರ್ಶಿಸಿದ್ದಾರೆ. ಅಲ್ಲದೆ, ರಾಯಚೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಎರಡು ಬಾರಿ ಕಾರ್ಯನಿರ್ವಹಿಸಿ, ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ತಿಳಿಸಿದರು.

ಪಕ್ಷದ ಹೈಕಮಾಂಡ್‌ನ ವಿಶ್ವಾಸ ಗಳಿಸಿರುವ ಎ. ವಸಂತಕುಮಾರ್ ಅವರು ಸಾರ್ವಜನಿಕ ಜೀವನದಲ್ಲಿಯೂ ಉತ್ತಮ ಹೆಸರು ಗಳಿಸಿದ್ದು, ಸಂಘಟನಾ ಶಕ್ತಿ ಹಾಗೂ ಆಡಳಿತಾತ್ಮಕ ಅನುಭವ ಹೊಂದಿದ್ದಾರೆ. ಆದ್ದರಿಂದ ಅವರನ್ನು ನೂತನ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಿ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಎ. ವಸಂತಕುಮಾರ್ ಅವರಿಗೆ ಸಚಿವ ಸ್ಥಾನ ದೊರೆತರೆ ರಾಯಚೂರು ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದ್ದು, ಜನರ ನಿರೀಕ್ಷೆಗಳಿಗೆ ಸ್ಪಂದಿಸುವ ಸಾಮರ್ಥ್ಯ ಅವರಲ್ಲಿದೆ. ಸಾಮಾಜಿಕ ನ್ಯಾಯದಡಿ ಅವರಿಗೆ ಸಚಿವ ಸ್ಥಾನ ನೀಡಿ, ಸಮಾಜ ಕಲ್ಯಾಣ ಇಲಾಖೆಯ ಜವಾಬ್ದಾರಿ ವಹಿಸಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದೇವದುರ್ಗ | ಕಟ್ಟಡ ಕುಸಿತ ದುರಂತ: ಮೃತರ ಕುಟುಂಬಗಳಿಗೆ ಪರಿಹಾರ ನೀಡಲು ದಲಿತ ವಿದ್ಯಾರ್ಥಿ ಪರಿಷತ್ ಒತ್ತಾಯ

ಸುದ್ದಿಗೋಷ್ಠಿಯಲ್ಲಿ ದುರಗಪ್ಪ ಅಗ್ರಹಾರ, ಆನಂದ್ ಪೇಂಟರ್, ಮೋಹನ್ ಗೋಸೆ, ಮೌನೇಶ ಐದನಾಳ, ಆಂಜಿನೇಯ ಭಂಡಾರಿ, ಚಂದ್ರಶೇಖರ ಗೊರೇಬಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...