ಶಾಲೆಯಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ವೇಳೆ ಅತಿಥಿ ಶಿಕ್ಷಕರೊಬ್ಬರು ಹೃದಯಘಾತದಿಂದ ಮೃತಪಟ್ಟ ಘಟನೆ ಮಸ್ಕಿ ತಾಲ್ಲೂಕಿನ ಮೆದಿಕಿನಾಳ ಗ್ರಾಮದಲ್ಲಿ ನಡೆದಿದೆ.
ಮೃತ ಶಿಕ್ಷಕ ನಾಗರಬೆಂಚಿ ಗ್ರಾಮದ ವೀರನಗೌಡ ಪಾಟೀಲ (29) ಸಾವಿಗೀಡಾಗಿದ್ದಾರೆ.
ಮೆದಿಕಿನಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕೆಲ ದಿನಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ವೀರನಗೌಡ ಪಾಟೀಲ ಊಟದ ನಂತರ ಮಕ್ಕಳೊಂದಿಗೆ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಜಮೀನಿನ ಖಾತಾ ಉತಾರಕ್ಕೆ ₹1.50 ಲಕ್ಷ ಲಂಚ: ಪಿಡಿಒ ಲೋಕಾಯುಕ್ತ ಬಲೆಗೆ
ಕೂಡಲೇ ಮಸ್ಕಿಯ ಖಾಸಗಿ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತ ಪಟ್ಟಿದ್ದಾರೆ. ಶುಕ್ರವಾರ ಸ್ವಗ್ರಾಮ ನಾಗರಬೆಂಚಿಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಿತು.




