ರಾಯಚೂರು | ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ: ರವಿಹಂಜ ಬಂಧನಕ್ಕೆ ಲಿಂಗಾಯತ ಮಹಾಸಭಾ ಆಗ್ರಹ

Date:

ವಿಶ್ವಗುರು ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ಅನಿವಾಸಿ ಭಾರತೀಯ ರವಿಹಂಜ ಅವರನ್ನು ತಕ್ಷಣ ಬಂಧಿಸಬೇಕು. ಅವರಿಗೆ ವೇದಿಕೆ ಕಲ್ಪಿಸಿಕೊಟ್ಟವರ ವಿರುದ್ಧವೂ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಲಿಂಗಾಯತ ಮಹಾಸಭಾದ ಗೌರವಾಧ್ಯಕ್ಷ ಹರವಿ ನಾಗನಗೌಡ ಆಗ್ರಹಿಸಿದರು.

- Advertisement -

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಮಾತನಾಡಿದ ಅವರು, ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ರಾಜ್ಯ ಸರ್ಕಾರದ ಹೆಮ್ಮೆಯ ಐತಿಹಾಸಿಕ ನಿರ್ಧಾರವಾಗಿದೆ. ಆದರೆ, ಬಸವಣ್ಣನವರ ಕುರಿತು ರವಿಹಂಜ ಅವರು ಇತ್ತೀಚೆಗೆ ನೀಡಿರುವ ಹೇಳಿಕೆಗಳು ಅವರ ತತ್ವಾದರ್ಶಗಳಿಗೆ ಧಕ್ಕೆ ತರುವುದರ ಜತೆಗೆ ಬಸವ ಅನುಯಾಯಿಗಳು ಹಾಗೂ ಲಿಂಗಾಯತ ಸಮುದಾಯದ ಭಾವನೆಗಳಿಗೆ ನೋವುಂಟುಮಾಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ರವಿಹಂಜ ಅವರು ಬಸವಣ್ಣನವರನ್ನು ಕಳ್ಳ ಮತ್ತು ಕೊಲೆಗಾರ ಎಂದು ಬಿಂಬಿಸುವ ರೀತಿಯಲ್ಲಿ ಮಾತನಾಡಿದ್ದು, ಲಿಂಗಾಯತ ಸಮುದಾಯವನ್ನು ಅವಹೇಳನ ಮಾಡುವ ಪದಗಳನ್ನು ಬಳಸಿದ್ದಾರೆ. ಈ ಹೇಳಿಕೆಗಳನ್ನು ಯೂಟ್ಯೂಬ್‌ನ ವಿಶ್ವವಾಣಿ ಟಿವಿ ಸ್ಪೆಷಲ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗಿದೆ. ಇಂತಹ ಹೇಳಿಕೆಗಳು ಸಮಾಜದಲ್ಲಿ ಅಶಾಂತಿ ಮತ್ತು ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು.

ರವಿಹಂಜ ಅವರನ್ನು ತಕ್ಷಣ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಅವರ ‘ಬಸವ ಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಂಡು ರಾಜ್ಯಾದ್ಯಂತ ಅದರ ಮಾರಾಟ ಮತ್ತು ಪ್ರಚಾರವನ್ನು ನಿಷೇಧಿಸಬೇಕು. ಇಂತಹ ಹೇಳಿಕೆಗಳಿಗೆ ವೇದಿಕೆ ಕಲ್ಪಿಸಿದ ವಿಶ್ವವಾಣಿ ಪತ್ರಿಕೆಯ ಸಂಪಾದಕ ಶ್ರೀವಿಶ್ವೇಶ್ವರ ಭಟ್ ಅವರ ವಿರುದ್ಧವೂ ಕಾನೂನು ಕ್ರಮ ಜರುಗಿಸಿ, ಪತ್ರಿಕೆಯ ಪರವಾನಗಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ಬಸವಣ್ಣನವರ ಗೌರವ ಹಾಗೂ ಲಿಂಗಾಯತ ಸಮುದಾಯದ ಸ್ವಾಭಿಮಾನವನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಬಸವ ಅನುಯಾಯಿಗಳು ಪ್ರತಿಭಟನೆ ನಡೆಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಶನಿವಾರ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮಹಾನಗರ ಪಾಲಿಕೆ ಪ್ರಭಾರಿ ಆಯುಕ್ತರಾಗಿ ಈಶ್ವರ ಕುಮಾರ ಕಾಂದೂ ನೇಮಕ

ಈ ಸಂದರ್ಭದಲ್ಲಿ ರುದ್ರಪ್ಪ ಚಂದ್ರಶೇಖರ್ ಪಾಟೀಲ್‌ ಮಿರ್ಜಾಪೂರು, ಹರವಿ ನಾಗನಗೌಡ, ಭೋಪಲ್ ನಾ ಡಗೌಡ, ಚನ್ನಬಸವಣ್ಣ ಮಹಾಜನ ಶೆಟ್ಟಿ, ಬಸವರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಡಿಎಂಸಿ ಸಂಘದ ಹೋರಾಟಕ್ಕೆ ಫಲ: 45 ಸಾವಿರ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿ

ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ 45 ಸಾವಿರಕ್ಕೂ ಹೆಚ್ಚು ಸರ್ಕಾರಿ ಪ್ರಾಥಮಿಕ...

ಉತ್ತರ ಕನ್ನಡ | ಡಿ. 1ರಿಂದ ಎಫ್‌ಎಫ್‌ಎಸ್ ಮೂಲಕ ರಸಗೊಬ್ಬರ ಮುಂಗಡ ಬುಕ್ಕಿಂಗ್ ಕಡ್ಡಾಯ

ರೈತರು ತಮಗೆ ಅಗತ್ಯವಿರುವ ರಸಗೊಬ್ಬರವನ್ನು ಮೊಬೈಲ್ ಮೂಲಕವೇ ಮುಂಗಡವಾಗಿ ಬುಕ್ಕಿಂಗ್‌ ಮಾಡಿ,...

ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ರವಿ ಹಂಚ್ ವಿರುದ್ಧ ಕ್ರಮಕ್ಕೆ ಆಗ್ರಹ

ವಿಶ್ವಗುರು ಬಸವಣ್ಣನವರ ಕುರಿತು ಬಸವ ಮಂಟಪ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅನಿವಾಸಿ...

ಮಂಡ್ಯದಲ್ಲೇ ಹೃದ್ರೋಗ ಆಸ್ಪತ್ರೆ; ಸ್ಥಳ ಪರಿಶೀಲನೆ ನಡೆಸಿದ ಡಾ. ದಿನೇಶ್

ಮಂಡ್ಯ ಜಿಲ್ಲೆಯ ಜನರಿಗೆ ಗುಣಮಟ್ಟದ ಹೃದ್ರೋಗ ಚಿಕಿತ್ಸಾ ಸೇವೆ ಸ್ಥಳೀಯವಾಗಿಯೇ ದೊರಕಿಸುವ...