ರಾಯಚೂರು ಜಿಲ್ಲೆಯ ಐತಿಹಾಸಿಕ, ಪೌರಾಣಿಕ ಹಾಗೂ ಪ್ರಾಕೃತಿಕ ಮಹತ್ವ ಹೊಂದಿರುವ ನಾರದಗಡ್ಡೆಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ನಾರದಗಡ್ಡೆಯು ವಿಶಿಷ್ಟ ಪ್ರಾಕೃತಿಕ ಸೌಂದರ್ಯ ಮತ್ತು ಧಾರ್ಮಿಕ ಮಹತ್ವ ಹೊಂದಿರುವ ಪ್ರಮುಖ ಪ್ರವಾಸಿ ತಾಣವಾಗಿದ್ದು, ಇಲ್ಲಿನ ಶ್ರೀ ಚನ್ನಬಸವೇಶ್ವರ ದೇವಸ್ಥಾನ ನಾರದ ಮುನಿಗಳು ತಪಸ್ಸು ಮಾಡಿದ ಸ್ಥಳವೆಂಬ ನಂಬಿಕೆಗೆ ಸಂಬಂಧಿಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಗೋವಾ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿರುವ ಹಿನ್ನೆಲೆ, ಅಗತ್ಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಅಗತ್ಯ ಸೂಚನೆಗಳನ್ನು ನೀಡಿದರು.
ಇದೇ ಸಂದರ್ಭದಲ್ಲಿ, ನಾರದಗಡ್ಡೆ ಸೇತುವೆಯಿಂದ ಕುರುವಕೂಲ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ತುರ್ತಾಗಿ ದುರಸ್ತಿಗೊಳಿಸಲು ಹಾಗೂ ನಾರದಗಡ್ಡೆಯಲ್ಲಿರುವ ಹಳೆಯ ಕಟ್ಟಡವನ್ನು ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಜಮೀರ್ ಅಹ್ಮದ್ ಖಾನ್‌ಗೆ ಸಚಿವ ಸ್ಥಾನ ನೀಡುವಂತೆ ಮುಸ್ಲಿಂ ಕಮಿಟಿ ಒತ್ತಾಯ
ಜಿಲ್ಲಾಡಳಿತವು ನಾರದಗಡ್ಡೆಯನ್ನು ಇನ್ನಷ್ಟು ಆಕರ್ಷಕ ಹಾಗೂ ಪ್ರವಾಸಿಗ ಸ್ನೇಹಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ಬದ್ಧವಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.





