ರಾಯಚೂರು | ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ರೈತರ ನೀರಿನ ಹೋರಾಟಕ್ಕೆ ಮುಕ್ತಿ ಇಲ್ಲ: ವೀರಭದ್ರಸ್ವಾಮಿ

Date:

ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ ಕಳೆಯುತ್ತಾ ಬಂದರೂ ಬೆಳೆಗಳನ್ನು ಉಳಿಸಿಕೊಳ್ಳಲು ನೀರಿಗಾಗಿ ರೈತರು ಹೋರಾಟ ಮಾಡಲೇಬೇಕಾದ ಅನಿವಾರ್ಯತೆ ಹೋಗುತ್ತಿಲ್ಲ’ ಎಂದು ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ವೀರಭದ್ರಸ್ವಾಮಿ ಕೋಲಾರ ಬೇಸರ ವ್ಯಕ್ತ ಪಡಿಸಿದರು.

- Advertisement -

ತಾಲ್ಲೂಕಿನ ಹಿರೇಜಾವೂರು ಗ್ರಾಮದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕ ಮಂಗಳವಾರ ಹಮ್ಮಿಕೊಂಡಿದ್ದ ಡಿಸೆಂಬರ್ ಅಂತ್ಯದವರೆಗೆ ನೀರಾವರಿ ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

‘ರೈತರ ಅನುಕೂಲಕ್ಕಾಗಿ ಜಲಾಶಯಗಳನ್ನು ನಿರ್ಮಾಣ ಮಾಡಿ ಅದನ್ನು ಉಸ್ತುವಾರಿ ನೋಡಿಕೊಳ್ಳಲು ಅಧಿಕಾರಿಗಳನ್ನು ನಿಯೋಜನೆ ಮಾಡಿದರೆ ಆ ಅಧಿಕಾರಿಗಳು ಜಲಾಶಯವೇ ತಮ್ಮ ಸ್ವಂತ ಜಾಹಗೀರವೆಂದು ಭಾವಿಸಿಕೊಂಡು ತಮ್ಮ ಮನಬಂದಂತೆ ಕೆಲಸ ಮಾಡುತ್ತಿದ್ದಾರೆ. ರೈತರು ಬಿತ್ತನೆ ಮಾಡಿದ ಬೆಳೆಗಳಿಗೆ ನೀರಿನ ಅಗತ್ಯವಿದ್ದರೂ ಕೂಡಾ ಕಾಲುವೆಗಳಿಗೆ ನೀರು ನಿಲ್ಲಿಸುವ ಮೂಲಕ ರೈತನಿಗೆ ಸಂಕಷ್ಟ ತರುವ ಕೆಲಸ ಮಾಡುತ್ತಿದ್ದಾರೆ. ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರಿನ ಸಂಗ್ರಹವಿದ್ದರೂ ನೀರು ಹರಿಸಲು ಸರ್ಕಾರ ಹಿಂದೇಟು ಹಾಕುತ್ತಿರುವುದು ರೈತರನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳಿದಂತಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಲುವೆಗಳಿಗೆ ನೀರು ಹರಿಸುವ ವಿಚಾರವಾಗಿ ನೀರಾವರಿ ಸಲಹಾ ಸಮಿತಿ ತೆಗೆದುಕೊಳ್ಳುವ ನಿರ್ಣಯಗಳು ರೈತರನ್ನು ಕೃಷಿಯಿಂದ ವಿಮುಖರನ್ನಾಗಿ ಮಾಡುವ ಹುನ್ನಾರವಾಗಿದೆ.ರಾಯಚೂರು ಜಿಲ್ಲೆಯಲ್ಲಿ ಅನೇಕ ರೈತರು ತೋಟಗಾರಿಕೆ ಬೆಳೆಯಾದ ಮೆಣಸಿನಕಾಯಿ ಬೆಳೆ ಫಸಲು ರೈತರ ಕೈಗೆ ಬರಬೇಕಾದರೆ ಕನಿಷ್ಠವೆಂದರೂ ಡಿಸೆಂಬರ್ ಅಂತ್ಯದವರೆಗೆ ನಾರಾಯಣಪುರ ಬಲದಂಡೆ ಹಾಗೂ ರಾಂಪೂರು ಕಾಲುವೆಗಳಿಗೆ ನೀರು ಹರಿಸಿದರೆ ಮಾತ್ರ ಬೆಳೆ ಕಟಾವಿಗೆ ಬರುತ್ತದೆ. ಇಲ್ಲದಿದ್ದರೆ ಸಾಲ ಮಾಡಿದ ರೈತರು ನಾನಾ ರೀತಿಯ ಸಂಕಷ್ಟಕ್ಕೆ ಬಲಿಯಾಗುವಂತಾಗುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಎಚ್ಚೆತ್ತು ಕಾಲುವೆಗಳಿಗೆ ಡಿಸೆಂಬರ್ ಕೊನೆವರೆಗೆ ನೀರು ಹರಿಸಬೇಕು ಹಾಗೂ ರೈತರ ಪಂಪಸೆಟ್‌ಗಳಿಗೆ ನಿರಂತರ 9 ಗಂಟೆ ಐಪಿ ಸೆಟ್ ವಿದ್ಯುತ್ ಸರಬರಾಜು ಮಾಡಬೇಕು’ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ರಾಜ್ಯ ಘಟಕದ ಕಾರ್ಯದರ್ಶಿ ಭಕ್ಕರಳ್ಳಿ ಬೈರೇಗೌಡ, ಜಿಲ್ಲಾ ಘಟಕದ ಅಧ್ಯಕ್ಷ ಶಿವಪುತ್ರಗೌಡ ನಂದಿಹಾಳ, ಹನುಮಂತರಾಯ ನೆಲೋಗಿ, ಆನಂದ ಕುಂಬಾರ, ರಮೇಶ ಗೌಡೂರು, ಹನುಮ ಗೌಡ ಭೂಪುರ ಸೇರಿ ಅನೇಕರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ಕಡಲ ಕ್ಷೇತ್ರಕ್ಕೆ ಬಂಪರ್ ಹೂಡಿಕೆ: ₹8,295 ಕೋಟಿ ಮೊತ್ತದ 8 ಯೋಜನೆಗಳಿಗೆ ಚಾಲನೆ

ಕರ್ನಾಟಕದ ಕಡಲ ಮೂಲಸೌಕರ್ಯವನ್ನು ಬಲಪಡಿಸುವುದು, ಹೂಡಿಕೆ ಅವಕಾಶಗಳನ್ನು ವಿಸ್ತರಿಸುವುದು ಹಾಗೂ ಕರಾವಳಿ...

ಉಡುಪಿ | ಕಾರಂತರ ಸಾಹಿತ್ಯ, ಸಾಧನೆ ಯುವಪೀಳಿಗೆಗೆ ಪ್ರೇರಣೆ: ಪ್ರೊ. ವಾದಿರಾಜ ಭಟ್

ಅಡಂಬರದ ಬದುಕನ್ನು ಇಷ್ಟಪಡದೆ ಸರಳ ಜೀವನ, ನೇರ ನಡೆ-ನುಡಿಯ ವ್ಯಕ್ತಿತ್ವವನ್ನು ಹೊಂದಿದ್ದ...

ಚಿಕ್ಕಮಗಳೂರು | ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ; ಜಿಲ್ಲಾಧಿಕಾರಿ

ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಹಾಗೂ ಜಾನುವಾರುಗಳ ಮೇವಿನ ಸಮಸ್ಯೆ ಉಂಟಾಗದಂತೆ...

ಚಿಕ್ಕಮಗಳೂರು | ಮಕ್ಕಳ ಬಾಲ್ಯ ರಕ್ಷಣೆಯಲ್ಲಿ ಶಿಕ್ಷಕರ ಪಾತ್ರ ಮಹತ್ತರ: ನ್ಯಾ. ಕಿರಣ್ ಕಿಣಿ

'ಇಂದಿನ ಮಕ್ಕಳು ದೇಶದ ಮುಂದಿನ ರೂವಾರಿಗಳು. ಪೋಷಕರ ನಂತರ ಮಕ್ಕಳ ಬದುಕಿನಲ್ಲಿ...