ರಾಯಚೂರು | ಸರ್ವಿಸ್ ರಸ್ತೆ ನಿರ್ಮಿಸಲು ರೈತರು, ಗ್ರಾಮಸ್ಥರು ಪ್ರತಿಭಟನೆ

Date:

ಸಿರವಾರ ತಾಲ್ಲೂಕಿನ ಗೋಲದಿನ್ನಿ ಗ್ರಾಮದ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 748ಎ (ಬೆಳಗಾವಿ-ವಯಾ ಹುನುಗುಂದ-ರಾಯಚೂರು) ರಾಯಚೂರು-ಲಿಂಗಸುಗೂರು ಮುಖ್ಯರಸ್ತೆಯಲ್ಲಿ ಸರ್ವಿಸ್ ರಸ್ತೆ ನಿರ್ಮಿಸದೇ ಅವೈಜ್ಞಾನಿಕ ಕಾಮಗಾರಿ ಕೈಗೊಂಡಿದ್ದಾರೆ ಎಂದು ಆರೋಪಿಸಿ ರೈತರು ಹಾಗೂ ಗ್ರಾಮಸ್ಥರು ರಸ್ತೆ ಕಾಮಗಾರಿ ಸ್ಥಳದಲ್ಲಿ ಮಂಗಳವಾರ ಅನಿರ್ದಿಷ್ಟಾವಧಿ ಧರಣಿ ಕೈಗೊಂಡಿದ್ದಾರೆ.

- Advertisement -

ಗೋಲದಿನ್ನಿ ಗ್ರಾಮದ ಜನರ ಓಡಾಟಕ್ಕೆ, ಹೊಲಗಳಿಗೆ ಹೋಗಲು ಸರ್ವಿಸ್ ರಸ್ತೆ ಮಾಡಿಲ್ಲ. ಇದರಿಂದ ನಿತ್ಯದ ಓಡಾಟಕ್ಕೆ ತೊಂದರೆಯಾಗುತ್ತಿದೆ. ರಸ್ತೆಯ ಎರಡೂ ಬದಿಯಲ್ಲಿ ಸರ್ವಿಸ್ ರಸ್ತೆ ನಿರ್ಮಿಸಬೇಕು ಎಂದು ಒತ್ತಾಯಿಸಿದರು. ಗೋಲದಿನ್ನಿ-ಕುರುಕುಂದಾ ಮುಖ್ಯರಸ್ತೆ ಮೂಲಕ ಸಂಪರ್ಕ ಹೊಂದಿದ್ದು, ಈ ರಸ್ತೆಯಲ್ಲಿ ಬೃಹತ್ ಪ್ರಮಾಣದ ಸೇತುವೆ ನಿರ್ಮಾಣ ಮಾಡಲಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ವಾಹನಗಳ ಓಡಾಟಕ್ಕೆ ತೊಂದರೆಯಾಗಲಿದೆ ಎಂದರು. ಮನವಿಗೆ ಸ್ಪಂದಿಸದಿದ್ದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತಡೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಮೀಸಲಾತಿ ಬದಲಾವಣೆಗೆ 150ಕ್ಕೂ ಹೆಚ್ಚು ಆಕ್ಷೇಪಣೆ ಸಲ್ಲಿಕೆ!

ಸೂಗರಡ್ಡಿಗೌಡ, ಸುರೇಶಗೌಡ ಬಲ್ಲಟಗಿ, ರಾಮನಗೌಡ ಬಲ್ಲಟಗಿ, ಬಸವರಾಜ ತೋಟದ, ಬಸವರಾಜ ಕಲ್ಮಾಲ, ರಮೇಶ ಧಣಿ, ಪಂಪಣ್ಣ ಸಾದಾಪುರ, ಪ್ರಭು, ಸಿದ್ದನಗೌಡ ಪಟಕನದೊಡ್ಡಿ ಸೇರಿ ರೈತರು ಮತ್ತು ಗ್ರಾಮಸ್ಥರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸನ್ನತ್ತಿ ಬ್ಯಾರೇಜ್ ಸಂತ್ರಸ್ತ ರೈತರಿಗೆ 13 ವರ್ಷವಾದರೂ ಪರಿಹಾರವಿಲ್ಲ!

ಸನ್ನತ್ತಿ ಬ್ರಿಡ್ಜ್ ಕಂ ಬ್ಯಾರೇಜ್ ಹಿನ್ನೀರಿನಿಂದ ಭೂಮಿ ಕಳೆದುಕೊಂಡ ಚಿತ್ತಾಪುರ ಹಾಗೂ...

SIR ಉಡುಪಿ ಜಿಲ್ಲೆಯಲ್ಲಿ 47 ಮಂದಿ ವಿದೇಶಿ ಪೌರತ್ವ ಹೊಂದಿರುವವರು ಪತ್ತೆ

ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌)-2026...

ಉಡುಪಿ | ಮಣಿಪಾಲದಲ್ಲಿ ಮಾರಕಾಸ್ತ್ರಗಳೊಂದಿಗೆ ಯುವಕನ ಬಂಧನ

ಉಡುಪಿ ನಗರದ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ...

ಉಡುಪಿ | ಕೋಟ ಜಂಕ್ಷನ್ ಅಪಘಾತ; ಗಾಯಗೊಂಡಿದ್ದ ಕಾರು ಚಾಲಕ ಸಾವು

ಕೋಟ ಜಂಕ್ಷನ್‌ನಲ್ಲಿ ಅ. 26ರಂದು ಸಂಭವಿಸಿದ ಸೈಕಲ್‌ ಮತ್ತು ಕಾರಿನ ನಡುವಿನ...