ರಾಯಚೂರು | ಕೊನೆ ಭಾಗದ ಕೃಷಿ ಭೂಮಿಗೆ ನೀರು ಹರಿಸುವಂತೆ ಒತ್ತಾಯ; ಅ.16ರಂದು ಪ್ರತಿಭಟನೆ

Date:

ತುಂಗಭದ್ರ ಎಡದಂಡೆ ಕಾಲುವೆಯ ಕೊನೆ ಭಾಗದ ಕೃಷಿ ಭೂಮಿಗೆ ಮುಂಗಾರು ಹಂಗಾಮಿನಲ್ಲಿ ನೀರು ಹರಿಸಿ ಮೂರು ತಿಂಗಳಾದರೂ ನೂರು ಕ್ಯೂಸೆಕ್‌ ಸಹ ನೀರು ತಲುಪಿಲ್ಲ. ಸರ್ಕಾರ ಕೊನೆಭಾಗದ ರೈತರಿಗೆ ನೀರು ಕೊಡುವಲ್ಲಿ ವಿಫಲವಾಗಿದೆ. ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಅಕ್ಟೋಬರ್ 16ರಂದು ಪ್ರತಿಭಟನೆ ನಡೆಸಲಾಗುತ್ತದೆ ಎಂದು ನಾಲೆಯ 104 ಮೈಲ್‌ ಕೆಳಭಾಗದ ರೈತ ಹೋರಾಟ ಸಮಿತಿ ಅಧ್ಯಕ್ಷ ಮಹಾಂತೇಶ ಪಾಟೀಲ್ ಅತ್ತನೂರು ತಿಳಿಸಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ತುಂಗಭದ್ರ ನೀರಾವರಿ ಸಲಹಾ ಸಮಿತಿ ತೀರ್ಮಾನದಂತೆ ನೀರು ಹರಿಸಲು ನೀರಾವರಿ ನಿಗಮದ ಅಧಿಕಾರಿಗಳು ವಿಫಲವಾಗಿದ್ದಾರೆ. ಕೊನೆಭಾಗ 104 ಮೈಲ್‌ ನಂತರ ಸರಿ ಸುಮಾರು 55 ಸಾವಿರ ಎಕರೆ ಪ್ರದೇಶದಲ್ಲಿ ಹತ್ತಿ, ಮೆಣ ಸಿನಕಾಯಿ, ಭತ್ತ ಸೇರಿ ನಾನಾ ಬೆಳೆಗಳಿಗೆ ನೀರಿಲ್ಲದಂತಾಗಿದೆ. ನಾಲೆಯ ಮೊದಲ ಭಾಗದಲ್ಲಿ ಅಕ್ರಮ ನೀರಾವರಿ ಪ್ರದೇಶಕ್ಕೆ ನೀರು ಹರಿಸುತ್ತಿರುವ ಪರಿಣಾಮವಾಗಿ ಕೊನೆಭಾಗದ ಘೋಷಿತ ನೀರಾವರಿ ಪ್ರದೇಶಕ್ಕೆ ನೀರು ತಲುಪದಂತಾಗಿದೆ” ಎಂದು ಆರೋಪಿಸಿದರು.

“ಪ್ರತಿ ಎಕರೆ ಮೆಣಸಿನಕಾಯಿ ಬೆಳೆಗೆ ರೈತರು 50,000 ರೂ.ನಿಂದ ಲಕ್ಷ ರೂ.ವರೆಗೆ ಹಣ ಹೂಡಿದ್ದಾರೆ. ಅದರೆ, ಬೆಳೆ ಒಣಗುವ ಸ್ಥಿತಿಯಿದೆ. ಕೂಡಲೇ ಜಿಲ್ಲೆಯ ಎಲ್ಲ ಶಾಸಕರು, ಉಸ್ತುವಾರಿ ಸಚಿವರು ಕೊನೆಭಾಗಕ್ಕೆ ನೀರು ಒದಗಿಸುವಂತೆ ಸರ್ಕಾರಕ್ಕೆ ಒತ್ತಡ ಹೇರಬೇಕಿದೆ. ಪ್ರತಿಬಾರಿಯೂ ಹೋರಾಟದ ಮೂಲಕವೇ ನೀರು ಪಡೆಯುವ ಪರಸ್ಥಿತಿ ನಿರ್ಮಾಣವಾಗಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕೊನೆಭಾಗಕ್ಕೆ ನೀರು ಒದಗಿಸಲು ಇಲಾಖೆ ಅಧಿಕಾರಿಗಳು ಗಮನಹರಿಸುತ್ತಿಲ್ಲ. ಅಗತ್ಯ ಅಧಿಕಾರಿಗಳೇ ಇಲ್ಲದೇ ಪ್ರಭಾರಿ ಮೇಲೆ ನಡೆಯುತ್ತಿದ್ದು ಕಾಲುವೆ ಪರಸ್ಥಿತಿ ನೋಡುವವರೂ ಸಹ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ” ಎಂದು ಹೇಳಿದರು.

“ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಿದ್ದರೂ ನೀರು ಬರುತ್ತಿಲ್ಲ. ಜಿಲ್ಲಾಧಿಕಾರಿಗಳು, ಶಾಸಕರ ಗಮನಕ್ಕೆ ತಂದರೂ ಪ್ರಯೋಜನವಾಗುತ್ತಿಲ್ಲ. ಅಚ್ಚುಕಟ್ಟು ಪ್ರದೇಶದ ರೈತರಿಗೆ ಭಾರಿ ಆರ್ಥಿಕ ನಷ್ಟವಾಗುವ ಆತಂಕ ಎದುರಾಗಿದೆ. ಅಕ್ಟೋಬರ್ 16ರರೊಳಗೆ ಗೇಜ್ ಕಾಯ್ದುಕೊಳ್ಳದೆ ಹೊದರೆ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಸಿದ್ದನಗೌಡ ಪಾಟೀಲ್ ,ಶರಣಪ್ಪ ಕಲ್ಮಲಾ, ಕೆ.ಬಸವರಾಜ, ಸತ್ಯನಾರಯಣ ಮರ್ಚಟ್ಹಾಳ, ವೆಂಕಟೇಶರೆಡ್ಡಿ, ಈರಪ್ಪ ಗೌಡ ಮಟಮಾರಿ, ವಿಶ್ವೇಶ್ವರಯ್ಯ, ಸೇರಿ ಅನೇಕರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೈಂದೂರು | ಸಮಾಜದ ಎಲ್ಲ ವರ್ಗದವರ ಹಿತ ಕಾಯಲು ಬದ್ಧ: ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್

ಲೋಕಸಭಾ ಚುನಾವಣೆಯಲ್ಲಿ ಬೈಂದೂರು ಮತದಾರರು ನನ್ನ ಕೈ ಬಲಪಡಿಸಿದರೆ, ಸಮಾಜದ ಎಲ್ಲ...

ಚಿಕ್ಕಬಳ್ಳಾಪುರ | ₹400 ಕೋಟಿ ನಕಲಿ ನೋಟು ಹಂಚಿಕೆಗೆ ಸಕಲ ತಯಾರಿ: ಪಕ್ಷೇತರ ಅಭ್ಯರ್ಥಿ ಆರೋಪ 

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಮತದಾರರಿಗೆ ಹಣ ಹಂಚಲು ಜನವರಿ...

ಚಿಕ್ಕಮಗಳೂರು | ಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ

ಮಾಜಿ ಸಚಿವ ಮಾಧುಸ್ವಾಮಿ ಅವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಚಿಕ್ಕಮಗಳೂರು...

ವಿಶೇಷ ಜಾತ್ರೆ | ತಲೆ ಮೇಲೆ ತೆಂಗಿನಕಾಯಿ ಒಡೆದುಕೊಂಡು ಮಳೆಗಾಗಿ ಪ್ರಾರ್ಥನೆ ಮಾಡಿದ ಖಾಜಿಸೊನ್ನೇನಹಳ್ಳಿ ಗ್ರಾಮಸ್ಥರು

ಅಕಾಲಿಕ ಮಳೆಯಿಂದ ರಾಜ್ಯದಲ್ಲಿ ಬಿರು ಬೇಸಿಗೆ ವಾತಾವರಣ ಸೃಷ್ಟಿಯಾಗಿದೆ. ದಿನದಿಂದ ದಿನಕ್ಕೆ...