ರಾಯಚೂರು | ಜೋಳ ಖರೀದಿ ಹಣ ಪಾವತಿಗೆ ಆಗ್ರಹಿಸಿ ರಸ್ತೆ ತಡೆದು ರೈತರು ಪ್ರತಿಭಟನೆ

Date:

ರೈತರ ಖಾತೆಗೆ ಜೋಳದ ಬಾಕಿ ಹಣ ಜಮಾ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

- Advertisement -

ಸಿಂಧನೂರು ತಾಲ್ಲೂಕಿನ ಪೋತ್ನಾಳ್‌ನ ಬಳಗಾನೂರು ಕ್ರಾಸ್‌ನಲ್ಲಿ ನೂರಾರು ರೈತರು ಬೇಡಿಕೆ ಈಡೇರಿಕೆಗೆ ಘೋಷಣೆ ಕೂಗಿ ಆಗ್ರಹಿಸಿ ತಹಸೀಲ್ದಾರ್ ಅರುಣ್.ಎಚ್.ದೇಸಾಯಿ ಅವರಿಗೆ ಮನವಿಪತ್ರವನ್ನು ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಪ್ರತಿಭಟನೆ ಉದ್ದೇಶಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಅಮೀನಪಾಷಾ ದಿದ್ದಿಗಿ ಮಾತನಾಡಿ, “ಮುಂಗಾರು ಹಂಗಾಮಿನಲ್ಲಿ ಜೋಳ ಮಾರಾಟ ಮಾಡಿ ಮೂರು ತಿಂಗಳಾದರೂ ಇಲ್ಲಿಯವರೆಗೂ ರೈತರ ಖಾತೆಗೆ ಹಣ ಜಮಾ ಆಗಿಲ್ಲ. ಪ್ರಸ್ತುತ ಬಿತ್ತನೆ ಕಾರ್ಯ ಆರಂಭವಾಗಿದ್ದು ರೈತರು ಕೃಷಿ ಚಟುವಟಿಕೆ ಕೈಗೊಳ್ಳಲು ಹಣಕಾಸಿನ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

Advertisements

ಮತ್ತೋರ್ವ ಮುಖಂಡ ಬಸವರಾಜ ಹಂಚಿನಾಳ ಮಾತನಾಡಿ, “ರೈತರು ಅತ್ಯಂತ ಸಂಕಷ್ಟದಲ್ಲಿ ಬೇಸಾಯ ಮಾಡುತ್ತಿದ್ದಾರೆ. ಕಳೆದ ಬಾರಿಯೂ ಖರೀದಿ ಕೇಂದ್ರದ ಮೂಲಕ ಜೋಳ ಖರೀದಿಗೆ ಹಲವು ನಿಬಂಧನೆಗಳನ್ನು ಹೇರಲಾಗಿತ್ತು. ಮಾರಾಟ ಮಾಡಿದ ನಂತರ ವಿಳಂಬವಾಗಿ ಹಣ ಜಮಾ ಮಾಡಲಾಯಿತು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರನ್ನು ಸಂಪೂರ್ಣ ಕಡೆಗಣಿಸಿದ್ದು, ಈ ಕೂಡಲೇ ಕ್ರಮಕ್ಕೆ ಮುಂದಾಗಬೇಕು. ಇಲ್ಲದೇ ಹೋದರೆ ಹಣ ಪಾವತಿ ಮಾಡುವವರೆಗೂ ಸಂಘಟನೆಯ ವತಿಯಿಂದ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಸಿದರು.

ರೈತರು ರಸಗೊಬ್ಬರ ಖರೀದಿಗೆ ಎಫ್‌ಐಡಿಯನ್ನು ಕಡ್ಡಾಯಗೊಳಿಸಲಾಗಿದ್ದು, ಇದರಿಂದ ಬಹಳಷ್ಟು ತೊಂದರೆ ಎದುರಿಸುತ್ತಿದ್ದಾರೆ. ಹಾಗಾಗಿ ಈ ನಿಬಂಧನೆಯನ್ನು ಕೈಬಿಟ್ಟು ರೈತರಿಗೆ ಅಗತ್ಯವಿರುವಷ್ಟು ರಸಗೊಬ್ಬರ ವಿತರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಎಫ್‌ಐಡಿ ರದ್ದು, ಜೋಳದ ಬಾಕಿ ಹಣ ಪಾವತಿಗೆ ಆಗ್ರಹಿಸಿ ಜೂ.22 ರಂದು ರಸ್ತೆ ತಡೆ ಪ್ರತಿಭಟನೆ

ಪ್ರತಿಭಟನೆಯಲ್ಲಿ ಚನ್ನನಗೌಡ, ಯೂಸೂಫ್, ತಿಮ್ಮಣ್ಣ ರಾಮತ್ನಾಳ, ರಾಗಲಪರ್ವಿ ಚನ್ನಬಸಪ್ಪ, ಪುಲದಿನ್ನಿ ಬಸಣ್ಣ, ಧುಮತಿ ಅಯ್ಯಪ್ಪ, ಹೆಡಗಿನಾಳ ಮಲ್ಲಿಕಾರ್ಜುನ ಸೇರಿದಂತೆ 400ಕ್ಕೂ ಹೆಚ್ಚು ರೈತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರ: ದುರಸ್ತಿಗೆ ದಲಿತ ಸೇನೆ ಆಗ್ರಹ

ಮಳಖೇಡದಿಂದ ಚಿತ್ತಾಪುರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ...

ಕಲಬುರಗಿ ಜಿಲ್ಲೆಯ 4.77 ಲಕ್ಷ ಮತದಾರರು ಎಲ್ಲಿ ಹೋದರು? ಎಸ್‌ಐಆರ್ ವಿರುದ್ಧ ಸಿಪಿಐ ತೀವ್ರ ಆಕ್ರೋಶ

ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಬಳಿಕ ಲಕ್ಷಾಂತರ ಮತದಾರರ ಹೆಸರುಗಳು...

ಉಡುಪಿ | ಓವರ್‌ಪಾಸ್‌ ಉದ್ಘಾಟನೆಯಾದರೂ ಸರ್ವಿಸ್‌ ರಸ್ತೆಗೆ ಮುಕ್ತಿ ಸಿಕ್ಕಿಲ್ಲ; ಧೂಳಿನಿಂದ ವಾಹನ ಸವಾರರಿಗೆ ಸಂಕಷ್ಟ

ಉಡುಪಿ ನಗರದ ಕರಾವಳಿ ಜಂಕ್ಷನ್‌ನಿಂದ ಕಿನ್ನಿಮೂಲ್ಕಿವರೆಗಿನ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿರುವ ಸರ್ವಿಸ್‌...