ರಾಯಚೂರು | ಜೆಸ್ಕಾಂ ಗುತ್ತಿಗೆ ಕಾರ್ಮಿಕರ ಕನಿಷ್ಠ ವೇತನ, ಕೆಲಸದ ಭದ್ರತೆಗೆ ಆಗ್ರಹ

Date:

ಜೆಸ್ಕಾಂ ರಾಯಚೂರು ವೃತ್ತದಲ್ಲಿ ಕೆಲಸ ನಿರ್ವಹಿಸುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ರಾಜ್ಯ ಸರ್ಕಾರ ಪ್ರಕಟಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸುವುದರ ಜೊತೆಗೆ ಕೆಲಸದ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ವಿದ್ಯುತ್ ಕಾರ್ಮಿಕರ ಫೆಡರೇಷನ್ ಹಾಗೂ ಅಖಿಲ ಭಾರತ ವಿದ್ಯುತ್ ನೌಕರರ ಒಕ್ಕೂಟ (ಸಿಐಟಿಯು) ನೇತೃತ್ವದಲ್ಲಿ ಜೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

- Advertisement -

ರಾಜ್ಯದ ವಿವಿಧ ವಿದ್ಯುತ್ ನಿಗಮಗಳಲ್ಲಿ ಸರ್ಕಾರದ ಅಧಿಸೂಚನೆಯಂತೆ ಕನಿಷ್ಠ ವೇತನ ಜಾರಿಗೊಳಿಸಲಾಗಿದ್ದರೂ, ಜೆಸ್ಕಾಂ ರಾಯಚೂರು ವೃತ್ತದಲ್ಲಿ ಮಾತ್ರ ಇದುವರೆಗೆ ಆದೇಶವನ್ನು ಸಮರ್ಪಕವಾಗಿ ಪಾಲಿಸಲಾಗುತ್ತಿಲ್ಲ. ಇದರಿಂದ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ ವಿಳಂಬ ನೀತಿ ಅನುಸರಿಸದೆ ಕೂಡಲೇ ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿ ಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ನೌಕರರಿಗೆ ಪದೋನ್ನತಿ ನೀಡಿ, 33 ಕೆ.ವಿ. ಉಪವಿಭಾಗಗಳಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಕಾರ್ಮಿಕರ ಸ್ಥಾನಕ್ಕೆ ಅವರನ್ನು ನಿಯೋಜಿಸುವ ತೀರ್ಮಾನವನ್ನು ಕೈಬಿಡಬೇಕು ಆಗ್ರಹಿಸಿದರು. ಕೆಪಿಟಿಸಿಎಲ್ ಹಾಗೂ ಎಲ್ಲ ಎಸ್ಕಾಂಗಳಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸುವ ಕುರಿತು ಕೈಗಾರಿಕಾ ನ್ಯಾಯ ಮಂಡಳಿಯಲ್ಲಿ ವಿವಾದ ದಾಖಲಿಸಲಾಗಿದ್ದು, ವ್ಯಾಜ್ಯ ವಿಚಾರಣೆ ಹಂತದಲ್ಲಿದೆ. ಗುತ್ತಿಗೆ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸುವುದೇ ಈ ವಿವಾದದ ಪ್ರಮುಖ ವಿಷಯವಾಗಿದೆ. ಈ ಹಿನ್ನೆಲೆಯಲ್ಲಿ ನ್ಯಾಯ ಮಂಡಳಿಯಲ್ಲಿ ಪ್ರಕರಣ ಬಾಕಿ ಇರುವಾಗ ಕಾರ್ಮಿಕರನ್ನು ಬದಲಿಸಿ ಬೇರೆ ವ್ಯವಸ್ಥೆ ಮಾಡಬಾರದು ಎಂದು ಒತ್ತಾಯಿಸಿದರು.

15ರಿಂದ 25 ವರ್ಷಗಳವರೆಗೆ ಜೆಸ್ಕಾಂನ ವಿವಿಧ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ಕಾರ್ಮಿಕರನ್ನು ಬೇರೆ ಬ್ಯಾಚ್‌ನ ನೌಕರರಿಂದ ಬದಲಿಸಿದರೆ, ದೀರ್ಘಕಾಲದಿಂದ ಕೆಲಸ ಮಾಡುತ್ತಿರುವ ಕಾರ್ಮಿಕರು ಉದ್ಯೋಗ ಮತ್ತು ಜೀವನೋಪಾಯ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಆದ್ದರಿಂದ ನೌಕರರಿಗೆ ಪದೋನ್ನತಿ ನೀಡುವ ಸಂದರ್ಭದಲ್ಲಿ ಹಲವು ವರ್ಷಗಳಿಂದ 33 ಕೆ.ವಿ. ಸ್ಟೇಷನ್‌ಗಳಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ಕಾರ್ಮಿಕರನ್ನು ತೆಗೆದುಹಾಕುವ ಕ್ರಮ ಕೈಗೊಳ್ಳಬಾರದು ಎಂದು ಆಗ್ರಹಿಸಿದರು.

ಜೆಸ್ಕಾಂ ರಾಯಚೂರು ವೃತ್ತದಲ್ಲಿ ಕೂಡಲೇ ಪರಿಷ್ಕೃತ ಕನಿಷ್ಠ ವೇತನ ಜಾರಿಗೊಳಿಸಬೇಕು. 33 ಕೆ.ವಿ. ಸ್ಟೇಷನ್‌ಗಳಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಕಾರ್ಮಿಕರನ್ನು ಬದಲಿಸಿ ಬೇರೆ ವ್ಯವಸ್ಥೆ ಮಾಡಬಾರದು ಹಾಗೂ ಅವರಿಗೆ ಕೆಲಸದ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹಟ್ಟಿ ಚಿನ್ನದ ಗಣಿ–ಲಿಂಗಸುಗೂರು ನಡುವೆ ಸಮರ್ಪಕ ಬಸ್ ಸೇವೆಗೆ ಒತ್ತಾಯ

ಪ್ರತಿಭಟನೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಸತ್ಯಬಾಬು, ಗೌರವಾಧ್ಯಕ್ಷ ಡಿ.ಎಸ್. ಶರಣಬಸವ, ವೀರೇಶ, ಮುದ್ದುರಂಗಪ್ಪ, ಜಿಲ್ಲಾಧ್ಯಕ್ಷ ಕರಿಗೂಳಿ, ಕಾರ್ಯದರ್ಶಿ ಮಂಜುನಾಥ, ಸಾಯಿನಾಥ, ಸಾಬಣ್ಣ, ಶರಣಪ್ಪ, ಕೆ.ಜಿ. ವೀರೇಶ, ಮೌನೇಶ, ರಾಜುಗೌಡ, ಕೃಷ್ಣ ಸೇರಿದಂತೆ ಅನೇಕ ನೌಕರರು ಹಾಗೂ ಗುತ್ತಿಗೆ ಕಾರ್ಮಿಕರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...

ವಿಜಯಪುರ | ಬಿಎಲ್‌ಡಿಇ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಜಯಪುರ ನಗರದ...