ರಾಯಚೂರು | ಹೊಕ್ರಾಣಿ ಯುವತಿ ಅತ್ಯಾಚಾರ-ಕೊಲೆ ಪ್ರಕರಣ: ಪಾರದರ್ಶಕ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

Date:

ಹೊಕ್ರಾಣಿ ಯುವತಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆಯ ಪ್ರಕರಣದ ಬಗ್ಗೆ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ, ತಪ್ಪಿತಸ್ಥರನ್ನು ಕಠಿಣ ಕ್ರಮ ಜರುಗಿಸಬೇಕೆಂದು ಎಐಎಂಎಸ್ಎಸ್, ಎಐಡಿವೈಒ, ಎಐಡಿಎಸ್ಒ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

- Advertisement -

ನಗರದ ಅಂಬೇಡ್ಕರ್ ವೃತ್ತದಲ್ಲಿ ಹತ್ತಾರು ವಿದ್ಯಾರ್ಥಿಗಳು ಜಮಾಯಿಸಿ, ಕೊಲೆ ಆರೋಪಿಗಳಿಗೆ ಶಿಕ್ಷೆ ವಿಧಿಸಬೇಕು ಎಂದು ಘೋಷಣೆ ಕೂಗಿ ತಹಶೀಲ್ದಾರ್ ಪರಶುರಾಮ ಅವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಿರವಾರ ತಾಲ್ಲೂಕಿನ ಹೊಕ್ರಾಣಿ ಗ್ರಾಮದ ಅಶ್ವಿನಿ ಛಲವಾದಿ ಯುವತಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆಯ ಹಾಗೂ ಲಿಂಗಸಗೂರು ತಾಲೂಕಿನ ಕರಡಕಲ್ ಗ್ರಾಮದ ಮಹಿಳೆಯ ಸಾವಿನ ಬಗ್ಗೆ ಸಮಗ್ರ, ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ರಾಯಚೂರು ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ನಡೆದ ಈ ಎರಡು ಘಟನೆಗಳು ಸಾರ್ವಜನಿಕರನ್ನು ಬೆಚ್ಚಿಬೀಳಿಸಿದ್ದು, ಜನರಲ್ಲಿ ಆತಂಕದ ವಾತಾವರಣ ಮೂಡಿಸಿವೆ. ದೂರದ ಪ್ರದೇಶಗಳಲ್ಲಿ ಇಂತಹ ಘಟನೆಗಳು ನಡೆದಾಗ ಮರುಗುತ್ತಿದ್ದ ಜನರು, ಇದೀಗ ತಮ್ಮ ಸುತ್ತಮುತ್ತಲಿನಲ್ಲೇ ಇಂತಹ ಅಮಾನವೀಯ ಕೃತ್ಯಗಳು ನಡೆಯುತ್ತಿರುವುದರಿಂದ ಆತಂಕಕ್ಕೊಳಗಾಗಿದ್ದಾರೆ.

ಹೆಣ್ಣು ಮಕ್ಕಳ ಸುರಕ್ಷತೆ ಹಾಗೂ ರಕ್ಷಣೆಯ ಕುರಿತ ಕೂಗು ಕೇವಲ ಮಾತಿಗೆ ಸೀಮಿತವಾಗುತ್ತಿದೆ. ದೇಶದಲ್ಲಿ ಮಹಿಳೆಯರು ಅತ್ಯಾಚಾರ, ಕೊಲೆ ಹಾಗೂ ವಿವಿಧ ರೀತಿಯ ದೌರ್ಜನ್ಯಗಳಿಗೆ ಒಳಗಾಗುತ್ತಿರುವ ಘಟನೆಗಳು ನಿರಂತರವಾಗಿ ವರದಿಯಾಗುತ್ತಿವೆ. ಆದರೆ ಅಪರಾಧಿಗಳಿಗೆ ಸೂಕ್ತ ಶಿಕ್ಷೆಯಾಗದಿರುವುದು ಕಳವಳಕಾರಿ ಸಂಗತಿಯಾಗಿದ್ದು, ಇದರಿಂದ ಕಾನೂನಿನ ಭಯ ಕಡಿಮೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಮದ್ಯ ಹಾಗೂ ಮಾದಕ ವ್ಯಸನ, ಮೊಬೈಲ್‌ಗಳಲ್ಲಿ ಸುಲಭವಾಗಿ ಲಭ್ಯವಾಗುತ್ತಿರುವ ಅಶ್ಲೀಲ ವಿಡಿಯೋಗಳು ಇಂತಹ ಅಪರಾಧಗಳಿಗೆ ಕಾರಣವಾಗುವ ಅಂಶಗಳಾಗಿ ಪರಿಣಮಿಸುತ್ತಿವೆ. ಹೆಣ್ಣು ಮಕ್ಕಳನ್ನು ಭೋಗದ ವಸ್ತುವಾಗಿ ನೋಡುವ ಮನೋಭಾವ ಹಾಗೂ ಪುರುಷ ಪ್ರಧಾನ ಧೋರಣೆಯೂ ಮಹಿಳೆಯರ ಮೇಲಿನ ದೌರ್ಜನ್ಯಗಳಿಗೆ ಪ್ರಚೋದನೆ ನೀಡುತ್ತಿದೆ. ಇದರ ಜೊತೆಗೆ ಗ್ರಾಮೀಣ ಪ್ರದೇಶಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟವೂ ಸಾಮಾಜಿಕ ಸಮಸ್ಯೆಗಳಿಗೆ ಮತ್ತಷ್ಟು ಉತ್ತೇಜನ ನೀಡುತ್ತಿದೆ ಎಂದರು.

ಕೂಡಲೇ ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಹಾಗೂ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮನೆ ಅಗೆಯುವ ವೇಳೆ 360 ಪುರಾತನ ತಾಮ್ರದ ನಾಣ್ಯಗಳು ಪತ್ತೆ

ಪ್ರತಿಭಟನೆಯಲ್ಲಿ ಸಂಘಟನೆಗಳ ಮುಖಂಡರಾದ ಚನ್ನಬಸವ ಜಾನೇಕಲ್, ಸರೋಜಾ ಗೋನವಾರ, ಬಸವರಾಜ್, ವಿನೋದ್ ಕುಮಾರ್ ನಂದಗೋಪಾಲ್, ಶಿವಪ್ಪ ಅಸ್ಕಿಹಾಳ್, ಅಭಿಲಾಶ್ ಅಲಬನೂರ್, ಅಶೋಕ್, ನೂರ್ ಪಾಶಾ, ಭಾಗ್ಯ ಶ್ರೀ, ನಯನಾ, ಕೈಸರ್, ಶಾಲಿನಿ, ನರಸಿಂಹ ಮುಂತಾದವರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...