ರಾಯಚೂರು | ನೀರಿನ ಸಮಸ್ಯೆ; ಬಕೆಟ್ ಹಿಡಿದು ಹಾಸ್ಟೆಲ್ ವಿದ್ಯಾರ್ಥಿಗಳ ಆಕ್ರೋಶ

Date:

ನಗರದ ಯರಮರಸ್ ಬೈಪಾಸ್ ರಸ್ತೆಯಲ್ಲಿರುವ ಹಾಸ್ಟೆಲ್ ವಿದ್ಯಾರ್ಥಿಗಳು ನಿತ್ಯ ನೀರಿನ ಸಮಸ್ಯೆಯಿಂದ ಬೇಸತ್ತು ಸೋಮವಾರ ಬಕೆಟ್ ಗಳನ್ನು ಹಿಡಿದು ಆಕ್ರೋಶ ಹೊರ ಹಾಕಿದ್ದಾರೆ.

- Advertisement -

ಹಾಸ್ಟೆಲ್‌ನಲ್ಲಿ ಕಳೆದ ಕೆಲವು ದಿನಗಳಿಂದ ಸಮರ್ಪಕ ಕುಡಿಯುವ ನೀರು ಹಾಗೂ ದೈನಂದಿನ ಬಳಕೆಯ ನೀರಿನ ಕೊರತೆ ಉಂಟಾಗಿರುವುದರಿಂದ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ನೀರಿನ ಸಮಸ್ಯೆಯಿಂದ ನಿತ್ಯದ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದ್ದು, ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಹಾಸ್ಟೆಲ್ ವಿದ್ಯಾರ್ಥಿಗಳು ಹಾಸ್ಟೆಲ್ ಮುಂದೆ ಬಕೆಟ್‌ಗಳನ್ನು ಹಿಡಿದು ಕೂತು ತಮ್ಮ ಅಸಮಾಧಾನ ಹೊರಹಾಕಿದರು. ತಕ್ಷಣವೇ ಹಾಸ್ಟೆಲ್‌ಗೆ ನಿರಂತರ ನೀರು ಪೂರೈಕೆ ಕಲ್ಪಿಸಿ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಈಜಲು ತೆರಳಿದ್ದ ಐವರು ನಾಪತ್ತೆ; ಶೋಧ ಕಾರ್ಯ ಮುಂದುವರಿಕೆ

ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...