ರಾಯಚೂರು | ಹಟ್ಟಿ ಚಿನ್ನದ ಗಣಿ ಕಾರ್ಮಿಕರಿಗೆ ವಿದ್ಯಾರ್ಹತೆಗೆ ತಕ್ಕಂತೆ ಹುದ್ದೆ ನೀಡಬೇಕೆಂದು ಆಗ್ರಹ

Date:

ಹಟ್ಟಿ ಚಿನ್ನದ ಗಣಿಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ವಿದ್ಯಾರ್ಹತೆಗೆ ತಕ್ಕಂತೆ ಗ್ರೇಡ್ ನೀಡಬೇಕು ಎಂದು ಸೆಂಟರ್ ಆಫ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಹಟ್ಟಿ ಚಿನ್ನದ ಗಣಿಯ ವ್ಯವಸ್ಥಾಪಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿದ ಕಾರ್ಯಕರ್ತರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

“ಜಿ-12 ದರ್ಜೆಯಲ್ಲಿ ಸಾಮಾನ್ಯ ಕೆಲಸಗಾರಗಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ಆನುಕಂಪದ ಆಧಾರದ ಮೇಲೆ ಸುಮಾರು 7 ರಿಂದ 8 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇವೆ. ಈ ಹಿಂದೆ, 2013-14ರಲ್ಲಿ ಹಟ್ಟಿ ಚಿನ್ನದ ಗಣಿಯಲ್ಲಿ ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಿಕೊಂಡಿರುವ ಕೆಲಸಗಾರರಿಗೆ ವಿದ್ಯಾರ್ಹತೆಗೆ ಅನುಗುಣವಾಗಿ ಹುದ್ದೆಯನ್ನು ಕೊಟ್ಟಿದ್ದಾರೆ. ಆದರೆ, ಈಗ ವಿದ್ಯಾರ್ಹತೆಗೆ ತಕ್ಕಂತೆ ಹುದ್ದೆ ನೀಡಲಾಗುತ್ತಿಲ್ಲ. ಚಿನ್ನದ ಗಣಿ ನಿರ್ದೇಶಕ ಮಂಡಳಿಯಲ್ಲಿ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗ ನೀಡಬೇಕೆಂಬ ನಿಯಮವಿದೆ. ಆ ನಿಯಮಗಳನ್ನು ಗಾಳಿಗೆ ತೂರಿ ಹೊಸದಾಗಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸುಮಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ನಮಗೆ ಗಣಿಯ ಕೆಲಸದಲ್ಲಿ ಅನುಭವವಿದೆ. ಕಂಪನಿಯಲ್ಲಿ ಪಧವೀದರರು, ಎಂ.ಎ, ಎಂ.ಕಾಂ, ಬಿ.ಕಾಮ್, ಎಮ್.ಎಸ್.ಡಬ್ಲ್ಯೂ, ಡಿಪ್ಲೋಮಾ, ಡಿಪ್ಲೋಮಾ ನರ್ಸಿಂಗ್, ಬಿಎಸ್‌ಸಿ ಸರ್ಸಿಂಗ್, ಓಟಿ ಟೆಕ್ನಿಸಿಯನ್, ಲ್ಯಾಬ್ ಟೆಕ್ನಿಷಿಯನ್, ಐಟಿಐ ಹಾಗೂ ಇನ್ನಿತರ ಕೋರ್ಸುಗಳನ್ನು ಮುಗಿಸಿದವರು ಇದ್ದಾರೆ. ಕಂಪನಿಯಲ್ಲಿ ಸೇವೆಗೆ ಸೇರಿಕೊಳ್ಳುವಾಗಲೇ ನಮ್ಮ ಸರ್ಟಿಫಿಕೇಟ್‌ಗಳನ್ನು ನೀಡಿದ್ದೇವೆ. ಹೀಗಾಗಿ, ಖಾಲಿ ಇರುವ ಹುದ್ದೆಗಳಿಗೆ ನಮ್ಮನ್ನೇ ಪರಿಗಣಿಸಬೇಕು, ನೇಮಕ ಮಾಡಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಹಕ್ಕೊತ್ತಾಯ ಸಲ್ಲಿಸುವ ವೇಳೆ ಸಿಐಟಿಯು ಜಿಲ್ಲಾಸಹ ಕಾರ್ಯದರ್ಶಿ ಮಹಮ್ಮದ್ ಹನೀಫ್, ಮುಖಂಡರಾದ ರಮೇಶ್ ವೀರಾಪೂರು, ಅಲ್ಲಾಭಕ್ಷ, ರಾಜರತ್ನಂ, ಸುದೀರ್ ಕುಮಾರ, ಅರುಣ್ ವಿ.ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಎಚ್‌ಡಿಕೆ ಹೇಳಿಕೆಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರ ಖಂಡನೆ

ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು...

ಕಲಬುರಗಿ | ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಬೆಂಬಲ: ದಸಂಸ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌...

ದಾವಣಗೆರೆ | ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ: ಪ್ರಾಂಶುಪಾಲ ಕಲ್ಲೇಶ್‌

ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ. ಅದರ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ...

ರಾಯಚೂರು | ಎಚ್‌ಡಿಕೆಯಿಂದ ಮಹಿಳೆಯರಿಗೆ ಅವಮಾನ, ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ...