ರಾಯಚೂರು | ಪದೇ-ಪದೇ ವಿದ್ಯುತ್ ವ್ಯತ್ಯಯ: ಗ್ರಾಮಸ್ಥರಿಂದ ಪ್ರತಿಭಟನೆ

Date:

ದೇವದುರ್ಗ ತಾಲ್ಲೂಕು ಗಲಗ ಗ್ರಾಮದಲ್ಲಿ ಪದೇ ಪದೇ ಉಂಟಾಗುತ್ತಿರುವ ವಿದ್ಯುತ್ ವ್ಯತ್ಯಯವನ್ನು ಖಂಡಿಸಿ ಗ್ರಾಮಸ್ಥರು ಕೆಇಬಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

- Advertisement -

ಗ್ರಾಮಸ್ಥರು ಕೆಇಬಿ ಕಚೇರಿ ಎದುರು ಜಮಾಯಿಸಿ, ನಿರಂತರ ವಿದ್ಯುತ್ ವ್ಯತ್ಯಯದಿಂದ ರೈತರು, ಸಾರ್ವಜನಿಕರು, ವ್ಯಾಪಾರಸ್ಥರು ಹಾಗೂ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹಲವು ಬಾರಿ ಸಂಬಂಧಿತ ಅಧಿಕಾರಿಗಳ ಗಮನಕ್ಕೆ ಸಮಸ್ಯೆಯನ್ನು ತಂದಿದ್ದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಗಲಗ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೂರಾರು ರೈತರು ಮುಂಗಾರು ಬೆಳೆ ಬೆಳೆದಿದ್ದು, ನೀರಾವರಿಗೆ ಅಗತ್ಯವಾದ ಸಮಯದಲ್ಲಿ ವಿದ್ಯುತ್ ಸರಬರಾಜು ದೊರೆಯದೆ ಬೆಳೆಗಳಿಗೆ ಹಾನಿಯಾಗುತ್ತಿದೆ ಎಂದು ರೈತರು ದೂರಿದರು. ಪದೇ ಪದೇ ವಿದ್ಯುತ್ ಕಡಿತ ಮತ್ತು ಅನಿಯಮಿತ ವಿದ್ಯುತ್ ಪೂರೈಕೆಯಿಂದ ಕೃಷಿ ಚಟುವಟಿಕೆಗಳು ಅಸ್ತವ್ಯಸ್ತಗೊಂಡಿದ್ದು, ಆರ್ಥಿಕ ನಷ್ಟ ಎದುರಿಸುವಂತಾಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳ ಓದು, ವ್ಯಾಪಾರ ವಹಿವಾಟು ಹಾಗೂ ಗ್ರಾಮೀಣ ಜನಜೀವನಕ್ಕೂ ವಿದ್ಯುತ್ ಸಮಸ್ಯೆಯಿಂದ ತೊಂದರೆ ಉಂಟಾಗುತ್ತಿದ್ದು, ಕೂಡಲೇ ಸಮಸ್ಯೆಯನ್ನು ಬಗೆಹರಿಸಿ ನಿರಂತರ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಪ್ರತಿಭಟನೆಯಲ್ಲಿ ಶಿವನಗೌಡ ಪಾವರತಿ, ದೇವೇಂದ್ರಪ್ಪ ತಾತ, ಜೆಮಶರ್ ಅಲಿ, ಶೇಖರಪ್ಪ ನಾಯಕ, ಚನ್ನಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಸಮಾಜದ ನೋವಿಗೆ ಧ್ವನಿಯಾದ ಪತ್ರಕರ್ತನ ಬದುಕಿಗಾಗಿ ನೆರವಿನ ಮನವಿ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ಸಮಾಜದ ನೋವು,...

ರಾಯಚೂರು | ಅಂತರರಾಜ್ಯ ಕಳ್ಳನ ಬಂಧನ: ₹25.50 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ

ಸಿಂಧನೂರು ನಗರದ ಮನೆಗೆ ಬೀಗ ಹಾಕಿ ಹೊರಗೆ ಹೋಗಿದ್ದ ವೇಳೆ ಬೀಗ...

ಯಾದಗಿರಿ | ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ; 19 ಮಂದಿ ವಿರುದ್ಧ ಪ್ರಕರಣ ದಾಖಲು

ಗಣೇಶ ಮೂರ್ತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ...

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...