ಸಾಮರಸ್ಯವೇ ನಾಡಿನ ಸಂಸ್ಕೃತಿಯ ಜೀವಾಳವಾಗಿದೆ. ಸರ್ವಧರ್ಮ ರಕ್ಷಣೆ, ಸತ್ಯಾರಾಧನೆ, ಧರ್ಮನೀತಿ ಹಾಗೂ ಸರ್ವಧರ್ಮ ಸಹಿಷ್ಣುತೆಯ ಮೂಲಕ ಸಹಬಾಳ್ವೆ, ಸೌಹಾರ್ದತೆ ಮತ್ತು ಭಾವೈಕ್ಯತೆಯನ್ನು ಎತ್ತಿಹಿಡಿದು ನಾಡು-ನುಡಿಯ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಡಾ. ಅಜಯ್ ಸಿಂಗ್ ಹೇಳಿದರು.
ಅವರಿಂದು ಜಿಲ್ಲಾಡಳಿತದಿಂದ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 71 ನೇ ರಾಜ್ಯೋತ್ಸವದ ರಾಷ್ಟ್ರಧ್ವಜಾರೋಹಣ ನೇರವೆರಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ಕನ್ನಡ ನಾಡು ಸಾಕಷ್ಟು ವಿಶೇಷತೆಗಳನ್ನು ಹೊಂದಿದ್ದು ಕರ್ನಾಟಕ ಕೇವಲ ಭೂಪ್ರದೇಶವಷ್ಟೇ ಅಲ್ಲ. ಸಂಸ್ಕೃತಿ, ಜನ ಸಮೂದಾಯ, ಜೀವನಪದ್ದತಿ ಎಲ್ಲವೂ ಕನ್ನಡಮಯವಾಗಿದೆ. ಹರಿದು ಹಂಚಿಹೋಗಿದ್ದ ಕನ್ನಡ ಭಾಷಿಗರನ್ನು ಒಗ್ಗೂಡಿಸಿ ಕರ್ನಾಟಕ ಏಕೀಕರಣದ ಹೋರಾಟ ನೂರಾರು ವರ್ಷಗಳಿಂದ ನಡೆದು 1973 ನವಂಬರ್ 1 ರಂದು ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡಿತು. ಆಲೂರು ವೆಂಕಟರಾಯರು ಸೇರಿದಂತೆ ಹಲವಾರು ಮಹನೀಯರ ಅನೇಕ ಲೇಖಕರು, ಸಾಹಿತಿಗಳು, ಚಿಂತಕರು ಸ್ಮರಿಸುವರು ನಮ್ಮೇಲ್ಲರ ಕರ್ತವ್ಯವೆಂದರು.
ಕನ್ನಡ ನಾಡು,ನುಡಿ, ಜಲ,ಗಡಿ ರಕ್ಷಣೆ ಸರ್ಕಾರ ಬದ್ದವಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವುಕುಮಾರ ನೇತೃತ್ವದಲ್ಲಿ ರಾಜ್ಯದ ಸಮಗ್ರ ಅಭಿವೃದ್ದಿ ದೃಷ್ಟಿಕೋನದಿಂದ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಹಿಂದೆಂದೂ ಕಂಡರಿಯ ಬರಗಾಲ ಪರಸ್ಥಿತಿ ಆವರಿಸಿದ್ದು, ಜಿಲ್ಲೆಯ ಎಲ್ಲಾ ತಾಲೂಕಗಳನ್ನು ಬರಗಾಲ ಪೀಡಿತ ತಾಲೂಕಗಳೆಂದು ಘೋಷಿಸಲಾಗಿದೆ. ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ನಷ್ಟದ ವರದಿಯನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ. 11 ಕೋಟಿ ರೂ ಕುಡಿಯುವ ನೀರಿಗೆ ಬಿಡುಗಡೆಯಾಗಿದೆ. ಅಗತ್ಯಬಿದ್ದರೆ ಮತ್ತಷ್ಟು ಅನುದಾನ ನೀಡಲು ಸರ್ಕಾರ ಬದ್ದವಾಗಿದೆ ಎಂದರು.
ವಿವಿಧ ತಂಡಗಳ ಆಕರ್ಷಕ ಪಥಸಂಚಲನ ನಡೆಯಿತು. ತಂಡಗಳಿAದ ಗೌರವ ವಂದನೆ ಸ್ವೀಕರಿಸಿದ ಸಚಿವರು ಜಿಲ್ಲಾ ಪ್ರಶಸ್ತಿಗೆ ಆಯ್ಕೆ ಸಾಧಕರನ್ನು ಸನ್ಮಾನಿಸಿ ಗೌರವಿಸಿದರು. ಶಾಲಾ ಮಕ್ಕಳಿಂದ ಕನ್ನಡ ಭಾಷೆಯ ಕುರಿತಾ ಸಾಮೂಹಿಕ ನೃತ್ಯ ಪ್ರದರ್ಶನಗೊಂಡಿತು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಕೌಟುಂಬಿಕ ಕಲಹ: ದಂಪತಿ ಸೇರಿ ಇಬ್ಬರು ಮಕ್ಕಳು ಆತ್ಮಹತ್ಯೆ
ವೇದಿಕೆಯಲ್ಲಿ ಜಿಲ್ಲಾಧಿಕಾರಿ ಪೂವಿತಾ.ಎಸ್., ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ, ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮಹೋಪಾತ್ರ ಸೇರಿದಂತೆ ಅನೇಕ ರಾಜಕೀಯ ಮುಖಂಡರುಗಳು, ಅಧಿಕಾರಿಗಳು, ಸಾರ್ವಜನಿಕರು,ಶಾಲಾ ಮಕ್ಕಳು ಭಾಗಿಯಾದರು.




