ರಾಯಚೂರು | ಹೊಕ್ರಾಣಿ ಅಶ್ವಿನಿ ಛಲವಾದಿ ಅತ್ಯಾಚಾರ-ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

Date:

ಸಿರವಾರ ತಾಲ್ಲೂಕಿನ ಹೊಕ್ರಾಣಿ ಗ್ರಾಮದ ಅಶ್ವಿನಿ ಛಲವಾದಿ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಒಟ್ಟು ನಾಲ್ಕು ಆರೋಪಿಗಳನ್ನು ಬಂಧನ ಮಾಡಲಾಗಿದೆ.

- Advertisement -

ಆಗಸ್ಟ್ 19 ರಂದು ಹೊಕ್ರಾಣಿ ಗ್ರಾಮದಲ್ಲಿ ಸಂಜೆ ವೇಳೆ ಬಹಿರ್ದೆಸೆಗೆ ಹೋದಾಗ ಅಪಹರಣ ಮಾಡಿ, ಅತ್ಯಾಚಾರವೆಸಗಿ ಕೊಲೆ ಮಾಡಿ ಗ್ರಾಮದ ಬಾವಿಯಲ್ಲಿ ಮೃತದೇಹ ಎಸೆಯಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಪ್ರಕರಣದ ಆರೋಪಿ ಗುಂಡ್ಯಾನನ್ನು ಬಂಧಿಸಿ, ಕೃತ್ಯ ನಡೆದ ಸ್ಥಳದ ಪಂಚನಾಮೆ ಪೂರ್ಣಗೊಳಿಸಲಾಗಿತ್ತು. ಪ್ರಕರಣವು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದಾಖಲಾಗಿದ್ದರಿಂದ, ಆಗಸ್ಟ್ 22ರಂದು ಪ್ರಕರಣವನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಗಣೇಶ ಮೂರ್ತಿಗೆ ವಿದ್ಯುತ್ ತಂತಿ ಸಿಲುಕಿ ಯುವಕ ಸಾವು

ಬಳಿಕ ಮುಂದಿನ ತನಿಖೆಯನ್ನು ನಾಗರೀಕ ಹಕ್ಕುಗಳ ಜಾರಿ ನಿರ್ದೇಶನಾಲಯ ರಾಯಚೂರು ಪೊಲೀಸ್ ಉಪಾಧೀಕ್ಷಕರು ಮಾಡಿದ್ದರು. ಡಿ.ಸಿ.ಆ‌ರ್.ಇ ವಿಭಾಗದ ಎಡಿಜಿಪಿಗಳಾದ ಪಿ.ಹರಿಶೇಖರನ್ ಅವರು ಮಾರ್ಗದರ್ಶನದಲ್ಲಿ ಪ್ರಕರಣದ ಇನ್ನಿತರ ಆರೋಪಿಗಳಾದ ಮಹಾಂತೇಶ, ವಿರೇಶ ಹಾಗೂ ರಾಯಚೂರಿನ ಆಫೀಸರ್ ಕಾಲೊನಿಯ ಅಭಿಷೇಕ ಎಂಬ ಆರೋಪಿಯನ್ನು ಆಗಸ್ಟ್ 22 ರಂದು ಬಂಧಿಸಿ ನ್ಯಾಯಾಂಗಕ್ಕೆ ಕಳುಹಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜ್ಞಾನೇಶ್ ಕುಮಾರ್ ಅಣಕು ಶವಯಾತ್ರೆ ನಡೆಸಿ, ಪ್ರತಿಕೃತಿ ದಹಿಸಿ ಆಕ್ರೋಶ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಾಗೂ ಮುಖ್ಯ...

ಕಲಬುರಗಿ | ನಕಲಿ ಎಸ್‌ಟಿ ಪ್ರಮಾಣ ಪತ್ರಗಳಿಗೆ ಕಡಿವಾಣ, ಮೀಸಲಾತಿ ರಕ್ಷಣೆಗೆ ಆಗ್ರಹ

ನಕಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಜಾತಿ ಪ್ರಮಾಣಪತ್ರಗಳ ಹಾವಳಿಗೆ ಕಡಿವಾಣ ಹಾಕಬೇಕು...

ಕಲಬುರಗಿ | ಸಿಮೆಂಟ್ ಕಂಪನಿಯಲ್ಲಿ ಡೀಸೆಲ್ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಚಿಂಚೋಳಿ ತಾಲೂಕಿನ ಮಿರಿಯಾಣ ಪೊಲೀಸ್ ಠಾಣೆ ವ್ಯಾಪ್ತಿಯ ಸಿಮೆಂಟ್ ಕಂಪನಿಯ ಆವರಣದಲ್ಲಿ...

ಕಾನೂನುಬಾಹಿರವಾಗಿ ವಾಹನ ತಡೆದರೆ 10 ವರ್ಷ ಜೈಲು ಶಿಕ್ಷೆ: ಪೊಲೀಸ್ ಆಯುಕ್ತ ಎಚ್ಚರಿಕೆ

ಗೋಹತ್ಯೆ ಹಾಗೂ ಕಾನೂನುಬಾಹಿರ ಜಾನುವಾರು ಸಾಗಾಟವನ್ನು ತಡೆಯಲು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ...