ರಾಯಚೂರು | ಸುಸ್ಥಿರ ಕೃಷಿ ಮತ್ತು ಹವಾಮಾನ ಸ್ಥಿತಿಸ್ಥಾಪಕತೆಗೆ ಒತ್ತು: ನ.25ರಿಂದ ರಾಷ್ಟ್ರೀಯ ಸಮ್ಮೇಳನ

Date:

ಸುಸ್ಥಿರ ಮತ್ತು ಹವಾಮಾನ ಸ್ಥಿತಿಸ್ಥಾಪಕ ಕೃಷಿಯಲ್ಲಿ ಸಸ್ಯ ಆರೋಗ್ಯ, ರೋಗ ನಿರ್ವಹಣೆ ಹಾಗೂ ಆಧುನಿಕ ತಂತ್ರಜ್ಞಾನಗಳ ಬಳಕೆಗೆ ಒತ್ತು ನೀಡುವ ರಾಷ್ಟ್ರೀಯ ಸಮ್ಮೇಳನವನ್ನು ನವೆಂಬ‌ರ್ 25 ಮತ್ತು 26ರಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಆಯೋಜಿಸಲಾಗಿದೆ.

- Advertisement -

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ನವದೆಹಲಿಯ ಭಾರತೀಯ ಸಸ್ಯರೋಗಶಾಸ್ತ್ರೀಯ ಸೊಸೈಟಿ (ಐಪಿಎಸ್) ಜಂಟಿಯಾಗಿ ನಗರದ ಕೃಷಿ ವಿಶ್ವವಿದ್ಯಾಲಯದ ಜಗಜ್ಯೋತಿ ಬಸವೇಶ್ವರ ಪ್ರೇಕ್ಷಾಗೃಹದಲ್ಲಿ ಸಮ್ಮೇಳನ ಮತ್ತು ರಾಜ್ಯ ಸಸ್ಯರೋಗಶಾಸ್ತ್ರಜ್ಞರ ಸಭೆ ಆಯೋಜಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗಳು ಉಲ್ಟಾ ಹೊಡೆದ ಮಾತ್ರಕ್ಕೆ...

ಪಟ್ಟಣಗೆರೆ ಶೆಡ್‌ನಲ್ಲಿದ್ದ ನಾಲ್ವರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ಉಲ್ಟಾ ಹೊಡೆದಿರುವುದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪ್ರತ್ಯಕ್ಷದರ್ಶಿಗಳು ಉಲ್ಟಾ ಹೊಡೆದ ಮಾತ್ರಕ್ಕೆ ದರ್ಶನ್‌ಗೆ ಕಾನೂನು ಕುಣಿಕೆಯಿಂದ ಮುಕ್ತಿ ಸಿಗುತ್ತದೆಯೇ? ಪೊಲೀಸರು...

ರಾಯಚೂರು | ಅವ್ಯವಸ್ಥೆಯ ಆಗರವಾದ ವಸತಿ ನಿಲಯ: ಜೀವ...

ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದ್ದು, ವಿದ್ಯಾರ್ಥಿಗಳು ಪ್ರತಿದಿನ ತೊಂದರೆ ಅನುಭವಿಸುವಂತಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕನಿಷ್ಠ ಅಗತ್ಯಗಳ ಬಗ್ಗೆಯೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ...

ರಾಜರ ಆಳ್ವಿಕೆಯ ವಿರೋಧ ಕೇವಲ ಟ್ರಂಪ್‌ಗೆ ಮಾತ್ರ ಸೀಮಿತವಲ್ಲ

2026ರ ಪರಿಸ್ಥಿತಿ ಭಿನ್ನವಾಗಿದೆ. ಈಗ ಪರಮಾಣು ಅಸ್ತ್ರಗಳು ನಮ್ಮಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರದ ಕೈಯಲ್ಲಿಲ್ಲ. ಬದಲಾಗಿ ಅವು ಲಾಕ್‌ಹೀಡ್, ಬೋಯಿಂಗ್, ಜನರಲ್ ಡೈನಾಮಿಕ್ಸ್‌ನಂತಹ ಖಾಸಗಿ ಕಂಪನಿಗಳ ಸಿಇಒಗಳ ಸಂಪೂರ್ಣ ನಿಯಂತ್ರಣದಲ್ಲಿವೆ... ನಾನು ಬರವಣಿಗೆಯನ್ನೇ ವೃತ್ತಿಯಾಗಿಸಿಕೊಂಡವನು;...

ನವೆಂಬರ್ 25ರಂದು ಬೆಳಿಗ್ಗೆ 10 ಗಂಟೆಗೆ ಸಮ್ಮೇಳನ ಉದ್ಘಾಟನೆಯಾಗಲಿದೆ. ಸಸ್ಯ ರೋಗಗಳ ಪತ್ತೆ ಮತ್ತು ನಿರ್ಣಯ, ಸಮಗ್ರ ರೋಗ ನಿರ್ವಹಣೆಯಲ್ಲಿನ ಹೊಸ ಬೆಳವಣಿಗೆಗಳು, ಜೈವಿಕ ನಿಯಂತ್ರಣ, ಸಸ್ಯಗಳ ಬೆಳವಣಿಗೆಗೆ ಪೂರಕ ಸೂಕ್ಷ್ಮಜೀವಿಗಳ ಬಳಕೆ ಹಾಗೂ ಹವಾಮಾನ ಬದಲಾವಣೆಯಿಂದ ಕಾಣಿಸಿಕೊಳ್ಳುತ್ತಿರುವ ಹೊಸ ರೋಗಗಳು ಮತ್ತು ಕೀಟಬಾಧೆಗಳ ಕುರಿತು ತಜ್ಞರು ವಿಚಾರ ವಿನಿಮಯ ನಡೆಸಲಿದ್ದಾರೆ.

ಕೃತಕ ಬುದ್ಧಿಮತ್ತೆ (ಎಐ), ಇಂಟರ್ನೆಟ್ ಆಫ್ ಥಿಂಗ್ಸ್ (ಐಒಟಿ), ರೋಗ ಮುನ್ಸೂಚನೆ ಮತ್ತು ಸಾಂಕ್ರಾಮಿಕ ರೋಗಶಾಸ್ತ್ರ ಆಧಾರಿತ ಪರಿಹಾರಗಳ ಮೂಲಕ ಸುಸ್ಥಿರ ಬೆಳೆ ಸಂರಕ್ಷಣೆಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆಯೂ ಚರ್ಚೆ ನಡೆಯಲಿದೆ.

ದೇಶದ ವಿವಿಧ ಕೃಷಿ ವಿಶ್ವವಿದ್ಯಾಲಯಗಳು ಹಾಗೂ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳ ವಿಜ್ಞಾನಿ ಗಳು, ಪ್ರಾಧ್ಯಾಪಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳು ಸೇರಿ 300ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅವ್ಯವಸ್ಥೆಯ ಆಗರವಾದ ವಸತಿ ನಿಲಯ: ಜೀವ ಭಯದಲ್ಲಿ ವಿದ್ಯಾರ್ಥಿಗಳು!

ರಾಜ್ಯ ಸಸ್ಯರೋಗಶಾಸ್ತ್ರಜ್ಞರು, ರೈತರು ಮತ್ತು ಸಂಶೋಧನಾ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಂವಾದ ನಡೆಸಿ, ಸೂಕ್ತ ಪರಿಹಾರಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಶಿಫಾರಸು ಮಾಡಲು ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಕೃಷಿ ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ತಾಲ್ಲೂಕಿನಾದ್ಯಂತ ಪಡಿತರ ವಿತರಣೆಯ ಸರ್ವರ್ ಸಮಸ್ಯೆ ತಕ್ಷಣ ಪರಿಹರಿಸಿ:

ತಾಲೂಕಿನಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ಕಳೆದ ಎರಡು– ಮೂರು ದಿನಗಳಿಂದ ಸರ್ವರ್ ಹಾಗೂ...

ಹೊನಗನಹಳ್ಳಿ ಸಮೀಪ ಅಪರಿಚಿತ ವ್ಯಕ್ತಿಯ ಶವ ಪತ್ತೆ!

ವಿಜಯಪುರ ಜಿಲ್ಲೆಯ ಹುಬ್ಬಳ್ಳಿ ರಸ್ತೆಯ ಹೊನಗನಹಳ್ಳಿ ಗ್ರಾಮದ ಸಮೀಪದ ಜಮೀನಿನಲ್ಲಿ ಅಪರಿಚಿತ...

ಬಾಗಲಕೋಟೆ |ಎಣ್ಣೆಕಾಳು, ದ್ವಿದಳ ಧಾನ್ಯ ಸಂಸ್ಕರಣಾ ಘಟಕ ಸ್ಥಾಪನೆಗೆ ಶೇ.೩೩ರಷ್ಟು ಸಹಾಯಧನ

ರೈತರು ಹಾಗೂ ಕೃಷಿ ಆಧಾರಿತ ಸಂಸ್ಥೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ೨೦೨೬-೨೭ನೇ...

ಧಾರವಾಡ | ಜಾಮೀನು ರದ್ದತಿ ನ್ಯಾಯದ ಹೋರಾಟಕ್ಕೆ ಸಿಕ್ಕ ಜಯ: ಬಸವರಾಜ ಕೊರವರ

ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿರುವುದು...