ರಾಯಚೂರು | ಸಾಮಾಜಿಕ ಪಿಡುಗುಗಳ ನಿರ್ಮೂಲನೆಗೆ ಶಿಕ್ಷಣ, ಜಾಗೃತಿ ಅಗತ್ಯ: ನ್ಯಾಯಾಧೀಶ ಸುರೇಶ್ ಸವದಿ

Date:

ಮಾನಸಿಕ ಆರೋಗ್ಯದಷ್ಟೇ ದೈಹಿಕ ಆರೋಗ್ಯವೂ ಮುಖ್ಯವಾಗಿದ್ದು, ಪ್ರತಿಯೊಬ್ಬರೂ ಮಾನಸಿಕವಾಗಿ ಸದೃಢರಾಗಿರಬೇಕು. ಸಮಾಜದಲ್ಲಿ ಬೇರೂರಿರುವ ವರದಕ್ಷಿಣೆ, ಬಾಲ್ಯವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಪಿಡುಗುಗಳನ್ನು ನಿರ್ಮೂಲನೆ ಮಾಡಲು ಶಿಕ್ಷಣ ಮತ್ತು ಸಾಮಾಜಿಕ ಜಾಗೃತಿ ಅಗತ್ಯವಾಗಿದೆ ಎಂದು ದೇವದುರ್ಗದ ಗೌರವಾನ್ವಿತ ನ್ಯಾಯಾಧೀಶರಾದ ಸುರೇಶ್ ಅಣ್ಣಪ್ಪ ಸವದಿ ಹೇಳಿದರು.

- Advertisement -

ಪಟ್ಟಣದ ಡಾನ್ ಬಾಸ್ಕೋ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಡಾನ್ ಬಾಸ್ಕೋ ಮೈಂಡ್ಸ್ ಯೋಜನೆ, ದೇವದುರ್ಗ ಇವರ ಸಂಯುಕ್ತ ಆಶ್ರಯದಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ, ಅಂತಾರಾಷ್ಟ್ರೀಯ ಹೆಣ್ಣುಮಗುವಿನ ದಿನಾಚರಣೆ ಹಾಗೂ ವರದಕ್ಷಿಣೆ ನಿರ್ಮೂಲನೆ ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದಲ್ಲಿ ಇಂಪೀಚ್‌ಮೆಂಟ್‌ ಮೂಲಕ ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಲು...

ಮುಖ್ಯ ಚುನಾವಣಾ ಆಯುಕ್ತರಾದ ಗ್ಯಾನೇಶ್ ಕುಮಾರ್ ಅವರಿಗೆ 2023ರ ಕಾಯ್ದೆಯ ಮೂಲಕ ಸರ್ಕಾರ ಕಾನೂನು ರಕ್ಷಣೆ ಕೊಟ್ಟಿರಬಹುದು, ಆದರೆ ಅವರಿಗೆ ಯಾವುದೇ ರೀತಿಯ ಸಾಂವಿಧಾನಿಕ ರಕ್ಷಣೆ ಇಲ್ಲ. ಹಾಗಾಗಿ ಅವರು ತಾವಾಗಿಯೇ ರಾಜೀನಾಮೆ...

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ನಮಗಾಗಿ ಮಾಡಿದರೆ ಮನುಷ್ಯ ಗುಣ, ಪರರಿಗಾಗಿ ಮಾಡಿದರೆ ದೈವ ಗುಣ ಎಂಬ ಮಾತಿನಂತೆ, ಪ್ರತಿಯೊಬ್ಬರೂ ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಸಾರ್ವಜನಿಕರಲ್ಲಿ ಹಾಗೂ ಸಮುದಾಯದ ಜನರಲ್ಲಿ ಅರಿವು ಮೂಡಿಸುವುದರ ಜೊತೆಗೆ ಸಮುದಾಯದ ಅಭಿವೃದ್ಧಿಗಾಗಿ ಹೃದಯವಂತಿಕೆಯಿಂದ ಸೇವೆ ಸಲ್ಲಿಸಬೇಕು. ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸಲು ಶಿಕ್ಷಣವಂತರಾಗಿ, ಸಮಾಜದ ಅಭಿವೃದ್ಧಿಗೆ ಎಲ್ಲರೂ ಸಹಕರಿಸಬೇಕು” ಎಂದು ತಿಳಿಸಿದರು.

ಮಾನಸಿಕ ಸದೃಢತೆ ಸಮಾಜದ ಅಭಿವೃದ್ಧಿಗೆ ಪೂರಕ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಗೌರವಾನ್ವಿತ ನ್ಯಾಯಾಧೀಶರಾದ ಶ್ರೀ ರಫೀಕ್ ಅಹ್ಮದ್ ಮಾತನಾಡಿ, ಸಮಾಜದಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸುವುದು ಸಹಜ. ಆದರೆ, ಸಮುದಾಯದ ಅಭಿವೃದ್ಧಿಯಾಗಬೇಕಾದರೆ ಪ್ರತಿಯೊಬ್ಬರಲ್ಲೂ ಸದೃಢ ಮನಸ್ಸು, ಆರೋಗ್ಯವಂತ ದೇಹ ಹಾಗೂ ಏಕಾಗ್ರತೆ ಇರಬೇಕು. ಆಗ ಮಾತ್ರ ನಾವು ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಮಾನಸಿಕ ಸಮಸ್ಯೆಗಳು ಎದುರಾದಾಗ ಆಪ್ತ ಸಮಾಲೋಚನೆ ಹಾಗೂ ತಜ್ಞರ ನೆರವು ಪಡೆಯಲು ಹಿಂಜರಿಯಬಾರದು. ಬಾಲ್ಯವಿವಾಹದಿಂದ ಮಕ್ಕಳನ್ನು ರಕ್ಷಿಸಿ, ಅವರ ಬಾಲ್ಯವನ್ನು ಉಳಿಸಬೇಕು. ಇಂತಹ ಸಾಮಾಜಿಕ ಪಿಡುಗುಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಸಮುದಾಯವನ್ನು ಜಾಗೃತಗೊಳಿಸಬೇಕು ಎಂದು ಕರೆ ನೀಡಿದರು.

ನಂತರ ಮತ್ತೋರ್ವ ಅತಿಥಿ ಉಪನ್ಯಾಸಕರಾಗಿ ಆಗಮಿಸಿದ್ದ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅಧಿಕಾರಿಗಳು ಹಾಗೂ ಮನೋವೈದ್ಯರಾದ ಡಾ. ಮನೋಹರ್ ವೈ. ಪತ್ತಾರ್ ಮಾತನಾಡಿ, ಮಾನಸಿಕ ಆರೋಗ್ಯವು ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯಕ್ಕೂ ಮಹತ್ವ ನೀಡಬೇಕು. ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸಲು ಹಾಗೂ ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಬೆಂಬಲ ನೀಡಲು ನಾವೆಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.

ಮನಸ್ಸಿನ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಅಗತ್ಯವಿದ್ದಾಗ ಇತರರ ಸಹಾಯ ಪಡೆಯಬೇಕು. ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರನ್ನು ಹೀಯಾಳಿಸದೆ, ಅವರಿಗೆ ಗೌರವ ನೀಡಿ, ಪ್ರೋತ್ಸಾಹಿಸಿ, ಅಗತ್ಯ ನೆರವು ಒದಗಿಸಬೇಕು. ಮಾನಸಿಕ ಆರೋಗ್ಯದ ಕುರಿತು ಸಮಾಜದಲ್ಲಿರುವ ತಪ್ಪು ಕಲ್ಪನೆಗಳನ್ನು ದೂರಮಾಡಿ, ಪ್ರತಿಯೊಬ್ಬರೂ ಆರೋಗ್ಯಕರ ಜೀವನ ನಡೆಸಲು ಸಹಕರಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾನ್ ಬಾಸ್ಕೋ ಸಮಾಜ ಸೇವಾ ಸಂಸ್ಥೆಯ ನಿರ್ದೇಶಕರಾದ ಫಾದರ್ ಜಾನ್ ಪೌಲ್ ಮಾತನಾಡಿ, ದೇವದುರ್ಗ ತಾಲೂಕಿನಲ್ಲಿ ಮೈಂಡ್ಸ್ ಯೋಜನೆಯನ್ನು 50 ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. ಇಲಾಖೆಗಳ ಸಮನ್ವಯದೊಂದಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರಲ್ಲಿ ಮಾನಸಿಕ ಆರೋಗ್ಯದ ಕುರಿತು ಅರಿವು ಮತ್ತು ಜಾಗೃತಿ ಮೂಡಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು. ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ವಿವಿಧ ಇಲಾಖೆಗಳ ಸಹಕಾರ ಅತ್ಯಗತ್ಯವಾಗಿದ್ದು, ಮುಂದಿನ ದಿನಗಳಲ್ಲಿಯೂ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದ ಮೈಂಡ್ಸ್ ಯೋಜನೆಯ ಜಿಲ್ಲಾ ಸಂಯೋಜಕರಾದ ಸಿದ್ದಲಿಂಗಪ್ಪ ಕಾಕರಗಲ್ ಅವರು, ವಿಶ್ವ ಮಾನಸಿಕ ಆರೋಗ್ಯ ಜಾಗೃತಿ ಹಾಗೂ ಅಂತಾರಾಷ್ಟ್ರೀಯ ಹೆಣ್ಣುಮಗುವಿನ ದಿನಾಚರಣೆಯ ಮಹತ್ವವನ್ನು ವಿವರಿಸಿದರು.
“ಹೆಣ್ಣುಮಗು ದೇಶದ ಸಿರಿ; ಅವಳಿಗೆ ಸಿಗಲಿ ಸಮಾನತೆಯ ಅರಿವು” ಎಂಬ ಸಂದೇಶದೊಂದಿಗೆ ಹೆಣ್ಣುಮಕ್ಕಳಿಗೆ ಸಮಾನ ಅವಕಾಶಗಳನ್ನು ಕಲ್ಪಿಸುವ ಅಗತ್ಯವನ್ನು ತಿಳಿಸಿದರು. ಮಾನಸಿಕ ಆರೋಗ್ಯವೇ ನಿಜವಾದ ಸಂಪತ್ತು. ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿರಲು ಪ್ರತಿದಿನ 7ರಿಂದ 8 ಗಂಟೆಗಳ ಕಾಲ ಉತ್ತಮ ನಿದ್ರೆ ಮಾಡುವುದು, ನಿಯಮಿತವಾಗಿ ಪೌಷ್ಟಿಕ ಆಹಾರ ಸೇವಿಸುವುದು, ನಮ್ಮ ಭಾವನೆಗಳನ್ನು ಅರ್ಥಮಾಡಿಕೊಳ್ಳುವುದು ಹಾಗೂ ಮಾದಕ ಪದಾರ್ಥಗಳಿಂದ ದೂರವಿರುವುದು ಮುಖ್ಯವಾಗಿದೆ ಎಂದು ಹೇಳಿದರು.

ಇಂದಿನ ದಿನಮಾನದಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಅರಿವು ಹೊಂದುವುದು ಅತ್ಯಗತ್ಯವಾಗಿದೆ. ಯಾರೂ ಮಾನಸಿಕ ಒತ್ತಡಕ್ಕೆ ಒಳಗಾಗದೆ, ಕಳಂಕದ ಭಾವನೆಗೆ ಹೆದರದೆ ಅಗತ್ಯ ನೆರವು ಪಡೆದು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. “ಭಾವನೆಗಳನ್ನು ತಿಳಿಯೋಣ, ಮಾನಸಿಕ ಆರೋಗ್ಯ ಅರಿಯೋಣ, ಮಕ್ಕಳ ಭವಿಷ್ಯವನ್ನು ಕಟ್ಟೋಣ” ಎಂಬ ಸಂದೇಶವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ನಿರೂಪಣೆಯನ್ನು ನಾಗರಾಜ್ ಮಾನಸಗಲ್ ನೆರವೇರಿಸಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀ ಸೋಮಪ್ಪ ಎಂ. ಸ್ವಾಗತಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಗೀತಾ ವಂದನಾರ್ಪಣೆ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಜಾಲಹಳ್ಳಿ ಜಿ.ಪಂ. ಮತ್ತು ತಾ.ಪಂ. ಕ್ಷೇತ್ರಗಳಿಗೆ ಎಸ್‌ಸಿ ಮೀಸಲಾತಿಗೆ ಆಗ್ರಹ

ಈ ಸಂದರ್ಭದಲ್ಲಿ ತಾಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಚೆನ್ನಪ್ಪ ಗೆಜ್ಜೆಬಾವಿ, ಹಿರಿಯ ಮೇಲ್ವಿಚಾರಕಿ ಕುಮಾರಿ ಗಂಗಮ್ಮ, ವಕೀಲರಾದ ಕುಮಾರಿ ಪ್ರತಿಭಾ ಸಾಸ್ವಿಗೆರಾ, ಮಲ್ಲಿಕಾರ್ಜುನ ಮಿಯಾಪುರ, ತಾಯಪ್ಪ, ಸಂದೀಪ್ ಕುಮಾರ್ ಹಾಗೂ ಭಗವಂತರಾಯ ಸೇರಿದಂತೆ ಹಲವು ಗಣ್ಯರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಶೆಟ್ಟಿಹಳ್ಳಿ ಸೇತುವೆ ಮೇಲೆ ಕಾರು ನಿಲ್ಲಿಸಿ ವ್ಯಕ್ತಿ ನಾಪತ್ತೆ 

ಹಾಸನ ಜಿಲ್ಲೆ ಶೆಟ್ಟಿಹಳ್ಳಿ ಸೇತುವೆ ಮೇಲೆ ಕಾರು ನಿಲ್ಲಿಸಿ ವ್ಯಕ್ತಿ ನಾಪತ್ತೆಯಾಗಿರುವ...

ರಾಯಚೂರು | ಜಾಲಹಳ್ಳಿ ಜಿ.ಪಂ. ಮತ್ತು ತಾ.ಪಂ. ಕ್ಷೇತ್ರಗಳಿಗೆ ಎಸ್‌ಸಿ ಮೀಸಲಾತಿಗೆ ಆಗ್ರಹ

ಜಾಲಹಳ್ಳಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳಿಗೆ ಪರಿಶಿಷ್ಟ ಜಾತಿ...

ಕುಮಟಾ | ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿ: ಅಕ್ಟೋಬರ್ 15 ರಿಂದ ಚಾಲನೆ

ಕುಮಟಾ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉತ್ತರ ಕನ್ನಡ...

ಹಾವೇರಿ | ಸ್ವಂತ ಖರ್ಚಿನಲ್ಲಿ‌ ಶ್ರಮದಾನ ಮಾಡಿದ ಯುವಕರು

ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತ ಲಕ್ಷ್ಮೀಪುರ-ಬಿಡಾರದ ವಿಶ್ವ ಮಿತ್ರ ಯುವಕರ ಸಂಘದ ಪದಾಧಿಕಾರಿಗಳು...