ರಾಯಚೂರು | ಶಿಥಿಲ ಕಟ್ಟಡದಲ್ಲಿ ಶಿಕ್ಷಣ; ಮದರಕಲ್ ಸರ್ಕಾರಿ ಶಾಲೆಯ ದುಸ್ಥಿತಿಗಿಲ್ಲ ಮುಕ್ತಿ

Date:

ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸರ್ಕಾರಗಳು ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿರುವ ನಡುವೆಯೇ, ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಜೀವಭಯದ ನಡುವೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

- Advertisement -

ಶಾಲೆಯ ಹಳೆಯ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದು, ಮೇಲ್ಛಾವಣಿಯ ಸಿಮೆಂಟ್ ಪದರಗಳು ಹಾಗೂ ಗೋಡೆಯ ಭಾಗಗಳು ಆಗಾಗ ಉದುರುತ್ತಿವೆ. ಇದರಿಂದ ತರಗತಿ ಕೊಠಡಿಗಳಲ್ಲಿ ಕುಳಿತು ಪಾಠ ಕೇಳಲು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಯಪಡುವಂತಾಗಿದೆ. ಯಾವುದೇ ಕ್ಷಣದಲ್ಲಿ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇರುವ ಕಾರಣ, ಮಕ್ಕಳನ್ನು ತರಗತಿಯೊಳಗೆ ಕೂರಿಸುವುದಕ್ಕೂ ಶಿಕ್ಷಕರು ಹಿಂಜರಿಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಪರಿಣಾಮವಾಗಿ ನೂರಾರು ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲೇ ಬಯಲಿನಲ್ಲಿ ಚಾಪೆ ಹಾಸಿಕೊಂಡು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ, ಬಿಸಿಲು ಹಾಗೂ ಗಾಳಿಯ ನಡುವೆ ಮಕ್ಕಳಿಗೆ ಶಿಕ್ಷಣ ನೀಡಬೇಕಾದ ಅನಿವಾರ್ಯತೆ ಎದುರಾಗಿದೆ. ಇದರಿಂದ ಮಕ್ಕಳ ಕಲಿಕೆಗೆ ತೊಂದರೆಯಾಗುವುದರ ಜೊತೆಗೆ ಅವರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ.

75a9a944 d9dd 46fa 86c9 7c922731c1d0

ಶಿಥಿಲ ಕಟ್ಟಡದಲ್ಲಿ ಮಕ್ಕಳನ್ನು ಕೂರಿಸುವುದು ಅಪಾಯಕಾರಿ ಎಂದು ಪಾಲಕರು ಆತಂಕ ವ್ಯಕ್ತಪಡಿಸಿದ್ದಾರೆ. ಯಾವುದೇ ಕ್ಷಣದಲ್ಲಿ ಮೇಲ್ಛಾವಣಿಯ ಭಾಗಗಳು ಕುಸಿದು ದೊಡ್ಡ ದುರಂತ ಸಂಭವಿಸುವ ಸಾಧ್ಯತೆ ಇರುವುದರಿಂದ, ಅಧಿಕಾರಿಗಳು ತಕ್ಷಣವೇ ಶಾಲೆಯ ಸ್ಥಿತಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಎಸ್‌ಡಿಎಂಸಿ ಅಧ್ಯಕ್ಷ ವೆಂಕಟೇಶ್ ನಾಯಕ ಮಾತನಾಡಿ, “ಶಾಲೆಯಲ್ಲಿ 180ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆಗೆ ಒಟ್ಟು ಆರು ಕೊಠಡಿಗಳಿದ್ದು, ಅವುಗಳಲ್ಲಿ ಮೂರು ಕೊಠಡಿಗಳು ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿವೆ. ಮೇಲ್ಛಾವಣಿ ಕುಸಿಯುವ ಭೀತಿಯಿಂದ ಆ ಕೊಠಡಿಗಳನ್ನು ಬಳಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದಿದ್ದಾರೆ.

ಉಳಿದ ಮೂರು ಕೊಠಡಿಗಳಲ್ಲಿ ಒಂದನ್ನು ಶಾಲಾ ಕಚೇರಿಯಾಗಿ ಬಳಸಲಾಗುತ್ತಿದ್ದು, ಮತ್ತೊಂದು ಕೊಠಡಿಯಲ್ಲಿ 1ರಿಂದ 4ನೇ ತರಗತಿ ಹಾಗೂ ಇನ್ನೊಂದು ಕೊಠಡಿಯಲ್ಲಿ 5ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ಪಾಠ ನಡೆಸಲಾಗುತ್ತಿದೆ. ಸಾಕಷ್ಟು ಕೊಠಡಿಗಳ ಕೊರತೆಯಿಂದ ಕೆಲವೊಮ್ಮೆ ವಿದ್ಯಾರ್ಥಿಗಳು ಬಯಲಲ್ಲೇ ಕುಳಿತು ಪಾಠ ಆಲಿಸುವ ಅನಿವಾರ್ಯತೆ ಎದುರಾಗಿದೆ.

“ಶಾಲೆಯ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ಕಳೆದ ನಾಲ್ಕು ವರ್ಷಗಳಿಂದ ನಡೆಯುತ್ತಿದೆಯಾದರೂ ಆಮೆಗತಿಯಲ್ಲಿ ಸಾಗುತ್ತಿದ್ದು, ಇದುವರೆಗೂ ಪೂರ್ಣಗೊಂಡಿಲ್ಲ. ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ಸುರಕ್ಷಿತ ಹಾಗೂ ಅಗತ್ಯ ಮೂಲಸೌಕರ್ಯ ಒದಗಿಸಬೇಕು” ಎಂದು ಶಾಲೆಯ ಎಸ್‌ಡಿಎಂಸಿ ಸದಸ್ಯರು ಆಗ್ರಹಿಸಿದ್ದಾರೆ.

ಶಾಲೆಯ ಮುಖ್ಯೋಪಾಧ್ಯಾಯರು ಮಾತನಾಡಿ, “ಶಾಲೆಯಲ್ಲಿ ಒಟ್ಟು ಎಂಟು ಕೊಠಡಿಗಳಿದ್ದು, ಅವುಗಳಲ್ಲಿ ಆರು ಕೊಠಡಿಗಳನ್ನು ನೆಲಸಮಗೊಳಿಸಬೇಕೆಂದು (ಡೆಮಾಲಿಷ್) ಸುಮಾರು ಎರಡು ವರ್ಷಗಳ ಹಿಂದೆಯೇ ಸಂಬಂಧಪಟ್ಟ ಅಧಿಕಾರಿಗಳು ಸೂಚಿಸಿದ್ದರು. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದ ಕಾರಣ ಕಳೆದ ಎರಡು-ಮೂರು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಕೆಲವೊಮ್ಮೆ ಬಯಲಲ್ಲೇ ಪಾಠ ನಡೆಸುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ” ಎಂದು ಹೇಳಿದರು.

ಈ ಕುರಿತು ಮೇಲಾಧಿಕಾರಿಗಳು ಕೂಡ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಲೆಯ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಅದು ಶೀಘ್ರ ಪೂರ್ಣಗೊಂಡರೆ ವಿದ್ಯಾರ್ಥಿಗಳಿಗೆ ಸುರಕ್ಷಿತ ಹಾಗೂ ಉತ್ತಮ ಕಲಿಕಾ ವಾತಾವರಣ ದೊರೆಯಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಅರ್ಧಕ್ಕೆ ನಿಂತ ಹೊಸ ಶಾಲಾ ಕಟ್ಟಡ:

ಮದರಕಲ್ ಗ್ರಾಮದ ಶಾಲೆಗೆ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭವಾಗಿದ್ದರೂ, ಅದು ಅರ್ಧಕ್ಕೆ ಸ್ಥಗಿತಗೊಂಡಿದೆ. ಕಾಮಗಾರಿ ಏಕೆ ನಿಂತಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲದಿರುವುದು ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ. ವಿದ್ಯಾರ್ಥಿಗಳಿಗೆ ತಾತ್ಕಾಲಿಕವಾಗಿ ಸುರಕ್ಷಿತ ತರಗತಿ ಕೊಠಡಿಗಳ ವ್ಯವಸ್ಥೆ ಮಾಡಬೇಕು. ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಆಡಳಿತ ಸ್ಥಳಕ್ಕೆ ಭೇಟಿ ನೀಡಿ ಶಾಶ್ವತ ಪರಿಹಾರ ಕಲ್ಪಿಸಬೇಕು. ಕಾಮಗಾರಿ ಪೂರ್ಣಗೊಂಡಿದ್ದರೆ ವಿದ್ಯಾರ್ಥಿಗಳಿಗೆ ಸುರಕ್ಷಿತ ಹಾಗೂ ಉತ್ತಮ ವಾತಾವರಣದಲ್ಲಿ ಶಿಕ್ಷಣ ಪಡೆಯುವ ಅವಕಾಶ ದೊರೆಯುತ್ತಿತ್ತು ಎಂಬುದು ಗ್ರಾಮಸ್ಥರ ಅಭಿಪ್ರಾಯ.

fda1ee6a 201b 4975 8c1a d74a3df20004

ಜೀವಭಯದ ನಡುವೆ ಶಿಕ್ಷಣ ಪಡೆಯುತ್ತಿರುವ ಗ್ರಾಮದ ವಿದ್ಯಾರ್ಥಿಗಳಿಗೆ ಸುರಕ್ಷಿತ ಶಾಲಾ ಕಟ್ಟಡ ಒದಗಿಸುವುದು ಶಿಕ್ಷಣ ಇಲಾಖೆಯ ತುರ್ತು ಆದ್ಯತೆಯಾಗಬೇಕಿದೆ. ಅನಾಹುತ ಸಂಭವಿಸುವ ಮುನ್ನವೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬುದು ಗ್ರಾಮಸ್ಥರು, ಪಾಲಕರು ಹಾಗೂ ಸಾರ್ವಜನಿಕರ ಒತ್ತಾಯವಾಗಿದೆ.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ(ಬಿ) ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಅನಿರುದ್ಧ ವಾಡೇಕರ್ ಆಯ್ಕೆ

ಭಾರತೀಯ ಜನತಾ ಪಕ್ಷದ ಔರಾದ(ಬಿ) ಮಂಡಲದ ನೂತನ ಅಧ್ಯಕ್ಷರಾಗಿ ಅನಿರುದ್ಧ ವಾಡೇಕರ್...

ಆಂಧ್ರಪ್ರದೇಶ | ರಸ್ತೆ ಕಾಮಗಾರಿ ವೇಳೆ ಜೆಲಾಟಿನ್ ಸ್ಫೋಟ; ಶಾಲಾ ಶಿಕ್ಷಕಿ ಸೇರಿದಂತೆ ಹಲವರ ಸಾವು

ರಸ್ತೆ ಕಾಮಗಾರಿಗಾಗಿ ಬಳಸಲಾಗುತ್ತಿದ್ದ ಜೆಲಾಟಿನ್ ಸ್ಟಿಕ್‌ಗಳು ಅನಿರೀಕ್ಷಿತವಾಗಿ ಸ್ಫೋಟಗೊಂಡು, ಶಾಲಾ ಶಿಕ್ಷಕಿಯೊಬ್ಬರು...

ರಾಯಚೂರು | ಸ್ಮಶಾನದಲ್ಲಿ ಹೂತ ಶವಗಳ ಅವಶೇಷ ಸಾಗಣೆ ಆರೋಪ: ಮೂವರು ಪೊಲೀಸ್ ವಶಕ್ಕೆ

ನಗರದ 13ನೇ ವಾರ್ಡ್‌ನ ಮಾರುತಿ ನಗರ ಸ್ಮಶಾನದಲ್ಲಿ ಹೂತು ಹಾಕಿದ ಶವಗಳ...

ಬಸವಕಲ್ಯಾಣ ಅನುಭವ ಮಂಟಪ ನಿರ್ಮಾಣ ಕಾರ್ಯ ವರ್ಷದೊಳಗೆ ಪೂರ್ಣ : ಸಚಿವ ಈಶ್ವರ ಖಂಡ್ರೆ

ವಿಶ್ವಕ್ಕೆ ಸಮಾನತೆ, ಕಾಯಕ ಮತ್ತು ದಾಸೋಹದ ಪರಿಕಲ್ಪನೆಗಳನ್ನು ನೀಡಿದ ಬಸವಣ್ಣನವರು ಮನುಕುಲದ...