ದೇವದುರ್ಗ ತಾಲ್ಲೂಕಿನ ಹದ್ದಿನಾಳ ಗ್ರಾಮದ ಬಿಎಸ್ಪಿ ಮುಖಂಡ ಹಾಗೂ ಹತ್ಯೆಗೀಡಾದ ಭೂಮನಂದ ಹದ್ದಿನಾಳ ಅವರ ಮನೆಗೆ ಜಿಲ್ಲಾಧಿಕಾರಿ ಪುವಿತಾ ಎಸ್. ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದ ಜಿಲ್ಲಾಧಿಕಾರಿಗಳು, ಅವರ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಕುಟುಂಬಕ್ಕೆ ಆಹಾರ ಕಿಟ್ ವಿತರಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಪುವಿತಾ ಎಸ್. ಅವರು ಮಾತನಾಡಿ, ಹತ್ಯೆಗೀಡಾದ ಭೂಮಾನಂದ ಹದ್ದಿನಾಳ ಅವರ ಮಕ್ಕಳ ಶಿಕ್ಷಣಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ ದೊರೆಯುವ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು. ಅಲ್ಲದೆ, ಭೂಮಾನಂದ ಅವರ ಪತ್ನಿಗೆ ಸರ್ಕಾರಿ ನೌಕರಿ ನೀಡುವ ಕುರಿತು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸುವಂತೆ ತಹಶೀಲ್ದಾರ್ ಅವರಿಗೆ ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಜೆಸ್ಕಾಂ ಗುತ್ತಿಗೆ ಕಾರ್ಮಿಕರ ಕನಿಷ್ಠ ವೇತನ, ಕೆಲಸದ ಭದ್ರತೆಗೆ ಆಗ್ರಹ
ದೇವದುರ್ಗ ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ, ದೇವದುರ್ಗ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಜಕುಮಾರ, ಗಬ್ಬೂರ ಪಿಎಸ್.ಐ ಅರುಣ್ ಕುಮಾರ್ ಸೇರಿದಂತೆ ಗ್ರಾಮಸ್ಥರು ಇದ್ದರು.




