ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

Date:

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ ಮೌಲ್ಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 5ರಂದು ಆರಂಭಗೊಂಡಿರುವ ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆಯ ರಥವು ದೇವದುರ್ಗ ಪಟ್ಟಣಕ್ಕೆ ಆಗಮಿಸಿತು.

- Advertisement -

ಈ ಸಂದರ್ಭದಲ್ಲಿ ಬೌದ್ಧ ಉಪಾಸಕರು, ಅಂಬೇಡ್ಕರ್‌ವಾದಿ ಚಿಂತಕರು ಹಾಗೂ ಪ್ರಗತಿಪರರು ರಥವನ್ನು ಆತ್ಮೀಯವಾಗಿ ಸ್ವಾಗತಿಸಿದರು. ಯಾತ್ರೆಯ ಉದ್ದೇಶ ಹಾಗೂ ಧಮ್ಮದ ಮಾನವೀಯ ಮೌಲ್ಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳಿಗೆ ಬೆಂಬಲ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಪಟ್ಟಣದ ಹಜರತ್ ಜಹಿರುದ್ದೀನ ಪಾಷಾ ವೃತ್ತದಿಂದ ಆಗಮಿಸಿದ ರಥವನ್ನು ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಬರಮಾಡಿಕೊಂಡರು. ಬಳಿಕ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅಂತಾರಾಷ್ಟ್ರೀಯ ಬೌದ್ಧ ಯುವ ಸಂಘಟನೆ ಇಂಡಿಯಾ, ಗ್ಲೋಬಲ್ ಡಾ. ಅಂಬೇಡ್ಕರ್ ಬೌದ್ಧ ಮಿಷನ್, ಯು.ಎಸ್.ಎ.ಯ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಝೆನ್ ಮಾಂಕ್ ಡಾ.ಶಾಕು ಬೋಧಿ ಧಮ್ಮ ಅವರು, ಭಾರತವು ತನ್ನ ಸಂವಿಧಾನವನ್ನು ಅಂಗೀಕರಿಸಿ 76 ವರ್ಷಗಳನ್ನು ಪೂರ್ಣಗೊಳಿಸಿದ್ದು, ಸಂವಿಧಾನದ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಬಂಧುತ್ವದಂತಹ ಮಾನವೀಯ ಮೌಲ್ಯಗಳ ಆಧಾರದ ಮೇಲೆ ಪ್ರತಿಯೊಬ್ಬ ಭಾರತೀಯನಿಗೂ ಸಮಾನ ಹಕ್ಕುಗಳನ್ನು ಕಲ್ಪಿಸಿದ್ದಾರೆ ಎಂದು ಹೇಳಿದರು.

ತಥಾಗತ ಭಗವಾನ್ ಬುದ್ಧರ ಕಾಲದಿಂದ ಸಾಮ್ರಾಟ್ ಅಶೋಕ, ಕಾನಿಷ್ಕ ಸೇರಿದಂತೆ ಬೌದ್ಧ ರಾಜರು ಧಮ್ಮದ ಮಾನವೀಯ ತತ್ವಗಳ ಆಧಾರದ ಮೇಲೆ ಆಡಳಿತ ನಡೆಸಿದ್ದು, ಎಲ್ಲಾ ಪ್ರಜೆಗಳನ್ನು ಸಮಾನತೆ, ನ್ಯಾಯ ಮತ್ತು ಕರುಣೆಯಿಂದ ಕಾಣುತ್ತಿದ್ದರು. ಇದೇ ಮಾನವೀಯ ಮೌಲ್ಯಗಳನ್ನು ಇಂದಿನ ಸಮಾಜ ಮತ್ತು ಆಡಳಿತ ವ್ಯವಸ್ಥೆಯಲ್ಲಿಯೂ ಪುನಃ ಸ್ಥಾಪಿಸುವ ಅಗತ್ಯವಿದೆ ಎಂದು ಅವರು ತಿಳಿಸಿದರು.

1956ರ ಅಕ್ಟೋಬರ್ 14ರಂದು ನಾಗಪುರದ ದೀಕ್ಷಾಭೂಮಿಯಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಬೌದ್ಧ ಧಮ್ಮವನ್ನು ಪುನರುಜ್ಜೀವನಗೊಳಿಸುವ ಮೂಲಕ ಪ್ರಬುದ್ಧ ಭಾರತದ ಮಹಾನ್ ಸಂಕಲ್ಪವನ್ನು ಜಗತ್ತಿನ ಮುಂದೆ ಇಟ್ಟರು. ಆ ಸಂಕಲ್ಪವನ್ನು ಸಾಕಾರಗೊಳಿಸುವ ಉದ್ದೇಶದಿಂದ ಕರ್ನಾಟಕದಾದ್ಯಂತ ಧಮ್ಮ ಜನಜಾಗೃತಿ ಯಾತ್ರೆ ಆಯೋಜಿಸಲಾಗಿದೆ ಎಂದು ಅವರು ಹೇಳಿದರು.

ಐತಿಹಾಸಿಕ ಹಾಗೂ ಮಂಗಳಮಯ ಸನ್ನತಿ (ಕನಗನಹಳ್ಳಿ) ನೆಲದಲ್ಲಿ ಸುಮಾರು 5 ಲಕ್ಷ ಉಪಾಸಕ–ಉಪಾಸಿಕೆಯರು ಬೌದ್ಧ ಧಮ್ಮದೀಕ್ಷೆ ಸ್ವೀಕರಿಸುವ ಭವ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸನ್ನತಿಯ ಬೌದ್ಧ ಪರಂಪರೆಯ ಸಂರಕ್ಷಣೆ ಮತ್ತು ಅಭಿವೃದ್ಧಿ ಎಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕಾಗಿ ಹಾಗೂ 70ನೇ ಬೌದ್ಧ ಧಮ್ಮ ದೀಕ್ಷೆಯ ಪ್ರಯುಕ್ತ, ಚಿತ್ತಾಪುರ ತಾಲೂಕಿನ ಸನ್ನತಿ (ಕನಗನಹಳ್ಳಿ)ಯ ಪ್ರಾಚೀನ ಸಾಮ್ರಾಟ್ ಅಶೋಕ ಸ್ತೂಪದ ಆವರಣದಲ್ಲಿ ನವೆಂಬರ್ 1, 2026ರಂದು ಬೆಳಗ್ಗೆ 11 ಗಂಟೆಗೆ ಭವ್ಯ ಬೌದ್ಧ ಧಮ್ಮ ದೀಕ್ಷಾ ಸಮಾರಂಭ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಈ ಐತಿಹಾಸಿಕ ಅಭಿಯಾನದಲ್ಲಿ ಅಂಬೇಡ್ಕರ್‌ವಾದಿಗಳು, ಬೌದ್ಧ ಅನುಯಾಯಿಗಳು, ಭಿಕ್ಷು ಸಂಘ, ಉಪಾಸಕ–ಉಪಾಸಿಕಾ ಸಂಘ, ಸಾಮಾಜಿಕ ಹಾಗೂ ರಾಜಕೀಯ ಮುಖಂಡರು, ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು ಹಾಗೂ ಎಲ್ಲಾ ಬಹುಜನ ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಅಂತಾರಾಷ್ಟ್ರೀಯ ಬೌದ್ಧ ಯುವ ಸಂಘಟನೆ ಭಾರತ, ಗ್ಲೋಬಲ್ ಡಾ. ಅಂಬೇಡ್ಕರ್ ಬೌದ್ಧ ಮಿಷನ್, ಯು.ಎಸ್.ಎ., ಅಖಿಲ ಭಾರತ ಡಾ. ಅಂಬೇಡ್ಕರ್ ಭಿಕ್ಕು ಸಂಘ ಹಾಗೂ ಬೌದ್ಧ ಮಹಾಶದ ಅಭಿವೃದ್ಧಿ ಮತ್ತು ಸಂರಕ್ಷಣಾ ಸಂಸ್ಥೆ, ಸನ್ನತಿ (ಕನಗನಹಳ್ಳಿ) ಇವರ ಸಂಯುಕ್ತಾಶ್ರಯದಲ್ಲಿ ಧಮ್ಮ ಜನಜಾಗೃತಿ ಯಾತ್ರೆಯನ್ನು ಆಯೋಜಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | SIR : ನೈಜ ಮತದಾರರನ್ನೇ ಗುರಿಯಾಗಿಸಿ ಫಾರ್ಮ್-7 ಸಲ್ಲಿಕೆ, ಎಸ್‌ಐಟಿ ತನಿಖೆಗೆ ಆಗ್ರಹ

ಈ ಸಂದರ್ಭದಲ್ಲಿ ಹಿರಿಯರಾದ ಮಲ್ಲೇಶಪ್ಪ ಹುನಗುಂದಬಾಡ, ಎನ್. ಲಿಂಗಪ್ಪ ಜಾಲಹಳ್ಳಿ, ಹುಸೇನಪ್ಪ ಜಾಲಹಳ್ಳಿ, ರಂಗಪ್ಪ ಗೋಸಲ್, ಮಹಾಂತೇಶ್ ಭವಾನಿ, ಹನುಮಂತ ಮನ್ನಾಪುರ, ವಿಶ್ವನಾಥ್ ಬಲ್ಲಿದವ್, ಮುನಿಯಪ್ಪ ನಾಗೋಲಿ, ಮೋಹನ್ ಬಲ್ಲಿದವ್, ಶಿವರಾಜ ರುದ್ರಾಕ್ಷಿ, ಗುಂಡಪ್ಪ ನಾಯಕ, ದೇವಪ್ಪ ಬಡಿಗೇರ್ ಚಿಂಚೋಡಿ, ರಂಗನಾಥ್ ಕೊಂಬಿನ್, ಮಲ್ಲಿಕಾರ್ಜುನ ಬೊಮ್ಮನಾಳ, ಶಿವು ಅಂಚೆಸೂಗೂರ್, ಆಕಾಶ್ ತೆಲ್ಕರ್, ರಾಹುಲ್ ದೇವದುರ್ಗ ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ಮೀಸಲಾತಿ ಸ್ವಾಗತಾರ್ಹ: ಮುತ್ತಣ್ಣ ಮೇತ್ರಿ

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು...

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...

ಕೊಡಗು | ಫಾರಂ-7 ದುರುಪಯೋಗ: ಬಿಜೆಪಿ ಬೂತ್ ಅಧ್ಯಕ್ಷ ಸೇರಿ ಐವರ ವಿರುದ್ಧ ಎಫ್‌ಐಆರ್!

ಕೊಡಗು ಜಿಲ್ಲೆಯ ಬ್ಯಾಡಗೊಟ್ಟ ಗ್ರಾಮದಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ಫಾರಂ-7 ಅರ್ಜಿಗಳನ್ನು...