ರಾಯಚೂರು | ಮೆಡಿಕಲ್ ಅನ್‌ಫಿಟ್ ಯೋಜನೆ ಜಾರಿಗೆ ಗಣಿ ಸಚಿವರ ಜೊತೆ ಚರ್ಚೆ: ಮುನಿಯಪ್ಪ

Date:

ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಬಹುದಿನಗಳ ಬೇಡಿಕೆಯಾಗಿರುವ ಮೆಡಿಕಲ್ ಅನ್‌ಫಿಟ್ ಯೋಜನೆಯನ್ನು ಜಾರಿಗೆ ತರುವ ಕುರಿತು ಗಣಿ ಸಚಿವರು ಹಾಗೂ ಆಡಳಿತ ಮಂಡಳಿಯೊಂದಿಗೆ ಚರ್ಚಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಹೇಳಿದರು.

- Advertisement -

ಹಟ್ಟಿ ಪಟ್ಟಣದ ಅಥಿತಿ ಗೃಹಕ್ಕೆ ಭೇಟಿ ನೀಡಿದಾಗ ಮಾತನಾಡಿದರು. ಗಣಿ ಕಂಪನಿಯ ಅಭಿವೃದ್ಧಿಗೆ ಶ್ರಮಿಸಿದ ಕಾರ್ಮಿಕ ಮಕ್ಕಳಿಗೆ ಮೆಡಿಕಲ್ ಅನ್‌ಫಿಟ್ ಯೋಜನೆ ಅಡಿಯಲ್ಲಿ ಉದ್ಯೋಗ, ನೀಡಿ ಕಾರ್ಮಿಕರ ಸಮಸ್ಯೆ ಬಗೆಹರಿಸಿ ಎಂದು ಗಣಿ ಕಂಪನಿಯ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಸೆಪ್ಟೆಂಬರ್ 8ರಂದು ಗಣಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಗಣಿ ಸಚಿವರೊಂದಿಗೆ ಮಾತುಕತೆ ನಡೆಸಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲಾಗುವುದು, ಅದಕ್ಕಾಗಿ ಕಾರ್ಮಿಕರು ದುಡಕಿ ಹೋರಾಟ ಮಾಡಿದರೆ ಕಾರ್ಮಿಕರಿಗೆ ನಷ್ಟವಾಗಲಿದೆ. ಮುಷ್ಕರ ಮಾಡುವುದನ್ನು ನಿಲ್ಲಿಸಿ ಎಂದು ಕಾರ್ಮಿಕ ಮುಖಂಡರಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದೇ ಸರ್ಕಾರದ ಗುರಿ: ಅಜಯ ಸಿಂಗ್

ಈ ವೇಳೆ ಮಾಜಿ ಶಾಸಕ ಡಿ.ಎಸ್. ಹೂಲಗೇರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ, ಗ್ಯಾರಂಟಿ ಯೋಜನೆ ತಾಲ್ಲೂಕು ಅಧ್ಯಕ್ಷ ವೆಂಕಟೇಶ ಗುತ್ತೇದಾರ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಎಂ.ನಿಂಗರಾಜ, ಶಿವಣ್ಣ ನಾಯಕ ಕೋಠಾ, ಅಹಮ್ಮದ್ ಬಾಬಾ, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಸಿರಾಜುದ್ದಿನ್, ಇಸ್ಮಾಯಿಲ್ ಖಾದ್ರಿ, ಅಂಜದ್ ಹುಸೇನ್, ಸೈಯದ್ ಟೈಲರ್, ಜುಜ್ಜನಾಯಕ, ಮುಖಂಡರಾದ ಎಚ್.ಎ. ನಿಂಗಪ್ಪ, ವಿಜಯಕುಮಾರ, ಲಾಲು ಪೀರ್, ಜಿಲ್ಲಾಧಿಕಾರಿ ಪೂವಿತಾ, ಸಿಇಒ ಈಶ್ವರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ, ತಹಶೀಲ್ದಾರ್ ಸತ್ಯಮ್ಮ, ಗಣಿ ಕಂಪನಿಯ ಕಾರ್ಯನಿರ್ವಹಕ ನಿರ್ದೇಶಕ ಪ್ರಕಾಶ, ಪ್ರಧಾನ ವ್ಯವಸ್ಥಾಪಕ ಸೈಫ್ ಉಲ್ಲಾಖಾನ್, ಯಮನೂರಪ್ಪ ಕಾರ್ಮಿಕ ಮುಖಂಡರಾದ ಶಾಂತಪ್ಪ ಆನ್ವರಿ, ಸಿದ್ದಪ್ಪ ಮುಂಡರಗಿ, ಜಮದಗ್ನಿ ಕೋಠಾ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಆಲಮಟ್ಟಿಯಿಂದ ನೀರು ಹರಿಸುವುದನ್ನು ನಿಲ್ಲಿಸಿ; ಇಲ್ಲದಿದ್ದರೆ ಜಲಾಶಯಕ್ಕೆ ಇಳಿದು ಪ್ರತಿಭಟನೆ:ಅರವಿಂದ ಕುಲಕರ್ಣಿ ಎಚ್ಚರಿಕೆ

ಆಲಮಟ್ಟಿ ಲಾಲಬಹದ್ದೂರ ಶಾಸ್ತ್ರಿ ಜಲಾಶಯದಿಂದ ಕೆಪಿಸಿಎಲ್ ಮೂಲಕ ನಾರಾಯಣಪುರ ಜಲಾಶಯಕ್ಕೆ ಪ್ರತಿದಿನ...

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...