ರಾಯಚೂರು ತಾಲ್ಲೂಕಿನ ಹಂಚಿನಾಳ ಕ್ಯಾಂಪ್ ಸಮೀಪದ ಪೆಟ್ರೋಲ್ ಬಂಕ್‌ನಲ್ಲಿ ಗುರುವಾರ ನಡೆದ ಜಗಳದಲ್ಲಿ ಮಧ್ಯಸ್ಥಿಕೆ ವಹಿಸಲು ಬಂದಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಹಂಚಿನಾಳ ಗ್ರಾಮದ ಮೇಘನಾಥ್ (42) ಮೃತಪಟ್ಟವರು. ಬಾಟಲಿಯಲ್ಲಿ ಪೆಟ್ರೋಲ್ ಪಡೆಯಲು ಬಂದಿದ್ದ ವ್ಯಕ್ತಿ ಮತ್ತು ಪೆಟ್ರೋಲ್ ಬಂಕ್ ಸಿಬ್ಬಂದಿ ನಡುವೆ ₹10 ಹಣದ ವಿಚಾರವಾಗಿ ವಾಗ್ವಾದ ಆರಂಭಗೊಂಡಿತ್ತು. ಮಾತಿನ ಚಕಮಕಿ ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡು ಎರಡೂ ಕಡೆಯವರ ನಡುವೆ ಘರ್ಷಣೆ ಉಂಟಾಯಿತು ಎಂದು ತಿಳಿದು ಬಂದಿದೆ.
ಈ ವೇಳೆ ಪೆಟ್ರೋಲ್ ಖರೀದಿಸಲು ಬಂದಿದ್ದ ವ್ಯಕ್ತಿ ತನ್ನ ಸ್ನೇಹಿತ ಮೇಘನಾಥ್ ಅವರಿಗೆ ಕರೆ ಮಾಡಿ ಸ್ಥಳಕ್ಕೆ ಕರೆದಿದ್ದಾನೆ. ಸ್ಥಳಕ್ಕೆ ಆಗಮಿಸಿದ ಮೇಘನಾಥ್ ತಮ್ಮ ಸ್ನೇಹಿತನ ಪರವಾಗಿ ಸಿಬ್ಬಂದಿಯನ್ನು ಪ್ರಶ್ನಿಸಿದ್ದು, ಇದರಿಂದ ಘರ್ಷಣೆ ಮತ್ತಷ್ಟು ತೀವ್ರಗೊಂಡಿದೆ.
ಆವೇಶದಲ್ಲಿ ಎರಡೂ ಗುಂಪಿನವರು ಕಟ್ಟಿಗೆಗಳಿಂದ ಪರಸ್ಪರ ಹಲ್ಲೆ ನಡೆಸಿದ ವೇಳೆ ಮೇಘನಾಥ್ ಅವರ ತಲೆಗೆ ಗಂಭೀರ ಗಾಯವಾಗಿದೆ. ತಕ್ಷಣ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ನೆಟ್ವರ್ಕ್ ಸಮಸ್ಯೆ: ಬೆಟ್ಟದ ಮೇಲೆ ಕುಳಿತು ಎಸ್ಐಆರ್ ಮಾಹಿತಿ ಅಪ್‌ಲೋಡ್
ಘಟನೆ ಕುರಿತು ಮಾಹಿತಿ ಪಡೆದ ಇಡಪನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.




