ರಾಯಚೂರು | ಭೂಮಾನಂದ ಕೊಲೆ ಪ್ರಕರಣ ಸಿಬಿಐಗೆ ವಹಿಸಲು, ಕುಟುಂಬಕ್ಕೆ ಪರಿಹಾರ ನೀಡಲು ಡಿಎಸ್ಎಸ್ ಆಗ್ರಹ

Date:

ದೇವದುರ್ಗ ತಾಲ್ಲೂಕಿನ ಹದ್ದಿನಾಳ ಗ್ರಾಮದ ದಲಿತ ಯುವಕ ಭೂಮಾನಂದನ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಮೃತನ ಕುಟುಂಬಕ್ಕೆ ಸೂಕ್ತ ರಕ್ಷಣೆ ಹಾಗೂ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

- Advertisement -

ದೇವದುರ್ಗ ತಾಲೂಕಿನ ಸುಂಕೇಶ್ವರಹಾಳ ಗ್ರಾಮದಲ್ಲಿ ಹದ್ದಿನಾಳ ಗ್ರಾಮದ ಭೂಮಾನಂದನನ್ನು ದುಷ್ಕರ್ಮಿಗಳು ಜನರ ಮುಂದೆಯೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಭೂಮಾನಂದನ ಕೊಲೆ ಪೂರ್ವನಿಯೋಜಿತ ಕೃತ್ಯವಾಗಿದ್ದು, ಹಂತಕರು ಸ್ಥಳದಲ್ಲಿರುವ ಕೆಲವು ಅಂಗಡಿ ಮಾಲೀಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಆಯುಧಗಳನ್ನು ಅಂಗಡಿಗಳಲ್ಲಿ ಬಚ್ಚಿಟ್ಟು ಸಂಚು ಹಾಕಿದ್ದರು. ಭೂಮಾನಂದ ಸ್ಥಳಕ್ಕೆ ಬರುತ್ತಿದ್ದಂತೆಯೇ ತಲೆ ಮತ್ತು ಕುತ್ತಿಗೆ ಭಾಗಕ್ಕೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಘಟನೆಯ ಸಾಕ್ಷ್ಯಗಳನ್ನು ಮರೆಮಾಚುವ ಉದ್ದೇಶದಿಂದ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಹಾಳು ಮಾಡಲಾಗಿದೆ ಎಂದು ದೂರಿದರು.

ಈ ಕೂಡಲೇ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಸೂಕ್ತ ಕಠಿಣ ಶಿಕ್ಷೆ ನೀಡಲು ಸಿಬಿಐಗೆ ವಹಿಸಬೇಕು, ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೇದ್ರ ಸರ್ಕಾರದ ಬಲವಂತದ ಭೂಸ್ವಾಧೀನ‌, ಕಾರ್ಮಿಕ ವಿರೋಧಿ ನೀತಿ ವಿರುದ್ಧ ʼಜೈಲ್ ಭರೋ’ ಚಳವಳಿ

ಈ ಸಂದರ್ಭದಲ್ಲಿ ಬಸವರಾಜ ಸಾಸಲಮರಿ, ರಾಜು ಬೊಮ್ಮನಾಳ, ಅಶೋಕ ನಂಜಲದಿನ್ನಿ, ಎಂ.ಮನೋಹರ್ ಸಿರವಾರ, ಮೌನೇಶ ಗಾಣದಾಳ, ದುರುಗಪ್ಪ ಡಬ್ಬೇರ ಮಡಗು, ಹುಲುಗಪ್ಪ ಕುಣೆ ಕೆಲ್ಲೂರು, ಜಮದಗ್ನಿ ಗೊನಾಳ, ನಿರುಪಾದಿ, ಯಂಕೋಬ, ಈರಪ್ಪ, ಭೀಮಣ್ಣ, ಮಾರೆಪ್ಪ, ರಾಜಪ್ಪ ಜಂಬಣ್ಣ, ವಿಜಯ, ರಾಮಣ್ಣ, ವೀರೇಶ ಮರಿ ಸ್ವಾಮಿ, ದೇವರಾಜ ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ

SIR (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆ ರದ್ದುಪಡಿಸುವುದು, ಮತದಾರರ ಪಟ್ಟಿಯಿಂದ ತೆಗೆದುಹಾಕಿರುವ...

ಉಡುಪಿ | ವಿದ್ಯಾರ್ಥಿನಿಯರಿಗಾಗಿ ಇನ್ನೂ ಎರಡು ವಸತಿ ನಿಲಯ : ಸಚಿವ ಶಿವರಾಜ ತಂಗಡಗಿ

ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು...

ಚಿಕ್ಕಮಗಳೂರು | ಸೆ. 26ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು ನಗರದಲ್ಲಿ 66/11 ಕೆ.ವಿ. ಹಿರೇಮಗಳೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ...

ಚಿಕ್ಕಮಗಳೂರು | ಜ್ಞಾನೇಶ್ ಕುಮಾರ್ ವಜಾಗೊಳಿಸಿ-SIR ರದ್ದುಗೊಳಿಸಿ; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ SIR ವಿರೋಧಿ ಒಕ್ಕೂಟ ಮುಖಂಡರಾದ ಕೆ. ಎಲ್...