ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಟ್ಟಿ ಚಿನ್ನದ ಗಣಿ ಕಾರ್ಮಿಕರು ನಡೆಸುತ್ತಿರುವ ಹೋರಾಟದ ಭಾಗವಾಗಿ ಇಂದು ಎರಡನೇ ಹಂತದ ಪ್ರತಿಭಟನೆಗೆ ಚಾಲನೆ ನೀಡಲಾಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾರ್ಮಿಕರು ಕಪ್ಪು ಪಟ್ಟಿ ಧರಿಸಿ ಹಾಗೂ ಕಪ್ಪು ಬಾವುಟಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ತಮ್ಮ ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಲ್ಲಿ ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಕಾರ್ಮಿಕರು, ಮೆಡಿಕಲ್ ಅನ್‌ಫಿಟ್ ಯೋಜನೆಯನ್ನು ಕೂಡಲೇ ಜಾರಿಗೆ ತರಬೇಕು, ವೇತನ ಪರಿಷ್ಕರಣೆ ಕುರಿತ ಮಾತುಕತೆಗಳನ್ನು ತಕ್ಷಣ ಆರಂಭಿಸಬೇಕು ಎಂದು ಆಗ್ರಹಿಸಿದರು. ಅಲ್ಲದೆ ಬಾಕಿ ಇರುವ ಹೆಚ್‌ಆರ್‌ಎ, ಬೋನಸ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಶೀಘ್ರದಲ್ಲೇ ನೀಡುವಂತೆ ಒತ್ತಾಯಿಸಿದರು.
ಕಾರ್ಮಿಕರ ಬೇಡಿಕೆಗಳನ್ನು ಶೀಘ್ರವಾಗಿ ಪರಿಗಣಿಸಿ ಪರಿಹಾರ ಕಲ್ಪಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ನೀರಿನ ಸಮಸ್ಯೆ; ಬಕೆಟ್ ಹಿಡಿದು ಹಾಸ್ಟೆಲ್ ವಿದ್ಯಾರ್ಥಿಗಳ ಆಕ್ರೋಶ
ಈ ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಕಾರ್ಮಿಕ ಸಂಘದ ಕಾರ್ಯದರ್ಶಿಗಳಾದ ವೆಂಕೋಬ್ ಮಿಯ್ಯಾಪೂರು, ಗೌಸ್ ಮಿಯಾ, ರಮೇಶ ಬಾಬು, ನಾಗರಾಜ್, ಹನೀಫ್, ಸಿದ್ದಪ್ಪ ಮುಂಡರಗಿ, ಚಂದ್ರಶೇಖರ್ ನೆಲೋಗಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಬಾಬು ಸಾಗರ್, ಮುನೀರುದ್ದೀನ್, ಹನುಮಂತಗೌಡ, ಗುಂಡಪ್ಪ, , ಗುರುರಾಜ್, ಅಮರೇಶ ವಿಲ್ಹೇಜ್ ಶಾಪ್ಟ್, ಸಿಐಟಿಯು ಜಿಲ್ಲಾ ಸಮಿತಿ ಜಂಟಿ ಕಾರ್ಯದರ್ಶಿ ರಮೇಶ ವೀರಾಪೂರು, ಮೌನುದ್ದೀನ್, ಎಐಟಿಯು ಸಂಗಯ್ಯಸ್ವಾಮಿ, ಫಕೃದ್ದೀನ್, ಪೆಂಚಲಯ್ಯ, ಸೋಮಣ್ಣ ನಾಯಕ್, ರಾಜೇಶ್ವರಿ, ಹನುಮಂತ್ರಾಯ, ಹುಸೇನ್ ಬಾಷಾ, ಬಸವರಾಜ್ ಎಂ.ಎಂ., ಶ್ರೀಧರ್, ಅಲ್ಲಾಭಕ್ಷ, ಯಮನೂರು, ಖಾಜಾ ಸೇರಿದಂತೆೆ ಸಿಐಟಿಯು, ಎಐಟಿಯುಸಿ, ಆಕಳು ಪಕ್ಷದ ಅನೇಕರು ಉಪಸ್ಥಿತರಿದ್ದರು.





