ವೈಟಿಪಿಎಸ್‌ನಲ್ಲಿ ವಿದ್ಯುತ್ ಅವಘಡ ಅವಘಡದಿಂದಾಗಿ ಎಲೆಕ್ಟ್ರಿಷಿಯನ್ ಸಿಬ್ಬಂದಿ ಗಾಯಗೊಂಡ ಘಟನೆ ವೈಟಿಪಿಎಸ್‌ನ ಪ್ಲಾಂಟ್‌ನ ಸ್ವಿಚರ್ ರೂಮ್‌ನಲ್ಲಿ ನಡೆದಿದೆ.
ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ ಪ್ಲ್ಯಾಷ್ ಓವರ್ ಅವಘಡದಿಂದಾಗಿ ಸಿಬ್ಬಂದಿಯ ಕೈ ಹಾಗೂ ಮುಖಕ್ಕೆ ಸುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಶ್ರೀರಾಮ್ ರೆಡ್ಡಿ (38) ಎಂದು ಗುರುತಿಸಲಾಗಿದೆ.
ಘಟನೆಯ ವೇಳೆ ಪ್ಲ್ಯಾಷ್ ಓವರ್ ಸಂಭವಿಸಿದರೂ, ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದಂತಾಗಿದೆ. ವಿದ್ಯುತ್ ಉಪಕರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಸ್ಥಳದಲ್ಲಿದ್ದ ಇತರ ಸಿಬ್ಬಂದಿಯಲ್ಲಿ ಆತಂಕ ಮೂಡಿಸಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಸರ್ಕಾರಿ ಶಾಲೆಗಳಲ್ಲಿ ಖಾಲಿ ಶಿಕ್ಷಕರ ಹುದ್ದೆ ಭರ್ತಿಗೆ ಆಗ್ರಹ: ಉಸ್ತುವಾರಿ ಸಚಿವರಿಗೆ ಮನವಿ
ಗಾಯಗೊಂಡ ಶ್ರೀ ರಾಮ್ ರೆಡ್ಡಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಕುರಿತು ವೈಟಿಪಿಎಸ್ ಅಧಿಕಾರಿಗಳು ಹಾಗೂ ಸಂಬಂಧಿಸಿದ ಸಿಬ್ಬಂದಿಯಿಂದ ಮಾಹಿತಿ ಪಡೆಯುತ್ತಿದ್ದಾರೆ. ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.




