ರಾಯಚೂರು | ಶಿಥಿಲಗೊಂಡ ತುಂಗಭದ್ರಾ ಎಡದಂಡೆ ಕಾಲುವೆಗಳು, ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಲಿ; ಚಾಮರಸ್ ಮಾಲಿಪಾಟೀಲ

Date:

ತುಂಗಭದ್ರಾ ಎಡದಂಡೆ ಕಾಲುವೆಗಳು ಕೆಲವು ಶಿಥಿಲಗೊಂಡಿದ್ದು, ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟಾಗ ಸಮಸ್ಯೆಯಾಗುತ್ತದೆ. ತಕ್ಷಣ ದುರಸ್ತಿಗೆ ಸರ್ಕಾರ ಮುಂದಾಗಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲಿಪಾಟೀಲ್ ಒತ್ತಾಯಿಸಿದರು.

- Advertisement -

ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ಕುಡಿಯುವ ನೀರಿಗಾಗಿ ತುಂಗಭದ್ರ ಎಡದಂಡೆ ಕಾಲುವೆಗೆ ನೀರು ಹರಿಸಿದಾಗ ಮೈಲ್‌ನಂಬರ್ 13 ರಲ್ಲಿ ಕಾಲುವೆ ಒಡೆದು ಹೋಗಿದೆ. 2 ಸಾವಿರ ಕುಸೆಕ್ಸ್ ನೀರು ಹರಿಸದೇ ಒಡೆದಿರುವ ಕಾಲುವೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದರೆ ಉಳಿಯುತ್ತದೆ ಎಂಬ ಆತಂಕ ಎದುರಾಗಿದ್ದು ಕೂಡಲೇ ಶಿಥಿಲಗೊಂಡ ಕಾಲುವೆ ದುರಸ್ತಿಗೆ ಸರ್ಕಾರ ಮುಂದಾಗಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

2010 ರಲ್ಲಿ ತುಂಗಭದ್ರ ಎಡದಂಡೆ ಕಾಲುವೆ ಅಧುನೀಕರಣ ಕಾಮಗಾರಿ ಕೈಗೊಂಡಿರುವ ಕಾಲುವೆ ಸ್ಥಳದಲ್ಲಿಯೇ ಒಡೆದು ಹೋಗಿದೆ. ಇನ್ನೂ 18ಕ್ಕೂ ಹೆಚ್ಚು ಸ್ಥಳಗಳ ಕಾಲುವೆಗಳು ಶಿಥಿಲಗೊಂಡಿದ್ದು ಒಡೆದು ಹೋಗಲು ಸಿದ್ದವಾಗಿವೆ. ಕಾಲುವೆ ಲೈನಿಂಗ್ 4 ಇಂಚು ನಿರ್ಮಿಸುವ ಬದಲು 2 ಇಂಚು ನಿರ್ಮಿಸಿರುವುದೇ ಕಾಲುವೆ ಒಡೆಯಲು ಕಾರಣವಾಗಿದೆ. ಜು.15 ವರೆಗೆ ಸಮಯಾವಕಾಶವಿದ್ದು ಶಿಥಿಲವಾಗಿರುವ ಕಾಲುವೆ ದುರಸ್ತಿಗೆ ಸರ್ಕಾರ ಮುಂದಾಗಬೇಕೆಂದರು.

ಜೋಳ ಖರೀದಿಯಲ್ಲಿ ನಕಲಿ ಜಿಪಿಎಸ್ ಮಾಡಿರುವದನ್ನು ಪತ್ತೆ ಮಾಡಲು ಜಿಲ್ಲಾಧಿಕಾರಿಗಳು ಆದೇಶ ನೀಡಿರುವದು ಸ್ವಾಗತಾರ್ಹ. ಆದರೆ ಅಧಿಕಾರಿಗಳು ಫೇಕ್ ಜಿಪಿಎಸ್‌ನೊಂದಿಗೆ ಅರ್ಹ ರೈತರ ಮಾಹಿತಿಯನ್ನು ರದ್ದುಗೊಳಿಸುತ್ತಿರುವುದು ಪ್ರಾರಂಭವಾಗಿದೆ. ಸೇರ್ಪಡೆಗೂ ಹಣ ವಸೂಲಿ ಮಾಡಲಾಗುತ್ತಿದೆ. ಜಾನೇಕಲ್, ಬ್ಯಾಗವಾಟ, ಸಿರವಾರ ಸೇರಿದಂತೆ ಸರಿ ಸುಮಾರು 6 ಸಾವಿರ ಎಕರೆ ಪ್ರದೇಶದಲ್ಲಿ ನಕಲಿ ಜಿಪಿಎಸ್ ಮಾಡಲಾಗಿದೆ. ಕೂಡಲೇ ಜಿಲ್ಲಾಧಿಕಾರಿಗಳು ಸೂಕ್ತ ಪರಿಶೀಲನೆ ನಡೆಸಿ ಅರ್ಹ ರೈತರಿಗೆ ವಂಚನೆಯಾಗದಂತೆ ಎಚ್ಚವರಹಿಸಬೇಕೆಂದರು. ಕುರ್ಡಿ, ನೀರಮಾನ್ವಿ ಸೇರಿದದಂತೆ ಕೆಲವಡೆ ಜೋಳ ಖರೀದಿಯಲ್ಲಿ ಗುಣಮಟ್ಟ ಇಲ್ಲ ಎಂದು ಹೇಳಿ ಖರೀದಿ ನಿರಾಕರಿಸಲಾಗುತ್ತಿದೆ ಎಂದರು.

ಸುಪ್ರೀಂ ಕೋರ್ಟ್ ನಿಂದ ಬಂದ ಆದೇಶವನ್ನು ಕೋಣಕಾರ್ಪಸ್ ಬೆಳೆಯನ್ನು ಅರಣ್ಯ ಇಲಾಖೆ ಬೆಳೆಸುತ್ತಿರುವುದನ್ನು ಕಿತ್ತು ಹಾಕಬೇಕು. ಜಿಲ್ಲಾಧಿಕಾರಿಗಳು ಅರಣ್ಯ ಇಲಾಖೆ ಅಧಿಕಾರಿಗಳ ಸಭೆ ಕರೆದು ಅಪಾಯವಾಗುವದನ್ನು ತಡೆಯಲು ಮುಂದಾಗಬೇಕೆಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ಈ ಸಂದರ್ಬದಲ್ಲಿ ಬೂದೆಯ್ಯ ಸ್ವಾಮಿ, ಮಲ್ಲಣ್ಣ ದಿನ್ನಿ, ದೇವರಾಜ ನಾಯಕ, ಸಿದ್ದಯ್ಯ ಸ್ವಾಮಿ,ಬಸವರಾಜ ಮಾಲಿಪಾಟೀಲ್, ಲಕ್ಷ್ಮಣ, ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...