ಮಾನ್ವಿ ಪಟ್ಟಣದ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ನಿಲಯದಲ್ಲಿ ಕಳಪೆ ಗುಣಮಟ್ಟದ ಉಪಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿಗಳನ್ನು ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಎನ್ಎಸ್.ಬೋಸರಾಜು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಮಾನ್ವಿಯ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಜಿಲ್ಲಾಸ್ಪತ್ರೆಗೆ ಆಗಮಿಸಿದ್ದ ವಿದ್ಯಾರ್ಥಿಗಳ ಆರೋಗ್ಯದ ಕುರಿತು ವೈದ್ಯರಿಂದ ಮಾಹಿತಿ ಪಡೆದ ಅವರು, ವಿದ್ಯಾರ್ಥಿಗಳಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ಹಾಗೂ ಸಮರ್ಪಕ ಆರೈಕೆ ಒದಗಿಸುವಂತೆ ವೈದ್ಯರಿಗೆ ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಕೊಲೆ ಪ್ರಯತ್ನ ಪ್ರಕರಣ: ಆರೋಪಿಗೆ 5 ವರ್ಷ ಜೈಲು, ₹17 ಸಾವಿರ ದಂಡ
ಈ ವೇಳೆ ವಿದ್ಯಾರ್ಥಿಗಳ ಪೋಷಕರೊಂದಿಗೆ ಮಾತನಾಡಿದ ಬೋಸರಾಜು, ಧೈರ್ಯ ತುಂಬಿ, ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು. ಘಟನೆಗೆ ಕಾರಣರಾದವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಮೇಲಧಿಕಾರಿಗಳಿಗೆ ಸೂಚಿಸಿದರು.





