ರಾಯಚೂರು | ಹದಗೆಟ್ಟ ರಸ್ತೆ; ಆಕ್ರೋಶಿತ ಸ್ಥಳೀಯರಿಂದ ಪ್ರತಿಭಟನೆ

Date:

ರಾಯಚೂರು ನಗರದ ಗದ್ವಾಲ್ ರಸ್ತೆ ಹದಗೆಟ್ಟಿದ್ದು, ಕಾಮಗಾರಿ ಪ್ರಾರಂಭಿಸುವಂತೆ ಒತ್ತಾಯಿಸಿ ಸ್ಥಳೀಯ ನಿವಾಸಿಗಳಿಂದ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.

- Advertisement -

ಸಾರ್ವಜನಿಕರ ವಾಹನ ಸಂಚಾರಕ್ಕೆ ತೀವ್ರ ಅಡ್ಡಿಯಾಗಿದ್ದರಿಂದ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ವಾಗ್ವಾದ ಕೂಡ ಉಂಟಾಯಿತು. ಕಳೆದ ವರ್ಷದಿಂದ ಗದ್ವಾಲ್ ರಸ್ತೆ ಕಾಮಗಾರಿ ಪ್ರಾರಂಭವಾಗದೇ ಇರುವುದರಿಂದ ನಿವಾಸಿಗಳು ನಿತ್ಯವೂ ನರಕಯಾತೆನೆ ಅನುಭವಿಸುವಂತಾಗಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ರಸ್ತೆಯು ತಗ್ಗು, ಗುಂಡಿಗಳಿಂದ ಕೂಡಿದ್ದು, ಅತಿಹೆಚ್ಚು ವಾಹನಗಳು ಸಂಚರಿಸುವುದರಿಂದ ರಸ್ತೆ ಇಕ್ಕೆಲಗಳ ಮನೆಗಳಿಗೆ ಧೂಳು ಸೇರಿ ಅನಾರೋಗ್ಯಕ್ಕೆ ಕಾರಣವಾಗುತ್ತಿದೆ” ಎಂದು ಪ್ರತಿಭಟನಾಕಾರರು ದೂರಿದರು.

“ವಾರ್ಡ್‌ ಸಂಖ್ಯೆ 22 ಮತ್ತು 23ರ ನಿವಾಸಿಗಳು, ಶಾಲೆ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಕೂಡಲೇ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಮುಂದಾಗಬೇಕು. ಇಲ್ಲದಿದ್ದಲ್ಲಿ ತೀವ್ರ ಹೋರಾಟ ನಡೆಸಬೇಕಾಗುತ್ತದೆ” ಎಂದು ಎಚ್ಚರಿಸಿದರು.

“ನಿವಾಸಿಗಳು ನಿತ್ಯವೂ ತೊಂದರೆ ಅನುಭವಿಸುತ್ತಿದ್ದೇವೆ. ಆದರೆ, ಪೊಲೀಸರಿಗೆ ಮಾಹಿತಿ ನೀಡದೆ ರಸ್ತೆತಡೆ ಮಾಡುತ್ತಿರುವುದಕ್ಕೆ ಪೊಲೀಸರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಕೆಲವು ದಿನಗಳ ಹಿಂದೆ ಮರಳು ಹೊತ್ತೊಯ್ಯುತ್ತಿದ್ದ ಟಿಪ್ಪರ್‌ ಅಪಘಾತದಲ್ಲಿ ಬಾಲಕ ಮೃತಪಟ್ಟಿದ್ದನು. ಇದಕ್ಕೆ ಸಂಬಂಧಿಸಿದಂತೆ ಮೃತ ಬಾಲಕನ ಕುಟುಂಬಕ್ಕೆ ಪರಿಹಾರ ನೀಡಬೇಕು. ರಸ್ತೆಯನ್ನು ಶೀಘ್ರ ದುರಸ್ತಿಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕ.ಕ. ವಿಮೋಚನೆಗೆ ಹೋರಾಡಿದ ಸೇನಾನಿಗಳ ಸ್ಮಾರಕ ನಿರ್ಮಿಸಿ: ಗುರುನಾಥ ವಡ್ಡೆ

ಬಡಾವಣೆ ನಿವಾಸಿಗಳಾದ ಯು. ಲಿಂಗಾರೆಡ್ಡಿ, ಯು. ನರಸರೆಡ್ಡಿ, ಕೆ ಜಿ ವೀರೇಶ, ಶಂಕರನಾಯಕ, ಕೆ ನರಸಿಂಹಲು, ವಿರೇಶ ಲ್ಯಾಬ್, ಗೋವಿಂದ ನಾಯಕ, ರಮೇಶ, ವೇಲೂರು ವೆಂಕಟೇಶ ಸೇರಿದಂತೆ ಬಡಾವಣೆ ಮಹಿಳೆಯರು, ಯುವಕರು ಪ್ರತಿಭಟನೆಯಲ್ಲಿದ್ದರು.

ಸಿಟಿಜನ್‌ ಜರ್ನಲಿಸ್ಟ್‌ ಹಫಿಜುಲ್ಲ ಮಾಹಿತಿ ಆಧರಿಸಿದ ವರದಿ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬರ ಪರಿಹಾರ, ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ: ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ

ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಗೆ ಸೂಕ್ತ ಪರಿಹಾರ ಒದಗಿಸಬೇಕು, ರೈತರಿಗೆ ಸಮರ್ಪಕ...

ರಾಯಚೂರು | ಭೂಮಾಪಕ–ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಿತ ಪ್ರದೇಶ

ಭೂದಾಖಲೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಭೂಮಾಪಕರ ಹುದ್ದೆಗಳು ಹಾಗೂ ಕಂದಾಯ...

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ರಾಯಚೂರು | ಕಾಲೇಜಿನಲ್ಲಿ ಶೌಚಾಲಯವಿದೆ, ನೀರಿಲ್ಲ: 400 ಮಂದಿ ವಿದ್ಯಾರ್ಥಿನಿಯರ ಪರದಾಟ

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದಷ್ಟೇ ಸಾಲದು; ಅವರು ಸುರಕ್ಷಿತ, ಗೌರವಯುತ ಹಾಗೂ ಸ್ವಚ್ಛ...