ದೇವದುರ್ಗ ತಾಲ್ಲೂಕು ವ್ಯಾಪ್ತಿಯ ಚಿಂಚೋಡಿ ಗ್ರಾಮದಲ್ಲಿ ನರೇಗಾ ಕೆಲಸ ಮಾಡುವ ವೇಳೆ ಕಾರ್ಮಿಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
- Advertisement -
ನಾಗಪ್ಪ ಮರಿಯಪ್ಪ ಛಲವಾದಿ (55) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಇಂದು ಬೆಳಿಗ್ಗೆ 10 ಗಂಟೆ ಸುಮಾರು ಗ್ರಾಮದ ಹೊರವಲಯದಲ್ಲಿ ನಡೆಯುತ್ತಿದ್ದ ನರೇಗಾ ಕಾಮಗಾರಿಯಲ್ಲಿ ತೊಡಗಿದ್ದ ವೇಳೆ ನಾಗಪ್ಪ ಅವರಿಗೆ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.




