ರಾಯಚೂರು | ಭೂರಹಿತರಿಗೆ ಭೂಮಿ ಮಂಜೂರು ಮಾಡಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ

Date:

ವಸತಿ ಹಾಗೂ ಭೂ ರಹಿತರಿಗೆ ಭೂಮಿ ಮಂಜೂರು ಮಾಡಿ ಹಕ್ಕುಪತ್ರ ನೀಡಬೇಕು, ಅಧಿಕಾರಿಗಳ ಕಿರುಕುಳ ತಡೆಗಟ್ಟಬೇಕು ಎಂದು ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಮೂವರು ಸಂತ್ರಸ್ತರು ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

- Advertisement -

ಪ್ರತಿಭಟನಾಕಾರರು ಮಸ್ಕಿ ತಾಲೂಕಿನ ಹಾಲಾಪುರ ಹೋಬಳಿಯ ಸುಂಕನೂರು ಸೀಮೆಯ ಸರ್ವೆ ನಂ.68 ಮತ್ತು 69ರ ಪಟ್ಟಾ ಜಮೀನಿನಲ್ಲಿ ಪಟ್ಟಾದಾರರಿಗೆ ಕಿರುಕುಳ ನೀಡಿ ಭೂಮಿ ಕಬಳಿಸಲು ಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ವಾರಸುದಾರರಿಗೆ ಪೊಲೀಸ್ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಗೂಗೆಬಾಳ ಸೀಮೆಯ ಸರ್ವೆ ನಂ.32 ಹಾಗೂ ತೋರಣದಿನ್ನಿ ಸೀಮೆಯ ಸರ್ವೆ ನಂ.115 ಮತ್ತು 116ರ ಸರ್ಕಾರಿ ಮಂಜೂರಾತಿ ಜಮೀನುಗಳನ್ನು ಅನಧಿಕೃತ ವ್ಯಕ್ತಿಗಳಿಂದ ತೆರವುಗೊಳಿಸಿ, ಸರ್ವೆ ನಡೆಸಿ ಹದ್ದುಬಸ್ತು ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಅನೇಕ ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ರೈತರ ಮೇಲೆ ಅಧಿಕಾರಿಗಳು ದೌರ್ಜನ್ಯ ಎಸಗುತ್ತಿದ್ದಾರೆ. ಈ ಕುರಿತು ಪೊಲೀಸರ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರಧಾನಮಂತ್ರಿ ಉದ್ಯೋಗ ಸೃಜನ ಕಾರ್ಯಕ್ರಮ (PMEGP) ಯೋಜನೆಯಡಿ ಅರ್ಜಿ ಸಲ್ಲಿಸಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸಾಲ ನೀಡಲು ನಿರಾಕರಿಸುತ್ತಿರುವ ಬ್ಯಾಂಕ್‌ಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರ ಸಾವು: ಮೃತರ ಮನೆಗೆ ಜಿಲ್ಲಾಧಿಕಾರಿ ಭೇಟಿ

ಧರಣಿಯಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಮಾರೆಪ್ಪ ಹರವಿ, ಆಂಜನೇಯ ಕುರುಬದೊಡ್ಡಿ ಬಂಗಾರಿ ನರಸಿಂಹಲು, ಗಂಗಪ್ಪ ತೋರಣದಿನ್ನಿ, ರಾಮಣ್ಣ ಮಸ್ಕಿ ಬಸವರಾಜ ತೋರಣದಿನ್ನಿ ಹಾಗೂ ತಿಮ್ಮಮ್ಮ ಹಿರೇದಿನ್ನಿ ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರ್ಮಿಕ ವಿಚಾರಗಳನ್ನು ರಾಜಕೀಯ ಸಂಘರ್ಷಕ್ಕೆ ಬಳಸಬಾರದು: ಗುರುಪ್ರಸಾದ್ ಕೆರಗೋಡು

ಶಾಂತಿ, ಸೌಹಾರ್ದ ಹಾಗೂ ಸಹಬಾಳ್ವೆಗೆ ಹೆಸರಾಗಿರುವ ತಿರುಮಕೂಡಲು ನರಸೀಪುರ ಪಟ್ಟಣದಲ್ಲಿ ಸಾಮರಸ್ಯ...

ಕಲಬುರಗಿ | ಬರಗಾಲ ಪ್ಯಾಕೇಜ್ 1000 ಕೋಟಿ ರೂ. ಘೋಷಣೆ ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಕೆಪಿಆರ್‌ಎಸ್‌ ಆಗ್ರಹ

ರಾಜ್ಯ ಸರ್ಕಾರ ವಿಶೇಷ ಅಧಿವೇಶನದಲ್ಲಿ ಕಲಬುರಗಿ ಸಂಪೂರ್ಣ ಬರ ಪೀಡಿತ ಪ್ರದೇಶವೆಂದು...

ವಿಶೇಷ ಅಧಿವೇಶನ ರೈತರ ಸಂಕಷ್ಟಕ್ಕೆ ಸ್ಪಂದಿಸದಿದ್ದರೆ ಅರ್ಥಹೀನ: ಬಡಗಲಪುರ ನಾಗೇಂದ್ರ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟಕ್ಕೆ ಸ್ಪಂದಿಸುವಂತಹ...