ರಾಯಚೂರು | ಬೆಳೆ ನಷ್ಟ ಪರಿಹಾರ, ನರೇಗಾದಡಿ 200 ದಿನ ಕೆಲಸಕ್ಕೆ ಆಗ್ರಹಿಸಿ ರೈತರು, ಕೃಷಿ ಕೂಲಿಕಾರರ ಪ್ರತಿಭಟನೆ

Date:

ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಬೇಕು, ನರೇಗಾ ಯೋಜನೆಯಡಿ 200 ದಿನ ಕೆಲಸ, 700 ರೂ ಕೂಲಿ ನೀಡಬೇಕು, ನಿವೇಶನ ರಹಿತರಿಗೆ ನಿವೇಶನ, ಸರ್ಕಾರಿ ಜಮೀನಿನಲ್ಲಿ ವಾಸಿಸುತ್ತಿರುವ ಅರ್ಹ ಕುಟುಂಬಗಳಿಗೆ ಹಕ್ಕುಪತ್ರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ನೇತೃತ್ವದಲ್ಲಿ ವಿವಿಧ ತಾಲೂಕುಗಳಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿ, ಪ್ರತಿಭಟನೆ ನಡೆಸಲಾಯಿತು.

- Advertisement -

ಜಿಲ್ಲೆಯಲ್ಲಿ ತೀವ್ರ ಬರಗಾಲದಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ರಾಜ್ಯ ಸರ್ಕಾರದಿಂದ ಪ್ರತಿ ಎಕರೆಗೆ 25 ಸಾವಿರ ಹಾಗೂ ಕೇಂದ್ರ ಸರ್ಕಾರದಿಂದ 25 ಸಾವಿರ ಸೇರಿ ಒಟ್ಟು 50 ಸಾವಿರ ಪರಿಹಾರ ನೀಡಬೇಕು ಎಂದು ಸಂಘಟನೆಗಳು ಒತ್ತಾಯಿಸಿದರು. ಬರಗಾಲದಿಂದ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗದ ಕೊರತೆ ಉಂಟಾಗಿದ್ದು, ಕೃಷಿ ಕೂಲಿಕಾರರು ಹಾಗೂ ಸಣ್ಣ ರೈತರು ವಲಸೆ ಹೋಗುವುದನ್ನು ತಡೆಯಲು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವರ್ಷಕ್ಕೆ 200 ದಿನಗಳ ಕೆಲಸ ಒದಗಿಸಿ, ದಿನಗೂಲಿಯನ್ನು 700 ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಎನ್‌ಆರ್‌ಬಿಸಿ ಬಲದಂಡೆ ಕಾಲುವೆಗೆ ನವೆಂಬರ್ ೩೦ರವರೆಗೆ ಹಾಗೂ ತುಂಗಭದ್ರಾ ಎಡದಂಡೆ ಕಾಲುವೆಗೆ ಡಿಸೆಂಬರ್ ೩೧ರವರೆಗೆ ನೀರು ಹರಿಸಬೇಕು. ಪಂಪ್‌ಸೆಟ್ ಹೊಂದಿರುವ ರೈತರಿಗೆ ಪ್ರತಿದಿನ ಏಳು ಗಂಟೆಗಳ ಕಾಲ ನಿರಂತರ ವಿದ್ಯುತ್ ಪೂರೈಸಬೇಕು. ಸುಟ್ಟುಹೋದ ವಿದ್ಯುತ್ ಪರಿವರ್ತಕಗಳನ್ನು ತಕ್ಷಣ ಬದಲಾಯಿಸಬೇಕು. ಬರಗಾಲದ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಪ್ರತಿ ಹೋಬಳಿಯಲ್ಲಿ ಮೇವು ಕೇಂದ್ರಗಳನ್ನು ಆರಂಭಿಸಿ ಉಚಿತವಾಗಿ ಮೇವು ವಿತರಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ದೀರ್ಘಕಾಲದಿಂದ ಸರ್ಕಾರಿ ಜಮೀನಿನಲ್ಲಿ ವಾಸಿಸುತ್ತಿರುವ ಅರ್ಹ ಕುಟುಂಬಗಳಿಗೆ ಹಕ್ಕುಪತ್ರ ನೀಡಬೇಕು. ಮನೆ ಹಾಗೂ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ನಿವೇಶನ ಮಂಜೂರು ಮಾಡಬೇಕು. ಭೂ ಒಡೆತನ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಿ, ಜಮೀನು ನೋಂದಣಿ ಮಾಡಿಕೊಡಬೇಕು. ಸರ್ಕಾರಿ ಗಾಯರಾಣ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಬಡ ರೈತರು ಸಲ್ಲಿಸಿರುವ ಫಾರಂ ನಂ. 50, 53 ಮತ್ತು 57ರ ಅರ್ಜಿಗಳನ್ನು ಪರಿಶೀಲಿಸಿ, ಅರ್ಹರಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು.

ಬರಗಾಲದ ಹಿನ್ನೆಲೆಯಲ್ಲಿ ಕರ ವಸೂಲಿ ಸ್ಥಗಿತಗೊಳಿಸಿ, ಸಣ್ಣ ಮತ್ತು ಮಧ್ಯಮ ರೈತರ ಸಾಲ ಮನ್ನಾ ಮಾಡಬೇಕು. ಎಲ್ಲ ಅರ್ಹ ಬಡ ಕುಟುಂಬಗಳಿಗೆ ಪಡಿತರ ಚೀಟಿ ವಿತರಿಸಬೇಕು. ಪ್ರತಿ ಕುಟುಂಬಕ್ಕೆ 50 ಕೆ.ಜಿ. ದವಸಧಾನ್ಯಗಳನ್ನು ನೀಡಬೇಕು. ಕಳೆದ ಐದು ತಿಂಗಳಿಂದ ಬಾಕಿ ಉಳಿದಿರುವ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲರ ಮಾಸಾಶನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಸಮರ್ಪಕವಾಗಿ ನೀರು ಪೂರೈಸಬೇಕು. ಒಳಬಳ್ಳಾರಿ ಏತ ನೀರಾವರಿ ಯೋಜನೆಯನ್ನು ಪ್ರಾರಂಭಿಸಬೇಕು ಎಂದು ಮನವಿ ಮಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಗಣಿಗಾರಿಕೆ ಆರಂಭಿಸಿ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು. ಮತದಾನದ ಹಕ್ಕಿನ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಹಾಗೂ ಅವೈಜ್ಞಾನಿಕ ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಸಂಘಟನೆಗಳು ಆಗ್ರಹಿಸಿದರು.
ಜಿಲ್ಲೆಯಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಕುರಿತು ಸೂಕ್ತ ತನಿಖೆ ನಡೆಸಿ ಕ್ರಮ ವಹಿಸಬೇಕು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮೀಸಲಾತಿ ಬದಲಾವಣೆಗೆ 150ಕ್ಕೂ ಹೆಚ್ಚು ಆಕ್ಷೇಪಣೆ ಸಲ್ಲಿಕೆ!

ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಬಸವಂತ್ರಾಯಗೌಡ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಕರಿಯಪ್ಪ ಅಚ್ಚೊಳ್ಳಿ, ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ನರಸಣ್ಣ ನಾಯಕ, ಜಿಲ್ಲಾ ಉಪಾಧ್ಯಕ್ಷ ಕೆ.ಜಿ. ವೀರೇಶ, ಸಿಂಧನೂರು ತಾಲೂಕು ಕಾರ್ಯದರ್ಶಿ ಅಪ್ಪಣ್ಣ ಕಾಂಬ್ಳೆ, ದೇವದುರ್ಗ ತಾಲೂಕು ಅಧ್ಯಕ್ಷ ಹನುಮಂತ ಗುರಿಕಾರ, ತಾಲೂಕು ಕಾರ್ಯದರ್ಶಿ ಮೌನೇಶ ದಾಸರ, ಸಿಂಧನೂರು ತಾಲೂಕು ಅಧ್ಯಕ್ಷ ವಿರುಪಾಕ್ಷಪ್ಪಗೌಡ, ತಾಲೂಕು ಕಾರ್ಯದರ್ಶಿ ಶ್ರೀನಿವಾಸ ರೆಡ್ಡಿ, ಕೃಷಿ ಕೂಲಿಕಾರರ ಸಂಘದ ಸಿಂಧನೂರು ತಾಲೂಕು ಅಧ್ಯಕ್ಷ ಶಂಕ್ರಪ್ಪ, ಲಿಂಗಸೂಗೂರು ತಾಲೂಕು ಅಧ್ಯಕ್ಷ ಪೆಂಚಲಯ್ಯ, ತಾಲೂಕು ಕಾರ್ಯದರ್ಶಿ ಲಿಂಗಪ್ಪ, ಮಸ್ಕಿ ತಾಲೂಕು ಸಂಚಾಲಕ ಹನುಮಂತ ಬಲದಂಡೆ, ದೇವದುರ್ಗ ತಾಲೂಕು ಸಂಚಾಲಕ ಸುರೇಶ, ರಾಯಚೂರು ತಾಲೂಕು ಕಾರ್ಯದರ್ಶಿ ರಂಗಪ್ಪ ಯಾಪಲದಿನ್ನಿ, ತಾಲೂಕು ಅಧ್ಯಕ್ಷ ರಂಗನಗೌಡ ಕೊತ್ತದೊಡ್ಡಿ, ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಸಮಿತಿ ಜಂಟಿ ಕಾರ್ಯದರ್ಶಿ ಇಸ್ಮಾಯಿಲ್ ಸಾಬ್ ಕಲ್ಮಲಾ, ಜಿಲ್ಲಾ ಸಮಿತಿ ಸದಸ್ಯ ರಮೇಶ ಕಲ್ಮಲಾ ಹಾಗೂ ರಾಯಚೂರು ತಾಲೂಕು ಸಮಿತಿ ಸದಸ್ಯೆ ಅಣ್ಣಮ್ಮ ಕಾಡ್ಲೂರು ಸೇರಿದಂತೆ ಹಲವರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಉಡುಪಿ ಜಿಲ್ಲೆಯಲ್ಲಿ 47 ಮಂದಿ ವಿದೇಶಿ ಪೌರತ್ವ ಹೊಂದಿರುವವರು ಪತ್ತೆ

ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌)-2026...

ಉಡುಪಿ | ಮಣಿಪಾಲದಲ್ಲಿ ಮಾರಕಾಸ್ತ್ರಗಳೊಂದಿಗೆ ಯುವಕನ ಬಂಧನ

ಉಡುಪಿ ನಗರದ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ...

ಉಡುಪಿ | ಕೋಟ ಜಂಕ್ಷನ್ ಅಪಘಾತ; ಗಾಯಗೊಂಡಿದ್ದ ಕಾರು ಚಾಲಕ ಸಾವು

ಕೋಟ ಜಂಕ್ಷನ್‌ನಲ್ಲಿ ಅ. 26ರಂದು ಸಂಭವಿಸಿದ ಸೈಕಲ್‌ ಮತ್ತು ಕಾರಿನ ನಡುವಿನ...

ಉಡುಪಿ | ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾಗದಿರಲಿ: ಅಶೋಕ್ ಕುಮಾರ್ ಕೊಡವೂರು

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು....