ರಾಯಚೂರು | ಆಹಾರ ಇಲಾಖೆ ಪ್ರಗತಿ ಪರಿಶೀಲನೆ: ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವರ ಸೂಚನೆ

Date:

ಜಿಲ್ಲೆಯ ಆಹಾರ ಇಲಾಖೆ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಕಾರ್ಯವೈಖರಿ ಮತ್ತು ಪ್ರಗತಿಯನ್ನು ಪರಿಶೀಲಿಸಲು ರಾಯಚೂರು ಜಿಲ್ಲೆಗೆ ಭೇಟಿ ನೀಡಿದ್ದು, ಸಾರ್ವಜನಿಕ ವಿತರಣಾ ವ್ಯವಸ್ಥೆಯ ಪರಿಣಾಮಕಾರಿ ಅನುಷ್ಠಾನ ಹಾಗೂ ಅಕ್ರಮ ಸಾಗಾಟದ ವಿರುದ್ಧ ಕಠಿಣ ಕಾರ್ಯಾಚರಣೆ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.

- Advertisement -

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನ.28ರಂದು ಶನಿವಾರ ಆಯೋಜಿಸಿದ್ದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆ ಹಾಗೂ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ರಾಯಚೂರು ಜಿಲ್ಲೆಯಲ್ಲಿ ಈವರೆಗೆ ಶೇ.80ರಷ್ಟು ಆಹಾರ ಧಾನ್ಯ ಹಾಗೂ ಪಡಿತರ ವಿತರಣೆ ಪೂರ್ಣಗೊಂಡಿದೆ. ಇತ್ತೀಚೆಗೆ ತಾಂತ್ರಿಕ ತೊಡಕು ಹಾಗೂ ಆಧಾ‌ರ್ ಸಂಸ್ಥೆಯು ಭದ್ರತಾ ಕಾರಣಗಳಿಗಾಗಿ ವ್ಯವಸ್ಥೆಯನ್ನು ನವೀಕರಿಸಿದ ಹಿನ್ನೆಲೆಯಲ್ಲಿ ಸರ್ವ‌್ರನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಿತ್ತು. ಪ್ರಸ್ತುತ ಸಮಸ್ಯೆ ಬಗೆಹರಿದಿದ್ದು, ವ್ಯವಸ್ಥೆಯು ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಇ-ಕೆವೈಸಿ ಪ್ರಕ್ರಿಯೆ ಶೇ.83ರಷ್ಟು ಪೂರ್ಣ :

ಜಿಲ್ಲೆಯಲ್ಲಿ ಶೇ.83ರಷ್ಟು ಇ-ಕೆವೈಸಿ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಉದ್ಯೋಗ ಹಾಗೂ ಇತರ ಕಾರಣಗಳಿಗಾಗಿ ಬೆಂಗಳೂರು, ಇತರೆ ನಗರಗಳು ಮತ್ತು ಹೊರರಾಜ್ಯಗಳಿಗೆ ವಲಸೆ ಹೋದ ಜನರು ಇ-ಕೆವೈಸಿ ಮಾಡಿಸಿಕೊಳ್ಳಲು ಕೆಲಸ ಬಿಟ್ಟು ಊರಿಗೆ ಬರುವುದನ್ನು ತಪ್ಪಿಸಲು ‘ಅನ್ನ ಸೇವೆ’ ಆ್ಯಪ್ ಮೂಲಕ ಮನೆಯಿಂದಲೇ ಪ್ರಕ್ರಿಯೆ ಪೂರ್ಣಗೊಳಿಸುವ ಸೌಲಭ್ಯ ಕಲ್ಪಿಸಲಾಗಿದೆ. ಈ ಸೌಲಭ್ಯದ ಪ್ರಯೋಜನವನ್ನು ಲಕ್ಷಾಂತರ ಮಂದಿ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

ಬಡವರಿಗೆ ಸೇರಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಗೆ ಸಾಗಾಟ ಮಾಡುವ ದಂಧೆಯ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ 5,000 ಟನ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದ್ದು, 415 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 285 ಮಂದಿಯನ್ನು ಬಂಧಿಸಲಾಗಿದೆ. ಯಾವುದೇ ಕಾರಣಕ್ಕೂ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಅವಕಾಶ ನೀಡುವುದಿಲ್ಲ. ಗಡಿಭಾಗದಲ್ಲಿ ಪಡಿತರ ಅಕ್ಕಿ ವ್ಯಾಪಾರದಲ್ಲಿ ತೊಡಗಿರುವವರು ತಕ್ಷಣವೇ ಆ ದಂಧೆಯನ್ನು ಕೈಬಿಡಬೇಕು. ಕಳೆದ ಎರಡು ತಿಂಗಳಿನಿಂದ ನಡೆಯುತ್ತಿರುವ ಈ ಬೃಹತ್ ಕಾರ್ಯಾಚರಣೆಯನ್ನು ಮುಂದೆಯೂ ನಿರಂತರವಾಗಿ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.

ಅಕ್ಕಿಯ ಬದಲು ಪೌಷ್ಟಿಕ ಆಹಾರ ಕಿಟ್ ವಿತರಣೆ :

ರಾಯಚೂರು ಸೇರಿದಂತೆ ಅಕ್ಕಿ ಬೆಳೆಯುವ ಪ್ರದೇಶಗಳಲ್ಲಿ ಪಡಿತರ ಅಕ್ಕಿಯ ಬಳಕೆ ಕಡಿಮೆ ಇರುವುದರಿಂದ, ಫಲಾನುಭವಿಗಳ ಆರೋಗ್ಯ ಮತ್ತು ಪೌಷ್ಟಿಕತೆಯನ್ನು ಗಮನದಲ್ಲಿಟ್ಟುಕೊಂಡು ಅಕ್ಕಿಯ ಬದಲಿಗೆ ವಿವಿಧ ಆಹಾರ ಧಾನ್ಯಗಳ ಕಿಟ್ ನೀಡುವ ಪ್ರಕ್ರಿಯೆಯನ್ನು ಅತಿ ಶೀಘ್ರದಲ್ಲಿ ಆರಂಭಿಸಲಾಗುವುದು ಎಂದರು.

ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುವುದು ಹಾಗೂ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ತುಂಬಿಸುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಕಳೆದ ಎರಡು ತಿಂಗಳಲ್ಲಿ ಪೆಟ್ರೋಲ್ ಬಂಕ್‌ಗಳು ಮತ್ತು ಗ್ಯಾಸ್‌ ಏಜೆನ್ಸಿಗಳ ಮೇಲೆ ತಪಾಸಣೆ ನಡೆಸಿ, ಪ್ರಕರಣಗಳನ್ನು ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಇಂತಹ ಅವ್ಯವಹಾರಗಳನ್ನು ತಡೆಯಲು ಇಲಾಖೆಯು ಇನ್ನಷ್ಟು ಬಿಗಿಯಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.

ಕಾನೂನು ಮಾಪನ ಶಾಸ್ತ್ರ ಇಲಾಖೆ ಚುರುಕುಗೊಳಿಸಲು ಕ್ರಮ :

ಗ್ರಾಹಕರಿಗೆ ಸರಿಯಾದ ತೂಕ ಹಾಗೂ ಗುಣಮಟ್ಟದ ಸರಕುಗಳು ದೊರೆಯುವಂತೆ ನೋಡಿಕೊಳ್ಳುವುದು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಮುಖ ಜವಾಬ್ದಾರಿಯಾಗಿದೆ. ಇಲಾಖೆಯ ಕಾರ್ಯನಿರ್ವಹಣೆಯಲ್ಲಿನ ಲೋಪದೋಷಗಳ ಕುರಿತು ಗಮನಹರಿಸಿ, ಇಲಾಖೆಯನ್ನು ಇನ್ನಷ್ಟು ಚುರುಕುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರಿಪೋರ್ಟರ್ಸ್ ಗಿಲ್ಡ್‌ನ ಬೆಳ್ಳಿ ಮಹೋತ್ಸವ: ನವೀಕೃತ ಎಸಿ ಪ್ರೆಸ್ ಕಾನ್ಫರೆನ್ಸ್ ಹಾಲ್ ಉದ್ಘಾಟನೆ

ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್‌ ಸದಸ್ಯ ಎನ್.ಎಸ್.ಭೋಸುರಾಜು, ಮಾನ್ವಿ ಕ್ಷೇತ್ರದ ಶಾಸಕ ಜಿ. ಹಂಪಯ್ಯ ನಾಯಕ, ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾ‌ರ್ ಕಾಂದೂ, ರಾಯಚೂರು ಸಹಾಯಕ ಆಯುಕ್ತ ಡಾ. ಹಂಪಣ್ಣ ಸಜ್ಜನ್, ರಾಯಚೂರು ತಹಶೀಲ್ದಾರ್ ಸುರೇಶ್‌ ವರ್ಮಾ, ಆಹಾರ ಇಲಾಖೆಯ ಜಿಲ್ಲಾ ವ್ಯವಸ್ಥಾಪಕ ಹರೀಶ್ ಸೇರಿದಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಗಳು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಶಾಸಕ ಹಂಪನಗೌಡ ಬಾದರ್ಲಿ ಅಧಿಕಾರ ಸ್ವೀಕಾರ

ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ನೂತನ ಅಧ್ಯಕ್ಷರಾಗಿ ಸಿಂಧನೂರು ವಿಧಾನಸಭಾ ಕ್ಷೇತ್ರದ...

ಬಾಗಲಕೋಟೆ | ಗ್ರಾಮೀಣ ಅಭಿವೃದ್ಧಿಗೆ ಮನೆ ಮನೆಗೆ ಜಾಗೃತಿ : ಯೋಜನೆಗಳ ಕಾಮಗಾರಿ ಪರಿಶೀಲಿಸಿದ ಜಿ.ಪಂ ಸಿಇಒ

ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಅವರು ಮುರನಾಳ...

ಮಂಗಳೂರು | ಕ್ಯಾನ್ಸರ್ ಅಪಾಯದ ಮುನ್ಸೂಚನೆಗೆ ಎಂ.ಐ.ಒ.ನಿಂದ ಡಿಜಿಟಲ್ ಆ್ಯಪ್ ಬಿಡುಗಡೆ

ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವುದು ಹಾಗೂ ಆರಂಭಿಕ ಹಂತದಲ್ಲೇ ಅಪಾಯದ ಅಂಶಗಳನ್ನು...

ಉತ್ತರ ಕನ್ನಡ | ತಂಬಾಕು ನಿಯಂತ್ರಣ ಅಭಿಯಾನ: ಜಾಗೃತಿ ಪೋಸ್ಟರ್ ಬಿಡುಗಡೆ

ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಅಭಿಯಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ...