ರಾಯಚೂರು | ತಿಂಗಳುಪೂರ್ತಿ ನ್ಯಾಯಬೆಲೆ ಅಂಗಡಿ ತೆಗೆಯುವಂತೆ ಆಗ್ರಹ

Date:

ನ್ಯಾಯಬೆಲೆ ಅಂಗಡಿಗಳನ್ನು ತಿಂಗಳಪೂರ್ತಿ ತೆಗೆಯಬೇಕು. ಬೆರಳಚ್ಚಿಗಾಗಿ 10 ರೂ. ವಸೂಲಿ ಮಾಡುತ್ತಿರುವ ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಒತ್ತಾಯಿಸಿದೆ.

ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ ವೇದಿಕೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ನಗರದಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ ತಿಂಗಳಲ್ಲಿ ಒಂದೆರಡು ದಿನ ಮಾತ್ರವೇ ತೆರೆದು, ತಿಂಗಳುಪೂರ್ತಿ ಮುಚ್ಚಲಾಗುತ್ತಿದೆ. ಅಂತಹ ಅಂಗಡಿ ಮಾಲೀಕರು ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರ ಪರವಾನಗಿ ರದ್ದುಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

“ನರಗದ ಮೈಲಾರ ನಗರ, ಕಾಳಿದಾಸ ನಗರ, ಆಶ್ರಯ ಕಾಲೋನಿ ಹಾಗೂ ಸ್ಲಂಗಳಲ್ಲಿ ಅಲ್ಲಿನ ಜನರಿಗೆ ಅನುಕೂಲವಾಗುವಂತೆ ಆ ಪ್ರದೇಶಗಳ ಮಧ್ಯ ಭಾಗದಲ್ಲಿ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಬೇಕು. ಪ್ರತಿ ತಿಂಗಳು ಆಹಾರ ನಿರೀಕ್ಷಕರು ನ್ಯಾಯಬೆಲೆ ಅಂಗಡಿಗಳಲ್ಲಿ ಜಾಗೃತ ಕಮಿಟಿ ಸಭೆ ಮಾಡಿ ಲೋಪದೋಷಗಳನ್ನು ಸರಿಪಡಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಐದು ಕೆಜಿ ಅಕ್ಕಿ ಬದಲಿಗೆ ಹಣ ನೀಡುವುದನ್ನು ಕೈಬಿಟ್ಟು ಜೋಳ, ಗೋದಿ, ಎಣ್ಣೆ ಇನ್ನಿತರ ಪೌಷ್ಠಿಕ ಆಹಾರ ಧಾನ್ಯ ವಿತರಿಸಲು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂಘಟನೆ ಅಧ್ಯಕ್ಷ ಜನಾರ್ಧನ ಹಳ್ಳಿಬೆಂಚಿ, ಸಂಘಟನಾ ಕಾರ್ಯದರ್ಶಿ ಬಸವರಾಜ ಹೊಸೂರು, ಕಾರ್ಯದರ್ಶಿ ನೂರ್‌ಜಾನ್, ಮಾಧವರೆಡ್ಡಿ, ರಾಜಶೇಖರ್, ವಿರೇಶ ಕೇಬಲ್ ಆಪರೇಟರ್, ಮಹೇಶ, ನಾಗರಾಜ, ಜಂಬಣ್ಣ ಡೊಕ್ಕ ಸೇರಿದಂತೆ ಅನೇಕರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಯುಸಿಐ ಅಭ್ಯರ್ಥಿ ರಾಮಲಿಂಗಪ್ಪ ನಾಮಪತ್ರ ಸಲ್ಲಿಕೆ

ರಾಯಚೂರು-ಯಾದಗಿರಿ ಒಳಗೊಂಡ ರಾಯಚೂರು ಲೋಕಸಭಾ (ಪ.ಪಂ) ಕ್ಷೇತ್ರದ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ...

ರಾಯಚೂರು | ಎಚ್‌ಡಿಕೆಯಿಂದ ಮಹಿಳೆಯರಿಗೆ ಅವಮಾನ, ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ...

ಯಾದಗಿರಿ | 40 ದಲಿತ ಕುಟುಂಬಗಳಿಗೆ ಕುಡಿಯುವ ನೀರಿನ ಸಮಸ್ಯೆ; ಕ್ರಮಕ್ಕೆ ಆಗ್ರಹಿಸಿ ಮನವಿ

ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದ ವಾರ್ಡ್ ನಂಬರ್ 3ರಲ್ಲಿ ಇರುವ ದಲಿತರ...

ರಾಯಚೂರು | ಅಂಬೇಡ್ಕರ್ ತತ್ವ ಸಿದ್ಧಾಂತಗಳನ್ನು ತಳಮಟ್ಟದಲ್ಲಿ ಗಟ್ಟಿಯಾಗಿಸಬೇಕಿದೆ: ರಮೇಶ್ ವೀರಾಪೂರು

ಪ್ರಸ್ತುತ ದಿನಗಳಲ್ಲಿ ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ತಳಮಟ್ಟದಲ್ಲಿ ಗಟ್ಟಿಯಾಗಿ ಮುನ್ನಡೆಸಬೇಕಾದ...