ರಾಯಚೂರು | ಗಾಂಜಾ ಮಾರಾಟ ಪ್ರಕರಣ: ಮೂವರು ಆರೋಪಿಗಳಿಗೆ ತಲಾ 1 ವರ್ಷ ಜೈಲು, ₹25 ಸಾವಿರ ದಂಡ

Date:

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಲಾ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

- Advertisement -

ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಮನ್ನಲಾಪೂರ-ರಾಯಚೂರು ರಸ್ತೆಯ ಮನ್ನಲಾಪೂರ ರೈಲ್ವೆ ಗೇಟ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಉಮೇಶ ಸೇರಿದಂತೆ ಮೂವರು ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಗಳಿಂದ 1.08 ಕೆ.ಜಿ. ಒಣ ಗಾಂಜಾ, 514 ಗ್ರಾಂ ಹಸಿ ಗಾಂಜಾ, ಮೂರು ಮೊಬೈಲ್‌ಗಳು ಹಾಗೂ 300 ರೂ. ನಗದನ್ನು ವಶಪಡಿಸಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿಗೆ ₹5500 ಬೆಲೆಗಾಗಿ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ಈ ಸಂಬಂಧ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ 2024ರಲ್ಲಿ ಗುನ್ನೆ ಸಂಖ್ಯೆ 76/2024ರ ಅಡಿಯಲ್ಲಿ ಎನ್‌ಡಿಪಿಎಸ್‌ ಕಾಯ್ದೆಯ ಕಲಂ 20(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣದ ತನಿಖಾಧಿಕಾರಿಯಾಗಿದ್ದ ಅಂದಿನ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯ ಉಪನಿರೀಕ್ಷಕ, ಪ್ರಸ್ತುತ ಯರಗೇರಾ ಪೊಲೀಸ್ ಠಾಣೆಯ ಉಪನಿರೀಕ್ಷಕರಾಗಿರುವ ಪ್ರಕಾಶ ರೆಡ್ಡಿ ಡಂಬಲ್ ಅವರು ತನಿಖೆ ಪೂರ್ಣಗೊಳಿಸಿ, ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಅವರು ಸಾಕ್ಷಾಧಾರಗಳನ್ನು ಪರಿಶೀಲಿಸಿ, ಮೂವರು ಆರೋಪಿಗಳಿಗೆ ಎನ್‌ಡಿಪಿಎಸ್ ಕಾಯ್ದೆ-1985ರ ಕಲಂ 20(ಬಿ)(i) (ಬಿ) ಅಡಿಯಲ್ಲಿ ತಲಾ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ 25 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

ಪ್ರಕರಣದಲ್ಲಿ ಫಿರ್ಯಾದಿದಾರರಾದ ರವಿರಾಜ್ (ಸಿಎಚ್‌ಸಿ-320) ಹಾಗೂ ದಾಳಿಯಲ್ಲಿ ಭಾಗವಹಿಸಿದ್ದ ಜಿ. ಶ್ರೀನಿವಾಸ (ಎಎಸ್‌ಐ) ಅವರು ಸಾಕ್ಷ್ಯ ನುಡಿದಿದ್ದರು. ಸುಗಯ್ಯ (ಸಿಪಿಸಿ-157), ಮಲ್ಲಿಕಾರ್ಜುನ (ಸಿಪಿಸಿ-360) ಮತ್ತು ಮುಸ್ತಫಾ (ಸಿಪಿಸಿ-632) ಅವರು ನ್ಯಾಯಾಲಯಕ್ಕೆ ಸಾಕ್ಷಿಗಳನ್ನು ಹಾಜರುಪಡಿಸುವ ಕಾರ್ಯ ನಿರ್ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ಗ್ರಾಮೀಣ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ನಿಂಗಪ್ಪ ಎನ್.ಆರ್. ಅವರು ಪ್ರಕರಣದ ವಿಚಾರಣೆಯ ಮೇಲ್ವಿಚಾರಣೆ ವಹಿಸಿದ್ದರು. ಸರ್ಕಾರದ ಪರವಾಗಿ ಪ್ರಧಾನ ಸಾರ್ವಜನಿಕ ಅಭಿಯೋಜಕ ಕೆ. ಗೋಪಾಲರಾವ್ ವಾದ ಮಂಡಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮದರಕಲ್ ಅಂಬಾ ಮಠದ ವಿರುದ್ಧ ಸುಳ್ಳು ಆರೋಪ: ಅಮರೇಶ್ ಪಾಟೀಲ್

ದೇವದುರ್ಗ ತಾಲ್ಲೂಕು ಮದರಕಲ್‌ ಗ್ರಾಮದ ಅವದೂತ ರಾಜಯೋಗಿ ಸಂತ ನಾಮದೇವಗೌಡ ಶರಣರ...

ಉಡುಪಿ | ಕರಾವಳಿ ಇಲ್ಲದೆ ಕರ್ನಾಟಕದ ಅಸ್ಮಿತೆ ಇಲ್ಲ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ

"ಕರಾವಳಿ ಇಲ್ಲದೆ ಕರ್ನಾಟಕ ಪೂರ್ಣವಾಗುವುದಿಲ್ಲ. ಈ ಭಾಗದ ಧಾರ್ಮಿಕ, ಸಾಂಸ್ಕೃತಿಕ ಹಾಗೂ...

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಅ. 20ರವರೆಗೆ ಕಾಲಾವಕಾಶ ವಿಸ್ತರಣೆ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಪಡೆಯುತ್ತಿರುವ ಆದ್ಯತಾ...

ಗದಗ | ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲು ಜಿಲ್ಲಾಧಿಕಾರಿ ಸೂಚನೆ

"ಜಿಲ್ಲಾ ಮಟ್ಟದ ಮಾದರಿ ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ...