ರಾಯಚೂರು | ಕುಡಿಯುವ ನೀರಿಗಾಗಿ ಹೋರಾಟ; 70-80 ಗ್ರಾಮಸ್ಥರ ಮೇಲೆ ಪ್ರಕರಣ, ಪಿಡಿಓ ವಿರುದ್ಧ ಜನರ ಆಕ್ರೋಶ

Date:

ಲಿಂಗಸುಗೂರು ತಾಲ್ಲೂಕಿನ ಸರ್ಜಾಪುರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡ ಹಿನ್ನೆಲೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಕಾರಣಕ್ಕೆ ಗ್ರಾಮ ಪಂಚಾಯತ್ ಪಿಡಿಒ ಗ್ರಾಮಸ್ಥರ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಆಕ್ರೋಶಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

- Advertisement -

ಗ್ರಾಮ ಪಂಚಾಯತ್ ಕಚೇರಿ ಮುಂದೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸುಮಾರು 70-80 ಗ್ರಾಮಸ್ಥರ ವಿರುದ್ಧ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಸಹಾಯಕ ಆಯುಕ್ತರಾದ ಬಸವಣೆಪ್ಪ ಕಲಶಟ್ಟಿಯವರಿಗೆ ಮನವಿ ಪತ್ರ ಸಲ್ಲಿಸಿದರು.

ಗ್ರಾಮದಲ್ಲಿ ಬಹುಕಾಲದಿಂದಲೇ ಕುಡಿಯುವ ನೀರಿನ ಸಮಸ್ಯೆ ಇದ್ದು, ಬೇಸಿಗೆ ಕಾಲದಲ್ಲಿ ಇದು ಮತ್ತಷ್ಟು ಉಲ್ಬಣವಾಗುತ್ತದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸುವಂತೆ ಹಲವು ಬಾರಿ ಪಿಡಿಓ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂಬ ಆರೋಪ ಕೇಳಿಬಂದಿದೆ.

ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ಪಿಡಿಓ ಶೋಭಾರಾಣಿ ಅವರು ಉಡಾಫೆಯಾಗಿ ವರ್ತಿಸಿದರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಪಿಡಿಓ ಶೋಭರಾಣಿ ನೀಡಿದ ದೂರಿನ ಪ್ರಕಾರ, ಸುಮಾರು 70-80 ಜನರು ಗುಂಪಾಗಿ ಗ್ರಾಮ ಪಂಚಾಯತ್ ಕಚೇರಿಗೆ ನುಗ್ಗಿ ಬೀಗ ಒಡೆದು ಒಳ ಪ್ರವೇಶಿಸಿದ್ದಾರೆ ಎಂದು ಪ್ರಕರಣ ದಾಖಲಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಜಿಲ್ಲಾ ಗೃಹ ರಕ್ಷದಳದ ಸಮಾದೇಷ್ಟರಾಗಿ ದೀಪಾ ಗೊಡೆಪಾಡ್ ನೇಮಕ

ಇದನ್ನು ಖಂಡಿಸಿದ ಗ್ರಾಮಸ್ಥರು ಪ್ರಕರಣಗಳನ್ನು ತಕ್ಷಣವೇ ಹಿಂಪಡೆಯಬೇಕು ಹಾಗೂ ಗ್ರಾಮಕ್ಕೆ ತಕ್ಷಣ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...