ರಾಯಚೂರು | ಅವ್ಯವಸ್ಥೆಯ ಆಗರವಾದ ವಸತಿ ನಿಲಯ: ಜೀವ ಭಯದಲ್ಲಿ ವಿದ್ಯಾರ್ಥಿಗಳು!

Date:

ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದ್ದು, ವಿದ್ಯಾರ್ಥಿಗಳು ಪ್ರತಿದಿನ ತೊಂದರೆ ಅನುಭವಿಸುವಂತಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕನಿಷ್ಠ ಅಗತ್ಯಗಳ ಬಗ್ಗೆಯೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ವಸತಿ ನಿಲಯದ ಕೊಠಡಿಗಳಲ್ಲಿ ಫ್ಯಾನ್‌ಗಳಿಲ್ಲದೆ ವಿದ್ಯಾರ್ಥಿಗಳು ಬಿಸಿಲಿನ ತಾಪಕ್ಕೆ ತತ್ತರಿಸುತ್ತಿದ್ದಾರೆ. ಇನ್ನೊಂದೆಡೆ, ಕೆಲವು ವಿದ್ಯುತ್ ಸ್ವಿಚ್ ಬೋರ್ಡ್‌ಗಳಲ್ಲಿ ವಿದ್ಯುತ್ ಸೋರಿಕೆಯಾಗುತ್ತಿದೆ ಎನ್ನಲಾಗಿದ್ದು, ಅವುಗಳನ್ನು ಮುಟ್ಟಿದರೆ ವಿದ್ಯುತ್ ಆಘಾತ ಸಂಭವಿಸುವ ಆತಂಕವಿದೆ. ಮಕ್ಕಳ ಜೀವಕ್ಕೆ ಅಪಾಯ ಎದುರಾಗುವ ಸಾಧ್ಯತೆ ಇದ್ದರೂ ದುರಸ್ತಿ ಕಾರ್ಯ ಕೈಗೊಳ್ಳದಿರುವುದು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಹಿಡಿದ ಕನ್ನಡಿಯಾಗಿದೆ.

- Advertisement -

ವಿದ್ಯಾರ್ಥಿಗಳಿಗೆ ಮಲಗಲು ಅಗತ್ಯವಾದ ಹಾಸಿಗೆಗಳ ವ್ಯವಸ್ಥೆಯೂ ಇಲ್ಲ. ಪರಿಣಾಮ, ಅನೇಕ ವಿದ್ಯಾರ್ಥಿಗಳು ಮನೆಯಿಂದಲೇ ಹಾಸಿಗೆ ತಂದುಕೊಂಡು ಮಲಗುವರು. ಸರ್ಕಾರದ ವಸತಿ ನಿಲಯದಲ್ಲಿ ಪ್ರವೇಶ ಪಡೆದರೂ ಕನಿಷ್ಠ ಮಲಗುವ ಸೌಕರ್ಯ ಸಿಗದಿರುವುದು ದುರದೃಷ್ಟ. ಶೌಚಾಲಯಗಳ ಸಮಸ್ಯೆಯೂ ವಿದ್ಯಾರ್ಥಿಗಳನ್ನು ಕಾಡುತ್ತಿದ್ದು, ಸ್ವಚ್ಛತೆ ಮತ್ತು ನೈರ್ಮಲ್ಯದ ಕೊರತೆಯಿಂದ ದಿನನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜರ ಆಳ್ವಿಕೆಯ ವಿರೋಧ ಕೇವಲ ಟ್ರಂಪ್‌ಗೆ ಮಾತ್ರ ಸೀಮಿತವಲ್ಲ

2026ರ ಪರಿಸ್ಥಿತಿ ಭಿನ್ನವಾಗಿದೆ. ಈಗ ಪರಮಾಣು ಅಸ್ತ್ರಗಳು ನಮ್ಮಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರದ ಕೈಯಲ್ಲಿಲ್ಲ. ಬದಲಾಗಿ ಅವು ಲಾಕ್‌ಹೀಡ್, ಬೋಯಿಂಗ್, ಜನರಲ್ ಡೈನಾಮಿಕ್ಸ್‌ನಂತಹ ಖಾಸಗಿ ಕಂಪನಿಗಳ ಸಿಇಒಗಳ ಸಂಪೂರ್ಣ ನಿಯಂತ್ರಣದಲ್ಲಿವೆ... ನಾನು ಬರವಣಿಗೆಯನ್ನೇ ವೃತ್ತಿಯಾಗಿಸಿಕೊಂಡವನು;...

ಬಸವಣ್ಣನವರಿಂದ ಗಾಂಧಿಯವರೆಗೆ: ಆಯ್ದ ಕಥನಗಳ ಮೂಲಕ ಇತಿಹಾಸವನ್ನು ತಿರುಚುವ...

ಇತಿಹಾಸವನ್ನು ವಿಮರ್ಶಿಸುವ ಹಕ್ಕು ಎಲ್ಲರಿಗೂ ಇದೆ; ಆದರೆ ಇತಿಹಾಸವನ್ನು ತಿರುಚುವ ಹಕ್ಕು ಯಾರಿಗೂ ಇಲ್ಲ. ಬಸವಣ್ಣನವರನ್ನು ವೈದಿಕ ಚೌಕಟ್ಟಿಗೆ ಸೀಮಿತಗೊಳಿಸುವುದಾಗಲಿ, ಗಾಂಧಿಯವರ ಹತ್ಯೆಯನ್ನು ಗೋಡ್ಸೆಯ ಸಮರ್ಥನೆಯ ಮೂಲಕ ನ್ಯಾಯೀಕರಿಸುವುದಾಗಲಿ ಇತಿಹಾಸದ ಸಮಗ್ರ ಅಧ್ಯಯನಕ್ಕೆ...

ಕೋಲಾರ ಕ್ಲಾಕ್ ಟವರ್ ವಿವಾದ: ಜಿಲ್ಲಾಡಳಿತದ ನಿರ್ಧಾರದತ್ತ ಜನರ...

ಕೋಲಾರ ನಗರದ ಇತಿಹಾಸ ಪ್ರಸಿದ್ಧ ಕ್ಲಾಕ್‌ ಟವರ್‌ನಲ್ಲಿ ಸಂಸದರ ಅನುದಾನದಲ್ಲಿ ಅಳವಡಿಸಲಾಗುತ್ತಿರುವ ಎಚ್‌ಎಂಟಿ ಗಡಿಯಾರದಲ್ಲಿ ಸಂಸದ ಮಲ್ಲೇಶ್‌ ಬಾಬು ಹೆಸರಿರಬೇಕೋ, ಬೇಡವೋ ಎಂದು ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಚರ್ಚೆ ಈಗ ವಿವಾದದ...

ಒಂದೆಡೆ ವಿದ್ಯುತ್ ಆಘಾತದ ಭೀತಿ, ಮತ್ತೊಂದೆಡೆ ಫ್ಯಾನ್ ಮತ್ತು ಹಾಸಿಗೆಗಳ ಕೊರತೆ, ಇನ್ನೊಂದೆಡೆ ಶೌಚಾಲಯದ ಅವ್ಯವಸ್ಥೆ. ಹೀಗೆ ಹತ್ತಾರು ಸಮಸ್ಯೆಗಳ ನಡುವೆ ವಿದ್ಯಾರ್ಥಿಗಳು ಶಿಕ್ಷಣ ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳಿಗೆ ಸುರಕ್ಷಿತ ವಾತಾವರಣ ಕಲ್ಪಿಸಬೇಕಾದ ವಸತಿ ನಿಲಯವೇ ಆತಂಕದ ತಾಣವಾಗಿರುವುದು ವಿಪರ್ಯಾಸ.

ಈ ಬಗ್ಗೆ ಸ್ಥಳೀಯ ನಿವಾಸಿ ಈದಿನ.ಕಾಮ್‌ ಜೊತೆ ರಂಗಾರೆಡ್ಡಿ ಮಾತನಾಡಿ, “ಬಡ ಮತ್ತು ಹಿಂದುಳಿದ ವರ್ಗಗಳ ಮಕ್ಕಳ ಶಿಕ್ಷಣಕ್ಕೆ ನೆರವಾಗಬೇಕಾದ ಸರ್ಕಾರಿ ವಸತಿ ನಿಲಯದಲ್ಲಿ ಇಂತಹ ದುಸ್ಥಿತಿ ಮುಂದುವರಿದಿರುವುದು ಆಡಳಿತ ವ್ಯವಸ್ಥೆಯ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಅಧಿಕಾರಿಗಳು ದಾಖಲೆಗಳಲ್ಲಿ ಸೌಲಭ್ಯಗಳ ಲೆಕ್ಕ ತೋರಿಸುವುದನ್ನು ಬಿಟ್ಟು, ವಸತಿ ನಿಲಯಕ್ಕೆ ಭೇಟಿ ನೀಡಿ ವಾಸ್ತವ ಸ್ಥಿತಿ ಪರಿಶೀಲಿಸಬೇಕಿದೆ. ಇಂತಹ ಸಮಸ್ಯೆಗಳ ಸುರಿಮಳೆಯಲ್ಲಿಯು ಮಕ್ಕಳು ಕಾಲಕಳೆಯುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ವಸತಿ ನಿಲಯದ ವಿದ್ಯಾರ್ಥಿ ಮಾತನಾಡಿ, “ಇಲ್ಲಿ ಹಲವು ಮೂಲಭೂತ ಸಮಸ್ಯೆಗಳು ತಾಂಡವವಾಡುತ್ತಿವೆ. ಶೌಚಾಲಯ, ವಿದ್ಯುತ್‌, ಆಟದ ಸಾಮಗ್ರಿಗಳು ಸೇರಿದಂತೆ ಅಗತ್ಯ ಸೌಲಭ್ಯಗಳ ಕೊರತೆಯಿದೆ. ಚಳಿಗಾಲದಲ್ಲಿಯೂ ಬಿಸಿನೀರಿನ ವ್ಯವಸ್ಥೆ ಇಲ್ಲದ ಕಾರಣ ತಣ್ಣೀರಿನಲ್ಲಿಯೇ ಸ್ನಾನ ಮಾಡಿಕೊಂಡು ಶಾಲೆಗೆ ತೆರಳಬೇಕಾದ ಅನಿವಾರ್ಯತೆ ಇದೆ” ಎಂದು ಅಳಲು ತೋಡಿಕೊಂಡರು.

“ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ್ಯಾಧ್ಯಕ್ಷ ದುರುಗೇಶ ಬರಗೂರು ಮಾತನಾಡಿ, ಜಿಲ್ಲೆಯ ಸುಮಾರು ವಸತಿ ನಿಲಯಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಈ ಸಮಸ್ಯೆಗಳು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ ಪಾಠ!

ವಸತಿ ನಿಲಯದ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಜನರಲ್‌ ಮ್ಯಾನೇಜರ್‌ ಮಾತನಾಡಿ, ವಸತಿ ನಿಲಯದ ಅಸ್ತವ್ಯಸ್ತ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಳೆಯರು, ಮಕ್ಕಳಲ್ಲಿ ರಕ್ತಹೀನತೆ ಹೆಚ್ಚಳ: ಯೋಜನೆಗಳ ನಿಧಿ ಬಳಕೆ ಬಗ್ಗೆ ಮೋದಿ ಸರ್ಕಾರಕ್ಕೆ ಖರ್ಗೆ ತರಾಟೆ

ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳಲ್ಲಿ ತೀವ್ರ ರಕ್ತಹೀನತೆ (Anaemia) ಮತ್ತು ಅಪೌಷ್ಟಿಕತೆ...

9ನೇ ದಿನಕ್ಕೆ ಕಾಲಿಟ್ಟ ‘ಆಶಾ’ ಅಹೋರಾತ್ರಿ ಧರಣಿ: ಬೇಡಿಕೆಗಳ ಈಡೇರಿಕೆಗೆ ನಟಿ ತಾರಾ, ರಮ್ಯಾ ಒತ್ತಾಯ!

ಬಿಸಿಲು, ಮಳೆ, ಚಳಿಯನ್ನೂ ಲೆಕ್ಕಿಸದೆ ಮನೆಮನೆಗೆ ತೆರಳಿ ಸಾರ್ವಜನಿಕರ ಆರೋಗ್ಯ ಕಾಪಾಡುವ...

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು: ತಪ್ಪಿತಸ್ಥರಿಗೆ 10 ವರ್ಷ ಜೈಲು, 10 ಕೋಟಿ ರೂ. ದಂಡಕ್ಕೆ ಶಿಫಾರಸು!

ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ನೇಮಕಾತಿ ಪರೀಕ್ಷೆಗಳಲ್ಲಿ ಪದೇ ಪದೇ ಕೇಳಿಬರುತ್ತಿರುವ...

ಈ ದಿನ ಸಂಪಾದಕೀಯ | ಹಳಿ ತಪ್ಪಿದ ಕೇಂದ್ರದ ಉದ್ಯಮ ನೀತಿ

ಕೇಂದ್ರ ಸರ್ಕಾರಕ್ಕೆ ಹನ್ನೆರಡು ವರ್ಷದ ಸುದೀರ್ಘ ಅವಧಿಯ ಆಡಳಿತದ ನಂತರ ತನ್ನ...