ರಾಯಚೂರು | ನಾರಾಯಣಪುರ ಬಲದಂಡೆ ಕಾಲುವೆಗೆ ನೀರು ಹರಿಸದ ಅಧಿಕಾರಿಗಳ ವಿರುದ್ಧ ಅ.2ರಂದು ರೈತರಿಂದ ಮುತ್ತಿಗೆ

Date:

ನಾರಾಯಣಪುರ ಬಲದಂಡೆ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸದ ನಿಗಮದ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಅ. 2ರಂದು ಭೀಮರಾಯನಗುಡಿಯ ಮುಖ್ಯ ಅಭಿಯಂತರರ ಕಚೇರಿಗೆ ರೈತರಿಂದ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ಪ್ರಭಾಕರ ಪಾಟೀಲ ಇಂಗಳದಾಳ ತಿಳಿಸಿದ್ದಾರೆ.

- Advertisement -

ದೇವದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಗಾರು ಮಳೆ ಸಮರ್ಪಕವಾಗಿ ಆಗದಿರುವುದರಿಂದ ಈ ಭಾಗದ ರೈತರು ನಾರಾಯಣಪುರ ಬಲದಂಡೆ ಕಾಲುವೆ ನೀರಿನ ಮೇಲೆ ಅವಲಂಬಿತರಾಗಿದ್ದಾರೆ. ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸದ ಕಾರಣ ರೈತರ ಜಮೀನುಗಳಲ್ಲಿ ಬೆಳೆದ ಬೆಳೆಗಳು ಒಣಗುತ್ತಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಜಿಲ್ಲೆಯ ಹಲವು ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದ್ದರೂ ನಿಗಮದ ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸದೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಜಿಲ್ಲೆಯಲ್ಲಿ ಭೀಕರ ಬರಗಾಲದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಈಗಾಗಲೇ ವಿದ್ಯುತ್ ಪೂರೈಕೆ, ಕಾಲುವೆಗಳ ಮೂಲಕ ರೈತರಿಗೆ ಸಮರ್ಪಕ ನೀರು ಹರಿಸುವುದು, ಬಾಕಿ ಇರುವ ಜೋಳದ ಹಣ ಬಿಡುಗಡೆ ಸೇರಿದಂತೆ ಜಿಲ್ಲೆಯ ಸಮಸ್ಯೆಗಳ ಕುರಿತು ಚರ್ಚಿಸಲಾಗಿದೆ. ಜಿಲ್ಲಾ ಕೇಂದ್ರದಲ್ಲಿ 10 ಗಂಟೆ ಹಾಗೂ ತಾಲೂಕುಗಳಲ್ಲಿ 7 ಗಂಟೆ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಸ್ಪಂದಿಸಿದ್ದಾರೆ. ಆದರೆ ನಿಗಮದ ಅಧಿಕಾರಿಗಳು ಮಾತ್ರ ಹಲವು ಕಾರಣಗಳನ್ನು ಹೇಳಿ ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ನಾರಾಯಣಪುರ ಬಲದಂಡೆ ಕಾಲುವೆಗೆ ನೀರು ಹರಿಸುವ ಕುರಿತು ಐಸಿಸಿ ಸಭೆಯಲ್ಲಿ 14 ದಿನ ಚಾಲ್ತಿ ಹಾಗೂ 10 ದಿನ ಇಲ್ಲಿ ತಗೊಳಿಸುವ ವಾರಬಂದಿ ಪದ್ಧತಿ ನಿರ್ಧರಿಸಲಾಗಿತ್ತು. ಆದರೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಪ್ರಭಾವಿ ರಾಜಕಾರಣಿಯ ತು ಕೇಳಿ ವಾರಬಂದಿ ಮಾಡುವ ಪೂರ್ವದಲ್ಲಿ ಸೆ. 25, 26 ಹಾಗೂ 27ರಂದು ಮೂರು ದಿನ ಕಾಲುವೆ ನೀರನು ರೈತರ ಜಮೀನುಗಳಿಗೆ ಹರಿಸದೆ, ಕಾಲುವೆ ಕಾಮಗಾರಿ ಪ್ರಗತಿಯಲ್ಲಿರುವ 95ನೇ ಕಿ.ಮೀ.ಗೆ ನೀರು ಹರಿಸಲಾಗಿದೆ. ಇದರಿಂದ 16, 17 ಹಾಗೂ 18ನೇ ಕಾಲುವೆಗಳಿಗೆ ನೀರು ಬಾರದೆ ರೈತರ ಬೆಳೆಗಳು ಸಂಪೂರ್ಣ ಒಣಗುತ್ತಿವೆ. ಇದಕ್ಕೆ ನಿಗಮದ ಅಧಿಕಾರಿಗಳೇ ನೇರ ಹೊಣೆಯಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾರಾಯಣಪುರ ಬಲದಂಡೆ ಕಾಲುವೆಯ 95ನೇ ಕಿ.ಮೀ. ಕ್ರಾಸ್ ರೆಗ್ಯುಲೇಟರ್ ಗೇಟ್‌ಗೆ ಸಿಸಿ ಕ್ಯಾಮೆರಾ ಅಳವಡಿಸಬೇಕು. 7 ದಿನಗಳ ವಾರಬಂದಿ ಜಾರಿಗೊಳಿಸಬೇಕು. ನಿಗಮದ ಅಧಿಕಾರಿಗಳು ರೈತರ ಸಮಸ್ಯೆಯ ಗಂಭೀರತೆಯನ್ನು ಅರಿತು ತಕ್ಷಣ ಕ್ರಮ ಕೈಗೊಳ್ಳಬೇಕು. ರೈತರ ಜಮೀನುಗಳಿಗೆ ಕಾಲುವೆ ನೀರು ಸಮರ್ಪಕವಾಗಿ ಹರಿಸದಿದ್ದರೆ ಅ. 2ರಂದು ಭೀಮರಾಯನಗುಡಿಯಲ್ಲಿರುವ ಮುಖ್ಯ ಅಭಿಯಂತರರ ಕಚೇರಿಗೆ ರೈತರು ಮುತ್ತಿಗೆ ಹಾಕಲಾಗುವುದು ಎಂದು ಪ್ರಭಾಕರ ಪಾಟೀಲ ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬರ ಪರಿಹಾರ, ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ: ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಹಾಜಿ ಮಸ್ತಾನಸಾಬ್ ಬಿ. ಗಣೇಕಲ್, ಮುಖಂಡರಾದ ಹನುಮಗೌಡ ಜಾಲಹಳ್ಳಿ, ಉಮ್ಮಣ್ಣ ಮಲದಕಲ್, ಹುಸೇನ ಬಾಷಾ, ರಮೇಶ ಸುಂಕೇಶ್ವರಹಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ...

ಉಡುಪಿ | ಹಿರಿಯ ನಾಗರಿಕರನ್ನು ಗೌರವಯುತವಾಗಿ ನೋಡಿಕೊಳ್ಳಿ: ಎಂ.ಎ. ಗಫೂರ್

ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನಮಾನ ಹೊಂದಿದ್ದು, ಅವರನ್ನು ಗೌರವಯುತವಾಗಿ...

ಎಂಆರ್‌ಪಿಎಲ್ ದುರಂತ: ಮೃತ ಮನೀಶ್ ಕುಟುಂಬಕ್ಕೆ ₹1.20 ಕೋಟಿ ಪರಿಹಾರ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟ...

ಅಂಕೋಲಾ | ಬಸ್-ಲಾರಿ ಡಿಕ್ಕಿ: ಒಂದೂವರೆ ವರ್ಷದ ಮಗು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಅಂಕೋಲಾ: ತಾಲೂಕಿನ ಬೆಳಸೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ...