ರಾಯಚೂರು | ಟಿಪ್ಪರ್‌ಗಳ ಹಾವಳಿ ತಡೆಯುವಂತೆ ಆಗ್ರಹ

Date:

ರಾಯಚೂರು ನಗರದಲ್ಲಿ ಟಿಪ್ಪರ್ ಮತ್ತು ಟ್ರ‍್ಯಾಕ್ಟರಗಳು ಅತೀ ವೇಗದಿಂದ ಓಡಾಡುತ್ತಿರುವುದನ್ನು ನಿಯಂತ್ರಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಮುಖಂಡರು ಒತ್ತಾಯಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ನಗರದ ಸುತ್ತ-ಮುತ್ತಲಿನ ಅರಣ್ಯ ಮತ್ತು ಸರ್ಕಾರದ ಗೈರಾಣಿ ಭೂಮಿಯಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ದಂಧೆ ನಡೆಯುತ್ತಿದೆ. ಕೆಲ ಭೂಮಾಫೀಯ ದಂದೆಕೋರರು ಅಕ್ರಮ ಕೂಟ ರಚನೆ ಮಾಡಿಕೊಂಡು ಸರ್ಕಾರಕ್ಕೆ ಪೆನಾಲ್ಟಿ ಕಟ್ಟದೆ ಸರ್ಕಾರ ಖನಿಜ ಸಂಪತ್ತು ಮರಳನ್ನು ಅಕ್ರಮವಾಗಿ ಕಳ್ಳ ಸಾಗಾಣೆ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

“5 ರಂದ 10 ಟಿಪ್ಪರುಗಳನ್ನು ಇಟ್ಟುಕೊಂಡು ಕೆಲವರು ಮರಳು ಮತ್ತು ಜಲ್ಲಿಯನ್ನು ಓವರ್ ಲೋಡ್ ಹಾಕಿಕೊಂಡು ಸಾಗಿಸುತ್ತಿದ್ದಾರೆ. ಇದರಿಂದ ರಸ್ತೆಗಳು ಹಾಳಾಗುತ್ತಿವೆ. ಅಲ್ಲದೆ, ವಾಹನಗಳು ವೇಗವಾಗಿ ಹೋಗುತ್ತಿರುವುದರಿಂದ ಬೈಕ್ ಸವಾರರಿಗೆ ಮತ್ತು ನಡೆದಾಡುವ ಸಾರ್ವಜನಿಕರಿಗೆ ಕಣ್ಣಲ್ಲಿ ಧೂಳು ಬಿದ್ದು, ರಸ್ತೆ ಅಘಾತಗಳು ಸಂಭವಿಸುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸಾರಿಗೆ ಅಧಿಕಾರಿಗಳು ಕೂಡ ಕಳ್ಳ ಧಂದೆಕೋರರ ಜೊತೆ ಶಾಮೀಲಾಗಿದ್ದು, ಅಕ್ರಮಗಳನ್ನು ತಡೆಯುವಲ್ಲಿ ವಿಫಲರಾಗಿದ್ದಾರೆ” ಎಂದು ಆರೋಪಿಸಿದ್ದಾರೆ.

ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ತಿಮ್ಮಪ್ಪ ಸ್ವಾಮಿ, ಕಾರ್ಯಾದ್ಯಕ್ಷ ನರಸಿಂಹಲು, ವಿಭಾಗೀಯ ಅಧ್ಯಕ್ಷ ಪ್ರಕಾಶ ಕುಮಾರ, ವಿ.ಎಸ್. ಯಲ್ಲಪ್ಪ, ನವೀನ್ ಕುಮಾರ, ಗೋವಿಂದ, ಸಿದ್ದಪ್ಪ, ನರಸಿಂಹಲು ಸೇರಿದಂತೆ ಅನೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಅಂಬೇಡ್ಕರ್ ತತ್ವ ಸಿದ್ಧಾಂತಗಳನ್ನು ತಳಮಟ್ಟದಲ್ಲಿ ಗಟ್ಟಿಯಾಗಿಸಬೇಕಿದೆ: ರಮೇಶ್ ವೀರಾಪೂರು

ಪ್ರಸ್ತುತ ದಿನಗಳಲ್ಲಿ ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ತಳಮಟ್ಟದಲ್ಲಿ ಗಟ್ಟಿಯಾಗಿ ಮುನ್ನಡೆಸಬೇಕಾದ...

ರಾಯಚೂರು | ಅಂಬೇಡ್ಕರ್ ಜಯಂತಿಯಂದು ಮಾಂಸ ಮಾರಾಟ ನಿಷೇಧ; ಖಂಡನೆ

ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಹಿನ್ನೆಲೆ ಏಪ್ರಿಲ್ 14ರಂದು ರಾಯಚೂರು ಜಿಲ್ಲೆಯ...

ರಾಯಚೂರು | ಬಿಜೆಪಿ ಸಭೆಯಲ್ಲಿ ಗಲಾಟೆ; ನಗರಸಭೆ ಸದಸ್ಯನ ಮೇಲೆ ಹಲ್ಲೆ ಯತ್ನ

ಬಿಜೆಪಿ ಪಕ್ಷದಿಂದ ರಾಯಚೂರು ನಗರದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಸಂಘಟನಾತ್ಮಕ...

ರಾಯಚೂರು | ʼಬಿಜೆಪಿಗೆ ಏಕೆ ಮತಹಾಕಬೇಕು?’ ಪ್ರಶ್ನೆಯೊಂದಿಗೆ ಕಾಂಗ್ರೆಸ್ ಅಭಿಯಾನ

ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ...