ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

Date:

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಹಾಗೂ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಸೇನೆ ಕರ್ನಾಟಕದ ರಾಯಚೂರು ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

- Advertisement -

ಜಿಲ್ಲೆಯಲ್ಲಿ ಸುಮಾರು 1454 ಸರ್ಕಾರಿ ಪ್ರಾಥಮಿಕ ಶಾಲೆಗಳು ಹಾಗೂ 239 ಸರ್ಕಾರಿ ಪ್ರೌಢಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ಶಾಲೆಗಳು ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಶಿಕ್ಷಣದ ಪ್ರಮುಖ ಕೇಂದ್ರಗಳಾಗಿವೆ. ಆದರೆ ಕಳೆದ ಕೆಲವು ವರ್ಷಗಳಲ್ಲಿ ಹಲವಾರು ಶಿಕ್ಷಕರು ವರ್ಗಾವಣೆಯಾಗಿ ಹೋಗಿದ್ದು, ಅವರ ಸ್ಥಾನಕ್ಕೆ ಹೊಸ ಶಿಕ್ಷಕರನ್ನು ನೇಮಕ ಮಾಡದೇ ಇರುವುದರಿಂದ ಪ್ರಸ್ತುತ ಸುಮಾರು 50 ಶೇಕಡಾ ಶಿಕ್ಷಕರ ಹುದ್ದೆಗಳು ಖಾಲಿ ಇರುವ ಪರಿಸ್ಥಿತಿ ಉಂಟಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರಕುವುದರಲ್ಲಿ ಅಡಚಣೆ ಉಂಟಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಶಿಕ್ಷಕರ ಕೊರತೆಯಿಂದಾಗಿ ಅನೇಕ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರ ಪರಿಣಾಮವಾಗಿ ಕನ್ನಡ ಮಾಧ್ಯಮ ಶಾಲೆಗಳ ಅಸ್ತಿತ್ವಕ್ಕೂ ಧಕ್ಕೆ ಉಂಟಾಗುತ್ತಿದೆ ಎಂದು ಕನ್ನಡ ಸೇನೆ ಆತಂಕ ವ್ಯಕ್ತಪಡಿಸಿದೆ.

ಇದಕ್ಕೆ ಜೊತೆಗೆ, “ಕನ್ನಡ ಉಳಿಸಿ – ಕನ್ನಡ ಬೆಳೆಸಿ” ಎಂಬ ಘೋಷಣೆಯಡಿ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ, ಕುಡಿಯುವ ನೀರು, ಸ್ಮಾರ್ಟ್ ಕ್ಲಾಸ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಅದರೊಂದಿಗೆ ರಾಯಚೂರು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಬೇಸಿಗೆ ಕಾಲ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಸಹ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ವಿಷಯದಲ್ಲಿ ಜಿಲ್ಲಾಧಿಕಾರಿಗಳು ವೈಯಕ್ತಿಕ ಆಸಕ್ತಿ ವಹಿಸಿ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಸೇನೆ ಕರ್ನಾಟಕದ ರಾಯಚೂರು ಜಿಲ್ಲಾ ಅಧ್ಯಕ್ಷ ಎಂ. ಬಸವರಾಜ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಈ ಸಂದರ್ಭದಲ್ಲಿ:ಗೋವಿಂದಪ್ಪ ಚವಾಣ್,ನಾಗಪ್ಪ,ಅಮರೇಶ ನಾಯಕ,ಮಂಜುನಾಥ್,ಶಿವರಾಜ್ ಬಡಿಗೇರ್,ವೀರನಗೌಡ ರಾಮಪ್ಪ ನಾಯಕ, ಪರಶುರಾಮ ಹಾಗೂ ಸಂಘಟನೆ ಕಾರ್ಯಕರ್ತರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...