ರಾಯಚೂರು | ನಾರಾಯಣಪುರ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ದೇವದುರ್ಗದಲ್ಲಿ ರೈತರ ರಸ್ತೆ ತಡೆ ಪ್ರತಿಭಟನೆ

Date:

ನಾರಾಯಣಪುರ ಬಲದಂಡೆ ಕಾಲುವೆಯ 16, 17 ಮತ್ತು 18ನೇ ವಿತರಣಾ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸದ ಹಿನ್ನೆಲೆಯಲ್ಲಿ ಕಳೆದ 15 ದಿನಗಳಿಂದ ಹೋರಾಟ ನಡೆಸುತ್ತಿದ್ದ ರೈತರು, ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ದೇವದುರ್ಗದಲ್ಲಿ ಶನಿವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

- Advertisement -

ಗಬ್ಬೂರು-ದೇವದುರ್ಗ ಮಾರ್ಗದ ಸುಂಕೇಶ್ವರಹಾಳ ಗ್ರಾಮದ ಬಸವಣ್ಣ ಕ್ಯಾಂಪ್ ಸಮೀಪದ 17ನೇ ಉಪಕಾಲುವೆ ಬಳಿ ರೈತರು ಮುಖ್ಯರಸ್ತೆ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಕಾಲುವೆಯ ಕೊನೆಯ ಭಾಗದ ರೈತರಿಗೆ ನೀರು ತಲುಪದೆ ಬೆಳೆಗಳಿಗೆ ತೊಂದರೆಯಾಗುತ್ತಿದೆ. ಆದರೂ ನೀರಾವರಿ ಇಲಾಖೆ ಅಧಿಕಾರಿಗಳು, ಜಿಲ್ಲಾಡಳಿತ ಹಾಗೂ ಸರ್ಕಾರ ರೈತರ ಸಮಸ್ಯೆಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ (ಇಇ) ಮಂಜುನಾಥ್ ಹಲಗೆರ್ ಹಾಗೂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ರೈತರೊಂದಿಗೆ ಮಾತುಕತೆ ನಡೆಸಿದರು. ಬಳಿಕ ನೀರಾವರಿ ಇಲಾಖೆಯ ಅಧೀಕ್ಷಕ ಎಂಜಿನಿಯರ್ (ಎಸ್‌ಇ) ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅಧಿಕಾರಿಗಳು, ಪ್ರಸ್ತುತ 2,400 ಕ್ಯೂಸೆಕ್ ಇದ್ದ ನೀರಿನ ಹರಿವನ್ನು 2,750 ಕ್ಯೂಸೆಕ್‌ಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

ಅಲ್ಲದೆ, ರವಿವಾರ ಬೆಳಿಗ್ಗೆ 10 ಗಂಟೆಗೆ ನಿಗದಿತ ಗೇಜ್ ಕಾಯ್ದುಕೊಂಡು ಕಾಲುವೆಯ ಕೊನೆಯ ಭಾಗದ ರೈತರಿಗೂ ನೀರು ತಲುಪಿಸುವುದಾಗಿ ಭರವಸೆ ನೀಡಿದರು. ಅಧಿಕಾರಿಗಳ ಭರವಸೆಯ ಹಿನ್ನೆಲೆಯಲ್ಲಿ ರೈತರು ಸದ್ಯಕ್ಕೆ ರಸ್ತೆ ತಡೆ ಹೋರಾಟವನ್ನು ಹಿಂಪಡೆದರು.

ನಾಲ್ಕು ಗಂಟೆಗಳ ರಸ್ತೆ ತಡೆ

ಸುಮಾರು ನಾಲ್ಕು ಗಂಟೆಗಳ ಕಾಲ ನಡೆದ ರಸ್ತೆ ತಡೆ ಪ್ರತಿಭಟನೆಯಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಅಧಿಕಾರಿಗಳು ನೀಡಿದ ಭರವಸೆಯಂತೆ ರವಿವಾರ ಬೆಳಿಗ್ಗೆ 10 ಗಂಟೆಗೆ ಸಮರ್ಪಕ ಪ್ರಮಾಣದಲ್ಲಿ ನೀರು ಹರಿಸದಿದ್ದರೆ ಮತ್ತೆ ಬೀದಿಗಿಳಿದು ಉಗ್ರ ಹೋರಾಟ ನಡೆಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈ ಸಂದರ್ಭದಲ್ಲಿ ಪ್ರಭಾಕರ್ ಪಾಟೀಲ್, ಇಂಗಳದಾಳ್ ರಮೇಶ್, ಅಬಕಾರಿ ಶರಣಪ್ಪ, ಹುಸೇನಪುರದ ಉಮ್ಮಣ್ಣ ನಾಯಕ್, ಮಲ್ಲಪ್ಪಗೌಡ, ಮಲ್ಲಪ್ಪ ಪೂಜಾರಿ, ಹುಚ್ಚ ಪೀರ್ ಸಾಬ್, ಶರಬಣ್ಣ ಸಾಹುಕಾರ್ ಸೇರಿದಂತೆ ಇಂಗಳದಾಳ, ಬೂದಿನಾಳ, ಹದ್ದಿನಾಳ, ಸಂಕೇಶ್ವರ ಹಾಳ್, ಜಿನ್ನಾಪುರ, ಕೂಡ್ಲಿಗಿ, ಗಬ್ಬೂರು, ಮಲದಕಲ್ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ಗಬ್ಬೂರು ಪೊಲೀಸ್ ಇನ್‌ಸ್ಪೆಕ್ಟರ್ ಕೂಡ ಸ್ಥಳದಲ್ಲಿದ್ದು ಪರಿಸ್ಥಿತಿಯನ್ನು ಗಮನಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...